ವಿಜಯಪುರದಲ್ಲಿ ಏಮ್ಸ್‌ ಸ್ಥಾಪನೆಯೇ ನನ್ನ ಗುರಿ: ಸಚಿವ ಶಿವಾನಂದ ಪಾಟೀಲ

Date:

ವಿಜಯಪುರ ಜಿಲ್ಲೆಯಲ್ಲಿ ಅಖಿಲ ಭಾರತ ವೈದ್ಯ ವಿಜ್ಞಾನಗಳ ಕಾಲೇಜು (ಏಮ್ಸ್) ಸ್ಥಾಪನೆಯೇ ನನ್ನ ಗುರಿ. ಇದಕ್ಕಾಗಿ ಸರ್ಕಾರದ ಮೇಲೆ ಒತ್ತಡ ಹೇರುವುದಾಗಿ ಸಚಿವ ಶಿವಾನಂದ ಪಾಟೀಲ ಹೇಳಿದರು.

- Advertisement -

ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನಗೆಗಾಗಿ ಹೋರಾಟ ಸಮಿತಿ ನಿಯೋಗ ಸಚಿವರನ್ನು ನಗರದಲ್ಲಿ ಭೇಟಿ ಮಾಡಿ, ಜಿಲ್ಲೆಗೆ ರಾಜ್ಯ ಸರ್ಕಾರ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸುವ ಘೋಷಣೆ ವಿರೋಧಿಸಿ ಮನವಿ ಸಲ್ಲಿಸಿತು. ರಾಜ್ಯ ಸರ್ಕಾರದ ಉದ್ದೇಶಿತ ಖಾಸಗಿ ಸಹಭಾಗಿತ್ವದ (ಪಿಪಿಪಿ) ಮಾದರಿ ವೈದ್ಯಕೀಯ ಕಾಲೇಜು ಆರಂಭಿಸುವುದಕ್ಕೆ ನಮ್ಮ ವಿರೋಧವಿದೆ. ಸರ್ಕಾರ ಖಾಸಗಿ ಸಹಭಾಗಿತ್ವದ ಉದ್ದೇಶದಿಂದ ಹಿಂದೆ ಸರಿಯಬೇಕು. ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸುವ ಕುರಿತು ಸಿಎಂ ಸಿದ್ದರಾಮಯ್ಯ ಅವರ ಮೇಲೆ ಮೇಲೆ ಒತ್ತಡ ತರುವಂತೆ ನಿಯೋಗದ ಪ್ರಮುಖರು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಹೋರಾಟಗಾರರ ಮನವಿ ಸ್ವೀಕರಿಸಿ ಮಾತನಾಡಿದ ಸಚಿವರು, “ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜು ಆರಂಭಿಸುವ ವಿಷಯದಲ್ಲಿ ನಾನೂ ಬಹಿರಂಗವಾಗಿ ವಿರೋಧಿಸಿದ್ದೇನೆ. ವಿಜಯಪುರದಲ್ಲಿ ಸರ್ಕಾರಿ ಕಾಲೇಜು ಸ್ಥಾಪಿಸವಂತೆ 2022ರಲ್ಲೇ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೇನೆ. ಇದೀಗ ಸರ್ಕಾರ ಘೋಷಿಸಿರುವ ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜಿನ ಬದಲಾಗಿ ಅಖಿಲ ಭಾರತ ವೈದ್ಯ ವಿಜ್ಞಾನಗಳ ಕಾಲೇಜು (ಏಮ್ಸ್) ಸ್ಥಾಪಿಸುವಂತೆ ಸರ್ಕಾರದ ಮೇಲೆ ಒತ್ತಡ ತರುವ ಅಗತ್ಯವಿದೆ ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸುವ ಉದ್ದೇಶದಿಂದಲೇ ನಾನು ಆರೋಗ್ಯ ಸಚಿವನಾಗಿದ್ದಾಗ ಅಗತ್ಯ ಮೂಲ ಸಂಪನ್ಮೂಲ ಕಲ್ಪಿಸಲು ಮುಂದಾಗಿದ್ದೆ. ಸರ್ಕಾರಿ ಆಸ್ಪತ್ರೆಯಲ್ಲಿ 150 ಎಕರೆಗೂ ಮೀರಿದ ಜಮೀನಿದೆ. 100 ಹಾಸಿಗೆಗಳ ಟ್ರಾಮಾ ಸೆಂಟರ್‌ಮಂಜೂರಾಗಿದೆ. ಕಾರಣ ಇದೇ ವಿಷಯವಾಗಿ ನಾನು ಜಿಲ್ಲೆಯ ಜನರೊಂದಿಗೆ ಇರಲಿದ್ದೇನೆ” ಎಂದು ಹೋರಾಟಗಾರರ ನಿಯೋಗಕ್ಕೆ ಭರವಸೆ ನೀಡಿದರು.

ಇದನ್ನೂ ಓದಿ: ವಿಜಯಪುರ | ‘ಒಳಮೀಸಲಾತಿ ಜಾರಿಗೊಳಿಸಿದ ಸರ್ಕಾರದ ನಡೆ ಸ್ವಾಗತಾರ್ಹ’

ನಿಯೋಗದಲ್ಲಿ ಹೋರಾಟ ಸಮಿತಿಯ ಸಂಚಾಲಕ ಸಮಿತಿಯ ಬಿ.ಭಗವಾನರೆಡ್ಡಿ, ಅರವಿಂದ ಕುಲಕರ್ಣಿ, ನಾಸಿರ್, ಮಲ್ಲಿಕಾರ್ಜುನ ಕೆಂಗನಾಳ, ಎಚ್.ಗೀತಾ, ಎಚ್.ಟಿ.ಭರತಕುಮಾರ, ಬಾಬುರಾವ, ಫಯಾಜ್ ಕಲಾದಗಿ, ಸಿದ್ದಲಿಂಗ ಬಾಗೇವಾಡಿ, ಸಿದ್ದರಾಮ ಹಿರೇಮಠ, ಶ್ರೀಕಾಂತ, ಲಲಿತಾ ಬಿಜ್ಜರಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...