ಮುರುಘಾ ಪ್ರಕರಣ: ಜಾಮೀನು ಕೋರಿ ಹೈಕೋರ್ಟ್‌ನಲ್ಲಿ ಆರೋಪಿ ಅರ್ಜಿ

Date:

ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಕ್ಸೋ ಕಾಯ್ದೆಯಡಿ ಬಂಧನದಲ್ಲಿರುವ ಶಿವಮೂರ್ತಿ ಮುರುಘಾ ಅವರು ನಿಯಮಿತ ಜಾಮೀನು ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಆರೋಪಿ ಪರವಾಗಿ ವಕೀಲ ಸಂದೀಪ್ ಎಸ್‌ ಪಾಟೀಲ್ ಅರ್ಜಿ ಸಲ್ಲಿಸಿದ್ದಾರೆ. ಆರೋಪಿಯ ಅರ್ಜಿಯು ನ್ಯಾಯಮೂರ್ತಿ ಪಿ.ಎಂ ನವಾಜ್‌ ಅವರ ಪೀಠದ ಮುಂದೆ ನಿಗದಿಯಾಗುವ ಸಾಧ್ಯತೆ ಇದೆ.

ಆರೋಪಿ ಮುರುಘಾ ಅವರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಚಿತ್ರದುರ್ಗದ ಮುರುಘಾ ಮಠದಲ್ಲಿ ವ್ಯಾಸಂಗ ಮಾಡುತ್ತಿದ್ದ ಇಬ್ಬರು ಪ್ರೌಢಶಾಲಾ ವಿದ್ಯಾರ್ಥಿಯರು ಮೈಸೂರಿನಲ್ಲಿ ಕಳೆದ ವರ್ಷ ಆಗಸ್ಟ್‌ 26ರಂದು ದೂರು ದಾಖಲಿಸಿದ್ದರು. ಬಾಲಕಿಯರ ದೂರಿನ ಆಧಾರದ ಮೇಲೆ ಪೋಕ್ಸೋ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸೆಪ್ಟಂಬರ್‌ ತಿಂಗಳಿನಲ್ಲಿ ಆರೋಪಿ ಮುರುಘಾ ಅವರನ್ನು ಬಂಧಿಸಿದ್ದರು. ಸದ್ಯ, ಆರೋಪಿಯು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಈ ಹಿಂದೆಯೂ ಜಾಮೀನು ಕೋರಿ ಚಿತ್ರದುರ್ಗದ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಆರೋಪಿ ಅರ್ಜಿ ಸಲ್ಲಿಸಿದ್ದರು. ಸೆಪ್ಟೆಂಬರ್ 23ರಂದು ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯವು ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.

ಅಂದಿನಿಂದ ಜೈಲಿನಲ್ಲಿಯೇ ಇರುವ ಆರೋಪಿ ಮುರುಘಾ ಅವರು ಇದೀಗ ನಿಯಮಿತ ಜಾಮೀನು ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಹಾಸನ | ಊಟ ಸೇವಿಸಿದ ಬಳಿಕ 35 ಮಂದಿ ಸೈನಿಕರು ಅಸ್ಪಸ್ಥ; ಆಸ್ಪತ್ರೆಗೆ ದಾಖಲು

ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆ–2012, ಭಾರತೀಯ ದಂಡ ಸಂಹಿತೆ–1860, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಮೇಲಿನ ದೌರ್ಜನ್ಯ ತಡೆ ಕಾಯ್ದೆ–1989 ಮತ್ತು ಬಾಲ ನ್ಯಾಯ (ಮಕ್ಕಳ ಸಂರಕ್ಷಣೆ ಹಾಗೂ ಆರೈಕೆ) ಕಾಯ್ದೆ–2015, ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯ್ದೆ-1988ರ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಹಲವು ಪ್ರಕರಣಗಳು ದಾಖಲಾಗಿವೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಪಡಿತರದಲ್ಲಿ ಅಕ್ರಮ; 22 ನ್ಯಾಯಬೆಲೆ ಅಂಗಡಿಗಳ ಅಮಾನತು

ಪಡಿತರ ಮಾರಾಟದಲ್ಲಿ ನಿಗದಿತ ಬೆಲೆಗಿಂತ ಹೆಚ್ಚು ದರ ವಿಧಿಸುವುದು, ಇಲ್ಲವೇ ಬಯೋಮೆಟ್ರಿಕ್‌...

ಪಿಎಚ್‌ಡಿ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ: ತುರ್ತು ವರದಿಗೆ ಬೆಂಗಳೂರು ವಿವಿಗೆ ಹೈಕೋರ್ಟ್‌ ನೋಟಿಸ್‌

ಪಿಎಚ್‌ಡಿ ಪ್ರವೇಶ ಪರೀಕ್ಷೆಯಲ್ಲಿ ಹಲವು ಅಕ್ರಮಗಳು ನಡೆದಿದ್ದ ಹಿನ್ನಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯವನ್ನು...

ಕಂದಾಯ ಕರ್ಮಕಾಂಡ -3 | ಲಂಚವಿಲ್ಲದೆ ಈ ಇಲಾಖೆಯಲ್ಲಿ ಒಂದು ಕಡತವೂ ಚಲಿಸುವುದಿಲ್ಲ!

'ಇತ್ತೀಚಿನ ದಿನಗಳಲ್ಲಿ ಕಂದಾಯ ಇಲಾಖೆಯಲ್ಲಿ ಉನ್ನತ ಶ್ರೇಣಿಯಿಂದ ಕೆಳಹಂತದವರೆಗೆ ಭ್ರಷ್ಟಾಚಾರ ತಾಂಡವವಾಡುತ್ತಿದೆ....

ಏನೇನಕ್ಕೋ ಜೈಲಿಗೆ ಹೋಗ್ತಿರಾ ರಾಜ್ಯದ ಹಿತಕ್ಕಾಗಿ ಜೈಲಿಗೆ ಹೋಗಲು ಆಗಲ್ಲವಾ?: ಮುಖ್ಯಮಂತ್ರಿ ಚಂದ್ರು

"ಮೇಕೆದಾಟು ಯೋಜನೆ ಜಾರಿಗೆ ಹೋರಾಟ ಮಾಡಿ ಅಧಿಕಾರಕ್ಕೆ ಬಂದಿದ್ದೀರಲ್ಲಾ ಏನು ಕಡಿದು...