ಚಿಕ್ಕಬಳ್ಳಾಪುರ | ಅಲಿಪುರ ಗ್ರಾಮದಲ್ಲಿ ಅದ್ದೂರಿ ಮೊಹರಂ ಆಚರಣೆ

Date:

ಚಿಕ್ಕಬಳ್ಳಾಪುರ ಜಿಲ್ಲೆಯ ಅಲಿಪುರ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಅದ್ದೂರಿಯಾಗಿ ಮೊಹರಂ ಆಚರಿಸಲಾಯಿತು.
ಗ್ರಾಮದ ಆಸ್ತಾನಾ ಹುಸೈನಿ ಬಳಿ ಸುಮಾರು ಹತ್ತು ಸಾವಿರ ಜನ ಜಮಾವಣೆಗೊಂಡು ಧರ್ಮ ಗುರುಗಳ ಭಾಷಣ ಮುಕ್ತಾಯವಾದ ನಂತರ ಮುಸ್ತಫಾ ಸರ್ಕಲ್ ವರವಿಗೂ ಮೆರವಣಿಗೆ ನಡೆಸಿದರು.

- Advertisement -

ಮೊಹರಂ ಹಬ್ಬ ಮುಸ್ಲಿಮರಿಗೆ ದುಃಖವನ್ನು ಸೂಚಿಸುವ ಹಾಗೂ ಶೋಕಾಚರಣೆಯ ಹಬ್ಬ. ಇಸ್ಲಾಮಿಕ್ ಕ್ಯಾಲೆಂಡರ್ ಪ್ರಕಾರ ಮೊದಲ ತಿಂಗಳಾದ ಹಾಗೂ ಹೊಸ ಇಸ್ಲಾಮಿಕ್‌ ವರ್ಷದ ಆರಂಭವನ್ನು ಸೂಚಿಸುವ ಮೊಹರಂ ತಿಂಗಳಲ್ಲಿ ಆಚರಿಸುವ ಪವಿತ್ರ ಮೊಹರಂ ಹಬ್ಬವನ್ನು ದುಃಖದ ಹಬ್ಬ, ಕಣ್ಣೀರಿನ ಹಬ್ಬವಾಗಿ ಮುಸ್ಲಿಮರು ಆಚರಿಸುತ್ತಾರೆ. ಈ ತಿಂಗಳಲ್ಲಿ ಮುಸ್ಲಿಮರು ಧಾರ್ಮಿಕ ಚಟುವಟಿಕೆಗಳಲ್ಲಿ ಹೆಚ್ಚಾಗಿ ತೊಡಗಿಕೊಳ್ಳುತ್ತಾರೆ. ಮೊಹರಂ ಹಿಂದೂ-ಮುಸ್ಲಿಂರ ಭಾವೈಕ್ಯತೆ ಸಾರುವ ಹಬ್ಬ. ಈ ಹಬ್ಬದಲ್ಲಿ ಯಾವುದೇ ತಾರತಮ್ಯವಿಲ್ಲದೇ, ಸರ್ವಧರ್ಮೀಯರು ಪಾಲ್ಗೊಂಡು ಹಬ್ಬವನ್ನು ಆಚರಿಸುತ್ತಾರೆ. ಹತ್ತು ದಿನಗಳವರೆಗೆ ಮೊಹರಂ ಆಚರಣೆ ಮಾಡಲಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಮೆರವಣಿಗೆಯಲ್ಲಿ ಚಿಕ್ಕ ಮಕ್ಕಳಿಂದ ಹಿಡಿದು ಯುವಕರು ವೃದ್ಧರು ಭಾಗವಹಿಸಿ ಎದೆ ಬರೆದುಕೊಂಡು ರಕ್ತ ಸುರಿಸಿ ಶೋಕಾಚರಣೆ ಮಾಡಿದರು. ಗ್ರಾಮದಲ್ಲಿ ಸುಮಾರು 300 ವರ್ಷ ಗಳಿಂದ ಶೋಕಾಚರಣೆಯ ಮೊಹರಂ ಆಚರಣೆ ಮಾಡಲಾಗುತ್ತಿದ್ದು,ಈ ಪದ್ಧತಿ ಈಗಲೂ ಸಹ ಜಾರಿಯಲ್ಲಿದೆ.

WhatsApp Image 2025 07 04 at 9.07.18 AM

ಸುಮಾರು ನಾಲ್ಕು ತಾಸು ನಡೆದ ಮೆರವಣಿಗೆಯಲ್ಲಿ ಮಕ್ಕಳು, ಯುವಕರು ಮತ್ತು ವೃದ್ಧರು ದೇಹದಂಡನೆ ಮಾಡಿಕೊಂಡರು. ‘ಆಲಿ ದೂಲಾ’ ಎಂದು ಕೂಗುತ್ತಾ ದಾರಕ್ಕೆ ಕಟ್ಟಿದ್ದ ಬ್ಲೇಡ್‌ಗಳ ಗೊಂಚಲನ್ನು ಜನರು ತಮ್ಮ ಎದೆಗೆ ಹಾಗೂ ಬೆನ್ನಿಗೆ ಬಡಿದುಕೊಂಡರು. ಆಗ ಅವರ ದೇಹದಿಂದ ರಕ್ತ ಚಿಮ್ಮುತ್ತಿತ್ತು. ಬಹುತೇಕರು ಎದೆಗೆ ಕೈಗಳಿಂದ ಬಡಿದುಕೊಂಡು ಶೋಕ ಗೀತೆಗಳನ್ನು ಹಾಡಿದರು.

ಇದನ್ನೂ ಓದಿ: ಚಿಕ್ಕಬಳ್ಳಾಪುರ | ʼಬಯಲು ಸೀಮೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಿʼ

ಈ ಸಂದರ್ಭದಲ್ಲಿ ಅಂಜುಮನ್ ಜಾಫರಿಯ್ ಅಧ್ಯಕ್ಷ ಅಲಿ ಅಬ್ಬಾಸ್, ಕಾರ್ಯದರ್ಶಿ ಫಾಝಿಲ್ ರಜಾ, ಗ್ರಾಮ ಪಂಚಾಯತಿ ಬಕರ್ ರಜಾ, ಸೈಯದ್ ನಾಥಿಕ್ ಅಲಿ, ಸೈಯದ್ ನಸೀಹ್ ರಜಾ, ಪ್ರಧಾನ ಮಂತ್ರಿ 14 ನೇ ಸಮಿತಿಯ ಸದಸ್ಯ ಸಾಖಿ ಅಹ್ಮದ್, ಅಲಬಾಲ್ಗ್ ಫೌಂಡೇಶನ್ ಹಾಗೂ ಮೊಹರಂ ಕಮಿಟಿಯ ಪದಾಧಿಕಾರಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...

ಬಾಗಲಕೋಟೆ | ಪ್ರಜಾಪ್ರಭುತ್ವದ ಕರಾಳ ದಿನ: ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ರಕ್ಷಣೆಯ ಸಂಕಲ್ಪದೊಂದಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ...

ಉಡುಪಿ | ಫಾರಂ-7 ಅರ್ಜಿಗಳ ದುರುಪಯೋಗಕ್ಕೆ ಕಡಿವಾಣ ಹಾಕಿ: ಕಥೊಲಿಕ್ ಸಭಾ ಆಗ್ರಹ

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಫಾರಂ-7 ಅರ್ಜಿಗಳ ದುರುಪಯೋಗ...

ವಿಜಯಪುರ | ಕೆ-ಸೆಟ್ ಪರೀಕ್ಷೆ ಪಾರದರ್ಶಕತೆಗೆ ಕಟ್ಟುನಿಟ್ಟಿನ ಕ್ರಮ: ಡಾ. ಔದ್ರಾಮ

ಅ. 11ರಂದು ನಡೆಯಲಿರುವ ಕೆ-ಸೆಟ್ ಪರೀಕ್ಷೆಯನ್ನು ಪಾರದರ್ಶಕ ಹಾಗೂ ಅಚ್ಚುಕಟ್ಟಾಗಿ ನಡೆಸಲು...