ಮುಸ್ಲಿಮರ ಮತದಾನದ ಹಕ್ಕನ್ನು ಕಸಿಯಬೇಕೆಂದ ಸ್ವಾಮೀಜಿ – ಮುಸ್ಲಿಂ ಬಾಂಧವ್ಯ ವೇದಿಕೆ ಖಂಡನೆ

Date:

ಮುಸ್ಲಿಂ ಸಮುದಾಯದ ಮತದಾನದ ಹಕ್ಕನ್ನು ಕಸಿಯಬೇಕೆಂದು ಇತ್ತೀಚಿಗೆ ಹೇಳಿಕೆ ನೀಡಿದ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಹೇಳಿಕೆಯನ್ನು ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕ ಸಂಘಟನೆ ಖಂಡಿಸಿದೆ.” ಶತಮಾನಗಳಿಂದ ಕರ್ನಾಟಕದ ಮುಸ್ಲಿಮರು ಒಕ್ಕಲಿಗ ಸಮುದಾಯದ ಮಠಗಳೊಂದಿಗೆ ನಿಕಟ ಬಾಂಧವ್ಯವನ್ನು ಹೊಂದಿದ್ದಾರೆ. ನಿರಂತರವಾದ ರಾಜಕೀಯ ಮತ್ತು ಸಾಮಾಜಿಕ ಭಾಗೀದಾರಿಕೆಗಳನ್ನು ಮುಸ್ಲಿಮರು ಮತ್ತು ಒಕ್ಕಲಿಗರು ಇಂದಿಗೂ ಜೊತೆಯಾಗಿ ನಿಭಾಯಿಸುತ್ತಿದ್ದಾರೆ. ದೇಶ ಮತ್ತು ರಾಜ್ಯ ರಾಜಕಾರಣದಲ್ಲಿ ಒಕ್ಕಲಿಗ ಹಾಗೂ ಮುಸ್ಲಿಂ ಸಮುದಾಯದ ನಡುವಿನ ಬಾಂಧವ್ಯದ ಫಲಶ್ರುತಿಯಾಗಿ ಒಕ್ಕಲಿಗ ಸಮುದಾಯವು ಪ್ರಧಾನಮಂತ್ರಿ, ಮುಖ್ಯಮಂತ್ರಿ ಸೇರಿದಂತೆ ಹಲವು ಉನ್ನತ ಪೀಠಗಳನ್ನು ಅಲಂಕರಿಸಿ ತುಲನಾತ್ಮಕವಾಗಿ ಹೆಚ್ಚು ಫಲಾನುಭವಿಯಾಗಿದೆ.

- Advertisement -

ಎರಡು ಸಮುದಾಯಗಳ ನಡುವಿನ ರಾಜಕೀಯ ಸಾಮಾಜಿಕ ಸಂಬಂಧಗಳು ಅಂದೂ ಇತ್ತು, ಇಂದೂ ಇದೆ. ಇಷ್ಟು ಗಾಢವಾಗಿರುವ ಸಮುದಾಯಗಳ ನಡುವಿನ ಸಂಬಂಧಕ್ಕೆ ಕಪ್ಪುಚುಕ್ಕೆ ಎನ್ನುವಂತೆ, ಕೆಂಗೇರಿಯ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮಿಯವರು ಸಭೆಯೊಂದರಲ್ಲಿ ಮಾತನಾಡಿ, ಮುಸ್ಲಿಮರ ಮತದಾನದ ಹಕ್ಕನ್ನು ಕಸಿಯಬೇಕೆಂಬ ಆಘಾತಕಾರಿ ಹೇಳಿಕೆ ಸಾರ್ವಜನಿಕವಾಗಿ ನೀಡಿರುವುದು ಖಂಡನಾರ್ಹವಾಗಿದೆ ” ಎಂದು ವೇದಿಕೆಯ ಅಧ್ಯಕ್ಷ ಸೊಹೈಲ್ ಅಹಮದ್ ಮರೂರ್, ಕಾರ್ಯದರ್ಶಿ ಡಾ. ಹಕೀಮ್ ತೀರ್ಥಹಳ್ಳಿ ಪತ್ರಿಕಾ ಹೇಳಿಕೆಯನ್ನು ಹೊರಡಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...