ಕಾರ್ಕಳ ಯುವತಿಯ ಅತ್ಯಾಚಾರ ಪ್ರಕರಣ: ಆರೋಪಿ ಅಲ್ತಾಫ್‌ಗೆ ಕಠಿಣ ಶಿಕ್ಷೆ ವಿಧಿಸಲು ಮುಸ್ಲಿಂ ಮುಖಂಡರ ಆಗ್ರಹ

Date:

Advertisements

ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಹಿಂದೂ ಯುವತಿಯ ಅತ್ಯಾಚಾರ ಘಟನೆಯ ಮಾನವ ಸಮುದಾಯದ ಮೇಲೆ ನಡೆದಂತಹ ಅತ್ಯಾಚಾರ. ಇದನ್ನು ಖಂಡಿತವಾಗಿಯೂ ಸಹಿಸಲು ಸಾಧ್ಯವಿಲ್ಲ. ಯುವತಿಯನ್ನು ಪುಸಲಾಯಿಸಿ ಕರೆದೊಯ್ದು ಮಾದಕ ದ್ರವ್ಯ ನೀಡಿ ಅತ್ಯಾಚಾರ ಎಸಗಿರುವುದು ಖಂಡನೀಯ ಎಂದು ಮುಸ್ಲಿಂ ಮುಖಂಡ ಮೊಹಮ್ಮದ್ ಶರೀಫ್ ಹೇಳಿದರು.

ಕಾರ್ಕಳದ ಮುಸ್ಲಿಂ ಸಮುದಾಯದ ಪರವಾಗಿ ಕಾರ್ಕಳದ ಪ್ರಕಾಶ್ ಹೊಟೇಲ್‌ನಲ್ಲಿ ಶನಿವಾರ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

“ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಆರೋಪಿ ಅಲ್ತಾಫ್ ಬಂಧನವಾಗಿದೆ. ಇಂತಹ ಅಮಾನವೀಯ ಕೃತ್ಯಕ್ಕೆ ನಾಗರಿಕ ಸಮುದಾಯ ಹೊಣೆಗಾರರಲ್ಲ. ಅಲ್ತಾಫ್ ಓರ್ವ ನಾಮಧಾರಿ ಮುಸ್ಲಿಂ, ಜೀವನದಲ್ಲಿ ಯಾವತ್ತೂ ಮಸೀದಿ ಬಾಗಿಲು ನೋಡಿದವನಲ್ಲ. ಆರೋಪಿ ಅಲ್ತಾಫ್‌ನಿಗೆ ಸೂಕ್ತ ಕಾನೂನಿನ ಕಠಿಣ ಶಿಕ್ಷೆಯಾಗಬೇಕು” ಎಂದು ಆಗ್ರಹಿಸಿದರು.

Advertisements

ಕಾರ್ಕಳದಲ್ಲಿ ಹಿಂದೂ-ಮುಸ್ಲಿಂ ಭೇದ-ಭಾವವಿಲ್ಲದೆ ಸೌಹಾರ್ದತೆಯ ಜೀವನ ನಡೆಸುತ್ತಿದ್ದೇವೆ. ನಾಮಧಾರಿ ಮುಸ್ಲಿಮನಿಂದ ಇಡೀ ಮುಸ್ಲಿಂ ಸಮುದಾಯಕ್ಕೆ ಕಳಂಕವಾಗಿದೆ. ಮುಸ್ಲಿಂ ಸಮುದಾಯ ಎಂದಿಗೂ ಆತನಿಗೆ ಬೆಂಬಲಿಸುವುದಿಲ್ಲ. ಆತನನ್ನು ಬಹಿಷ್ಕರಿಸುವ ಬಗ್ಗೆ ಅಭಿಪ್ರಾಯವಾಗಿದೆ ಎಂದರು.

WhatsApp Image 2024 08 24 at 11.18.18 AM
ಆರೋಪಿ ಅಲ್ತಾಫ್

ಆರೋಪಿ ಈ ಹಿಂದೆ ಹಲವಾರು ಇಂಥದೇ ಪ್ರಕರಣಗಳಲ್ಲಿ ಭಾಗಿಯಾಗಿ ಸಾರ್ವಜನಿಕರಿಂದ ಗೂಸಾ ತಿಂದರೂ ಬುದ್ಧಿ ಕಲಿತಿಲ್ಲ. ಮಾತ್ರವಲ್ಲದೆ ಈ ಅತ್ಯಾಚಾರ ಪ್ರಕರಣದಲ್ಲಿ ಡ್ರಗ್ ಮಾಫಿಯಾಗಳ ಪಾತ್ರ ಎದ್ದು ಕಾಣುತ್ತಿದೆ. ಜಿಲ್ಲೆಯಾದ್ಯಂತ ವ್ಯಾಪಕವಾಗಿ ಕಾರ್ಯಾಚರಿಸುತ್ತಿರುವ ಡ್ರಗ್ ಮಾಫಿಯಾವನ್ನು ಹತ್ತಿಕ್ಕುವ ಕಾರ್ಯವನ್ನು ಪೊಲೀಸ್ ಇಲಾಖೆ ಮಾಡಬೇಕಿದೆ. ಇದಕ್ಕೆ ಪೂರ್ಣ ಪ್ರಮಾಣದ ಸಹಕಾರವನ್ನು ಮುಸ್ಲಿಂ ಸಮುದಾಯದಿಂದ ಸಿಗಲಿದೆ ಎಂದರು.

ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಪೊಲೀಸರ ಕಾರ್ಯ ಶ್ಲಾಘನೀಯ. ಕೇವಲ ಒಂದೇ ಗಂಟೆಯಲ್ಲಿ ಆರೋಪಿಯನ್ನು ಪತ್ತೆ ಹಚ್ಚಿದ್ದು, ಆರೋಪಿಗಳ ಪರವಾಗಿ ಯಾವುದೇ ನ್ಯಾಯವಾದಿಗಳು ವಾದಿಸದಂತೆ ಅವರು ವಿನಂತಿಸುವುದರ ಜೊತೆಗೆ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.

ಇದನ್ನು ಓದಿದ್ದೀರಾ? ಉಡುಪಿ | ಅಮಲು ಪದಾರ್ಥ ನೀಡಿ ಯುವತಿಯ ಅತ್ಯಾಚಾರ ಆರೋಪ: ಇಬ್ಬರ ಬಂಧನ

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಕಾರ್ಕಳ ಅಧ್ಯಕ್ಷ ಮೊಹಮ್ಮದ್ ಗೌಸ್, ಕಾರ್ಕಳ ಮುಸ್ಲಿಂ ಜಮಾತ್ ಅಧ್ಯಕ್ಷ ಅಶ್ಫಾಕ್ ಅಹಮದ್, ಕರ್ನಾಟಕ ಮುಸ್ಲಿಂ ಜಮಾತ್ ಕಾರ್ಕಳ ಅಧ್ಯಕ್ಷ ನಾಸಿರ್ ಶೇಖ್, ಕಾರ್ಕಳ ಮುಸ್ಲಿಂ ಫೆಡರೇಷನ್ ಅಧ್ಯಕ್ಷ ಶಬ್ಬೀರ್ ಅಹಮದ್ , ಕಾರ್ಕಳ ರೋಟರಿ ಕ್ಲಬ್ ಅಧ್ಯಕ್ಷ ಇಕ್ಬಾಲ್ ಅಹಮದ್, ಜೆಸಿಸ್ ವಲಯ ಚೇರ್ಮನ್ ಸಮದ್ ಖಾನ್, ಸೇವಾದಳ ಕಾರ್ಕಳ ಅಧ್ಯಕ್ಷ ಅಬ್ದುಲ್ಲಾ ಶೇಖ್ ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X