ಮುರುಡೇಶ್ವರ | ಪೊಲೀಸರ ಮೇಲೆಯೇ ಚಾಕು ದಾಳಿ: ಇಬ್ಬರು ಸಿಬ್ಬಂದಿಗೆ ಗಂಭೀರ ಗಾಯ

Date:

ಮುರುಡೇಶ್ವರ: ಗುಂಪೊಂದು ಜಗಳವಾಡುತ್ತಿರುವ ಬಗ್ಗೆ ಬಂದ ಮಾಹಿತಿ ಆಧರಿಸಿ ಸ್ಥಳಕ್ಕೆ ತೆರಳಿ ಗಲಾಟೆ ಬಿಡಿಸಲು ಮುಂದಾದ ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯ ಮೇಲೆಯೇ ಚಾಕುವಿನಿಂದ ದಾಳಿ ನಡೆಸಿರುವ ಘಟನೆ ಶನಿವಾರ ತಡರಾತ್ರಿ ಮುರುಡೇಶ್ವರದಲ್ಲಿ ನಡೆದಿದೆ.

- Advertisement -

ರಾತ್ರಿ ಸುಮಾರು 11.45ರಿಂದ 12 ಗಂಟೆಯ ವೇಳೆಗೆ ರಾಷ್ಟ್ರೀಯ ಹೆದ್ದಾರಿ 66ರ ಸರ್ವಿಸ್ ರಸ್ತೆಯಲ್ಲಿರುವ ಪ್ರಜಾ ಜ್ಯೂಸ್ ಸೆಂಟರ್ ಎದುರು ಎರಡು ಗುಂಪುಗಳ ನಡುವೆ ಗಲಾಟೆ ನಡೆಯುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಮಾಹಿತಿ ತಿಳಿದು ಕರ್ತವ್ಯದಲ್ಲಿದ್ದ ಹವಾಲ್ದಾರ್ ಸಂಗಪ್ಪ ಹಾಗೂ ಕಾನ್ಸ್‌ಟೇಬಲ್ ವಿನಾಯಕ್ ಶೆಟ್ಟಿ ಸ್ಥಳಕ್ಕೆ ತೆರಳಿ ಗಲಾಟೆ ಬಿಡಿಸಲು ಮುಂದಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

ಈ ವೇಳೆ ರಾಜು ನಾಯ್ಕ, ಪೃಥ್ವಿಕ್ ನಾಯ್ಕ, ಮದನ ನಾಯ್ಕ, ಯೋಗೇಶ ನಾಯ್ಕ, ದರ್ಶನ ಹಾಗೂ ಇತರರು ಗಲಾಟೆಯಲ್ಲಿ ತೊಡಗಿದ್ದರು ಎನ್ನಲಾಗಿದೆ. ಪೊಲೀಸರು ಗಲಾಟೆ ನಿಯಂತ್ರಿಸಲು ಮುಂದಾದಾಗ ಆರೋಪಿಗಳು ಏಕಾಏಕಿ ಪೊಲೀಸರ ಮೇಲೆಯೇ ಚಾಕುವಿನಿಂದ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಹಳಿಯಾಳ | ಗ್ರಾಮಗಳಿಗೆ ತೆರಳಿ ಜನರ ಸಮಸ್ಯೆಗಳಿಗೆ ಸ್ಪಂದಿಸಿ: ಅಧಿಕಾರಿಗಳಿಗೆ ಶಾಸಕ ಆರ್.ವಿ. ದೇಶಪಾಂಡೆ ಸೂಚನೆ

ಚಾಕು ಇರಿತದಿಂದ ಇಬ್ಬರು ಪೊಲೀಸ್ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಲಾಟೆಯಲ್ಲಿ ಗಾಯಗೊಂಡ ಮನೋಜ್ ಎಂಬಾತನಿಗೆ ಮುರುಡೇಶ್ವರ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಆತ ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ನಡೆಸಿದ ಹಾಗೂ ಅಕ್ರಮವಾಗಿ ಗುಂಪುಗೂಡಿದ ಆರೋಪದಡಿ ರಾಜು ನಾಯ್ಕ, ಪೃಥ್ವಿಕ್ ನಾಯ್ಕ, ಮದನ ನಾಯ್ಕ, ಯೋಗೇಶ ನಾಯ್ಕ, ದರ್ಶನ ಸೇರಿದಂತೆ ಇತರರ ವಿರುದ್ಧ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ. ತಲೆಮರೆಸಿಕೊಂಡಿರುವ ಇತರ ಆರೋಪಿಗಳ ಪತ್ತೆಗಾಗಿ ವಿಶೇಷ ಪೊಲೀಸ್ ತಂಡಗಳು ಶೋಧ ಕಾರ್ಯ ಮುಂದುವರಿಸಿವೆ.ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರ | ಪೌರಕಾರ್ಮಿಕರ ಸೇವೆ ಶ್ಲಾಘನೀಯ: ಪೌರಾಯುಕ್ತ ಜಗದೀಶ್ ಹುಲಗಜ್ಜೆ

ಕಾರವಾರ: ನಗರದ ಸ್ವಚ್ಛತೆ ಹಾಗೂ ಸಾರ್ವಜನಿಕರ ಆರೋಗ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಸೇವೆ...

ಗದಗ |  ಹೊಳೆಆಲೂರ-ಇಟಗಿ ಗ್ರಾಮಕ್ಕೆ ಬಸ್ ಚಾಲನೆ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ರೋಣ ವಿಭಾಗದ ಘಟಕದಿಂದ ಹೊಳೆಆಲೂರ-ಇಟಗಿ...

ಗದಗ | ಸಹಕಾರಿ ಸಂಘದ ವಾರ್ಷಿಕ ಸಭೆ

ಗದಗ ಪಟ್ಟಣದಲ್ಲಿ ಕಳೆದ ೨೦ ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಸರಕಾರಿ ಪ್ರೌಢ ಶಾಲಾ...