ಮುರುಡೇಶ್ವರ | ಮಹಾಶಿವರಾತ್ರಿ ಜಾಗರಣೆ ಸಂಭ್ರಮ: ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸಚಿವ ಮಂಕಾಳ ವೈದ್ಯ ಭರವಸೆ

Date:

ಭಟ್ಕಳ: ಪ್ರಸಿದ್ಧ ಪುಣ್ಯಕ್ಷೇತ್ರ ಹಾಗೂ ಪ್ರವಾಸಿ ತಾಣವಾದ ಮುರುಡೇಶ್ವರದ ಸಮಗ್ರ ಅಭಿವೃದ್ಧಿಗೆ ಸರ್ಕಾರವು ವಿಶೇಷ ಯೋಜನೆಯನ್ನು ರೂಪಿಸುತ್ತಿದ್ದು, ಪ್ರವಾಸಿಗರ ಹಿತದೃಷ್ಟಿಯಿಂದ ವ್ಯವಸ್ಥಿತ ಪಾರ್ಕಿಂಗ್ ಮತ್ತು ಒಳಚರಂಡಿ (ಡ್ರೈನೇಜ್) ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಾಂಕಾಳ ಎಸ್. ವೈದ್ಯ ಅವರು ತಿಳಿಸಿದರು.

- Advertisement -

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಮುರುಡೇಶ್ವರದಲ್ಲಿ ಆಯೋಜಿಸಲಾಗಿದ್ದ ‘ಮಹಾಶಿವರಾತ್ರಿ ಜಾಗರಣೆ ಉತ್ಸವ’ ಕಾರ್ಯಕ್ರಮವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಮುರುಡೇಶ್ವರವು ನನ್ನ ಜನ್ಮಭೂಮಿ ಮತ್ತು ಕರ್ಮಭೂಮಿಯಾಗಿದ್ದು, ಇಲ್ಲಿನ ಜನರ ಪ್ರೀತಿಯಿಂದಲೇ ನಾನು ಎತ್ತರಕ್ಕೆ ಬೆಳೆದಿದ್ದೇನೆ. ಜಿಲ್ಲೆಯ ಐತಿಹಾಸಿಕ ಶಿವ ದೇವಾಲಯಗಳಾದ ಮುರುಡೇಶ್ವರ, ಗೋಕರ್ಣ, ಗುಣವಂತೇಶ್ವರ, ಧಾರೇಶ್ವರ ಮತ್ತು ಶೇಜೇಶ್ವರ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ” ಎಂದು ಸಚಿವರು ಭರವಸೆ ನೀಡಿದರು.

ಈ ಬಾರಿ ಭಸ್ಮಾರ್ಚನೆ, ಗೋಮಾತೆ ಪೂಜೆ, ಸಮುದ್ರ ಆರತಿ, ಲಕ್ಷ ಬಿಲ್ವರ್ಚನೆಯಂತಹ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದಾರೆ. ಪ್ರತಿ ವರ್ಷವೂ ಇಲ್ಲಿ ನಿರಂತರವಾಗಿ ಶಿವರಾತ್ರಿ ಕಾರ್ಯಕ್ರಮ ನಡೆಯುವಂತೆ ಮಾಡಲಾಗುವುದು ಹಾಗೂ ಜಿಲ್ಲೆಯಲ್ಲಿ ಶಿಕ್ಷಣದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.

ಇದೇ ಸಂದರ್ಭದಲ್ಲಿ, ಮಾವಳ್ಳಿ 1 ಮತ್ತು 2 ಗ್ರಾಮ ಪಂಚಾಯತ್‌ಗಳನ್ನು ಮುರುಡೇಶ್ವರ ಪಟ್ಟಣ ಪಂಚಾಯತ್ ಆಗಿ ಮೇಲ್ದರ್ಜೆಗೇರಿಸಿದ ಸಚಿವ ಮಾಂಕಾಳ ವೈದ್ಯ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು.

ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ಮಾತನಾಡಿ, ಜಿಲ್ಲೆಯ ಐದು ಪ್ರಮುಖ ಕೇಂದ್ರಗಳಲ್ಲಿ ಶಿವರಾತ್ರಿ ಆಚರಣೆಗೆ ಪೂರಕವಾಗಿ ಭಕ್ತರಿಗೆ ಅಗತ್ಯವಾದ ಮೂಲಭೂತ ಸೌಕರ್ಯ, ಪಾರ್ಕಿಂಗ್ ಹಾಗೂ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಲಾಗಿದೆ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಅಂಚೆ ಸೇವೆಯಲ್ಲಿ ಮಹತ್ವದ ಬದಲಾವಣೆ: ಕಚೇರಿ ಮುಕ್ತಾಯದ ಕೊನೆಯ 30 ನಿಮಿಷಗಳವರೆಗೂ ಬುಕ್ಕಿಂಗ್ ಅವಕಾಶ

ಈ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು ಅತಿಥಿಗಳಾಗಿ ಪಾಲ್ಗೊಂಡು ಕಾರ್ಯಕ್ರಮದ ಮೆರುಗು ಹೆಚ್ಚಿಸಿದರು.ಸತೀಶ್ ನಾಯ್ಕ (ಜಿಲ್ಲಾಧ್ಯಕ್ಷರು, ಗ್ಯಾರಂಟಿ ಯೋಜನೆಗಳ ಪ್ರಾಧಿಕಾರ), ಡಾ. ದಿಲೀಷ್ ಶಶಿ (ಜಿಲ್ಲಾ ಪಂಚಾಯತ್ ಸಿಇಒ), ದೀಪನ್ ಎಂ.ಎನ್. (ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ), ಯೋಗೇಶ್ (ಉಪ ಅರಣ್ಯ ಸಂರಕ್ಷಣಾಧಿಕಾರಿ), ಪ್ರವೀಣ್ ಕರಾಂಡೆ (ಉಪ ವಿಭಾಗಾಧಿಕಾರಿ), ನಾಗೇಂದ್ರ ಕೊಳಶೆಟ್ಟಿ (ತಹಶೀಲ್ದಾರ್) ಮತ್ತು ಗಿರೀಶ್ (ಡಿವೈಎಸ್ಪಿ) ಉಪಸ್ಥಿತರಿದ್ದರು.

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹಿನ್ನೆಲೆ ಗಾಯಕ ಹೇಮಂತ ತಮ್ಮ ತಂಡದೊಂದಿಗೆ ಸಂಗೀತ ಕಾರ್ಯಕ್ರಮ ನೀಡಿದರು. ಬಿಗ್‌ಬಾಸ್ ಖ್ಯಾತಿಯ ನಟಿ ರಕ್ಷಿತಾ ಶೆಟ್ಟಿ, ನಟಿ ರಾಗಿಣಿ ದ್ವಿವೇದಿ, ಜಾನಪದ ಗಾಯಕಿ ಜೋಗಿ ಸುನೀತಾ, ಹಿನ್ನೆಲೆ ಗಾಯಕಿ ಮಾನಸಾ ಹೊಳ್ಳ ಹಾಗೂ ಭರತನಾಟ್ಯ ಕಲಾವಿದೆ ಧನಲಕ್ಷ್ಮೀ ಮೊಗೇರ ಭಾಗವಹಿಸಿದರು.

ಮುರುಡೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಜಯರಾಮ ಅಡಿಗ, ದೇವಸ್ಥಾನ ವ್ಯವಸ್ಥಾಪಕ ಮಂಜುನಾಥ ಶೆಟ್ಟಿ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತು ವಿವಿಧ ಸಂಘಟನೆಗಳ ಪ್ರಮುಖರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...