ಮೈಸೂರು | ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹಿಸಿ ಎಐಡಿಎಸ್ಓ ಪ್ರತಿಭಟನೆ

Date:

Advertisements

ಕಳೆದ ಮೂರು ವರ್ಷಗಳಿಂದ ಬಾಕಿ ಉಳಿಸಿಕೊಂಡಿರುವ ರಾಜ್ಯದ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನವನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಎಐಡಿಎಸ್ಒ ಪ್ರತಿಭಟನೆ ನಡೆಸಿತು.

ಎಐಡಿಎಸ್ಓ ಜಿಲ್ಲಾ ಕಾರ್ಯದರ್ಶಿ ನಿತಿನ್ ಮಾತನಾಡಿ, “ಕಳೆದ ಮೂರು ವರ್ಷಗಳಿಂದ ರಾಜ್ಯದ ವಿದ್ಯಾರ್ಥಿಗಳಿಗೆ ಸರಿಯಾಗಿ ವಿದ್ಯಾರ್ಥಿ ವೇತನ ಲಭ್ಯವಾಗುತ್ತಿಲ್ಲ. ಬಹುತೇಕ ವಿದ್ಯಾರ್ಥಿಗಳು ಸರ್ಕಾರದಿಂದ ದೊರೆಯುವ ವಿದ್ಯಾರ್ಥಿ ವೇತನದ ಮೇಲೆ ಅವಲಂಬಿತರಾಗಿಯೇ ಪದವಿ ಹಾಗೂ ಉನ್ನತ ಶಿಕ್ಷಣವನ್ನು ಪ್ರವೇಶಿಸುವ ಸಾಹಸಕ್ಕೆ ಮುಂದಾಗುತ್ತಾರೆ. ಇಲ್ಲವಾದಲ್ಲಿ ಶಿಕ್ಷಣವನ್ನು ತೊರೆಯುತ್ತಾರೆ. ಶಿಕ್ಷಣದ ವ್ಯಾಪಾರೀಕರಣವು ಈಗಾಗಲೇ ಬಡ ವಿದ್ಯಾರ್ಥಿಗಳ ಶಿಕ್ಷಣದ ಕನಸುಗಳನ್ನು ಸೀಮಿತ ಗೊಳಿಸುತ್ತಿದೆ. ಹೀಗಿರುವಾಗ ವಿದ್ಯಾರ್ಥಿ ವೇತನವನ್ನು ಕಡಿತಗೊಳಿಸುತ್ತಿರುವುದು ಶಿಕ್ಷಣ ವಿರೋಧಿ ಹಾಗೂ ವಿದ್ಯಾರ್ಥಿ ವಿರೋಧಿ ನಡೆಯಾಗಿದೆ. ತಾನು ಬಡ ಜನರ ಪರ ಎಂದು ಹೇಳಿಕೊಳ್ಳುವ ರಾಜ್ಯ ಕಾಂಗ್ರೆಸ್ ಸರ್ಕಾರ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನವನ್ನು ಕೂಡ ಕಡಿತಗೊಳಿಸಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಉಪಾಧ್ಯಕ್ಷೆ ಸ್ವಾತಿ ಮಾತನಾಡಿ, “ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆಯು ಕಳೆದ ಒಂದು ತಿಂಗಳಿಂದ ರಾಜ್ಯಾದ್ಯಂತ ವಿದ್ಯಾರ್ಥಿ ವೇತನ ಕುರಿತಾಗಿ ಸಮೀಕ್ಷೆ ನಡೆಸಿದಾಗ ತಿಳಿದು ಬಂದಿರುವ ಆಘಾತಕಾರಿ ವಿಷಯವೇನೆಂದರೆ, ಪದವಿ, ಸ್ನಾತಕೋತ್ತರ ಇಂಜಿನಿಯರಿಂಗ್ ಮತ್ತು ಮೆಡಿಕಲ್ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ದೊರೆತಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ 2022ರಲ್ಲಿ ಸುಮಾರು ಶೇ. 40 ವಿದ್ಯಾರ್ಥಿಗಳಿಗೆ, 2023 ರಲ್ಲಿ ಶೇ. 65 ವಿದ್ಯಾರ್ಥಿಗಳಿಗೆ, 2024 ರಲ್ಲಿ ಶೇಕಡ. 95 ರಷ್ಟು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಂದಿಲ್ಲದೆ ಇರುವುದು ಶೋಚನೀಯ. ರಾಜ್ಯದಲ್ಲಿ ಒಟ್ಟು 4,90,372 ವಿದ್ಯಾರ್ಥಿಗಳಿದ್ದು, ಅದರಲ್ಲಿ ಮೈಸೂರು ಜಿಲ್ಲೆಯ 37,482 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಂದಿಲ್ಲ. ಜನರ ತೆರಿಗೆಯನ್ನು ಶಿಕ್ಷಣಕ್ಕೆ ಆದ್ಯತೆ ನೀಡಿ ವಿನಿಯೋಗಿಸದೆ ಸರ್ಕಾರವು ಜನರನ್ನು ವಂಚಿಸಿದೆ. ವಿದ್ಯಾರ್ಥಿ ವೇತನವು ಸರ್ಕಾರಗಳು ಕೊಡುವ ಭಿಕ್ಷೆ ಅಲ್ಲ ಬದಲಿಗೆ ವಿದ್ಯಾರ್ಥಿಗಳ ಹಕ್ಕಾಗಿದೆ. ಸರ್ಕಾರದ ಈ ವಂಚನೆಯ ವಿರುದ್ಧ ಧ್ವನಿ ಎತ್ತಲು ಎಐಡಿಎಸ್‌ಒ ಕರ್ನಾಟಕ ರಾಜ್ಯ ಸಮಿತಿಯು ಮಾರ್ಚ್ 1, 2025ರಂದು ಬೆಂಗಳೂರಿನಲ್ಲಿ ‘ವಿದ್ಯಾರ್ಥಿವೇತನ ಉಳಿಸಿ’ ಪ್ರತಿಭಟನೆಗೆ ಕರೆ ನೀಡಿದೆ” ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಮೈಸೂರು | ‘ ಜಾಗೃತ ಕರ್ನಾಟಕ ‘ ರಾಜಕೀಯ ಸಂಘಟನೆಗೆ ಮೈಸೂರಿನಲ್ಲಿ ಚಾಲನೆ

ಪ್ರತಿಭಟನೆಯಲ್ಲಿ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯೆ ಹೇಮಾ, ಜಿಲ್ಲಾಧ್ಯಕ್ಷೆ ಚಂದ್ರಕಲಾ, ಜಿಲ್ಲಾ ಪದಾಧಿಕಾರಿಗಳಾದ ಚಂದನ, ಚಂದ್ರಿಕಾ, ದಿಶ, ಅಂಜಲಿ, ನಂದೀಶ್, ಅಭಿಷೇಕ್, ರಾಕೇಶ್, ಮಹಾರಾಜ, ಯುವರಾಜ ಹಾಗೂ ಶಾರದಾ ವಿಲಾಸ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಇದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X