ಮೈಸೂರು | ಪ್ರಶಸ್ತಿಗಳು ನಮ್ಮನ್ನು ಅಣಕಿಸಬಾರದು : ಜಯಪ್ಪ ಹೊನ್ನಾಳಿ

Date:

ಮೈಸೂರು ತಾಲ್ಲೂಕಿನ ಇಲವಾಲ ಸರ್ಕಾರಿ ಪ್ರೌಢಶಾಲೆ ಮತ್ತು ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ಕನ್ನಡಾಂಬೆ ರಕ್ಷಣಾ ವೇದಿಕೆ ವತಿಯಿಂದ ‘ಶಿಕ್ಷಕರ ದಿನಾಚರಣೆ‘ ಪ್ರಯುಕ್ತ ಏರ್ಪಡಿಸಿದ್ದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಸಾಹಿತಿ ಜಯಪ್ಪ ಹೊನ್ನಾಳಿ ಪ್ರಶಸ್ತಿಗಳು ನಮ್ಮನ್ನು ಅಣಕಿಸಬಾರದು ಎಂದು ಅಭಿಪ್ರಾಯಪಟ್ಟರು.

- Advertisement -

“ಪ್ರಶಸ್ತಿಗಾಗಿ ದುಂಬಾಲು ಬಿದ್ದು, ಅರ್ಜಿ ಹಾಕಿ, ಶಿಫಾರಸ್ಸು ಮಾಡಿಸಿ, ಹಣ ಕೊಟ್ಟು ಪಡೆದ ಪ್ರಶಸ್ತಿಗಳು ನಮ್ಮನ್ನು ಅಣಕಿಸುತ್ತವೆ. ಆದರೇ, ಸಾಧನೆಯಿಂದ ಪಡೆದ ಪ್ರಶಸ್ತಿಗಳು ಸದಾಕಾಲ ನಮ್ಮನ್ನು ಗೌರವಿಸುತ್ತವೆ” ಎಂದು ಸಾಹಿತಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಈ ಶಾಲೆಯಲ್ಲಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಎಂಟು ಜನ ಶಿಕ್ಷಕರು ಪ್ರಶಸ್ತಿ ಪಡೆಯಲು ಯಾವುದೇ ಅರ್ಜಿ ಹಾಕಿಲ್ಲ, ಯಾರಿಂದಲೂ ಶಿಫಾರಸ್ಸು ಮಾಡಿಸಿಲ್ಲ, ಕನ್ನಡ ನೆಲ, ಜಲ, ಭಾಷೆಯ ರಕ್ಷಣೆಗಾಗಿ ದುಡಿಯುತ್ತಿರುವ ಕನ್ನಡಾಂಬೆ ರಕ್ಷಣಾ ವೇದಿಕೆಯು ಈ ಉತ್ತಮ ಶಿಕ್ಷಕರನ್ನು ಗುರುತಿಸಿ ಅವರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ನೀಡಿ ಗೌರವಿಸುತ್ತಿರುವುದು ಅತ್ಯಂತ ಸಂತೋಷದ ವಿಷಯ ಎಂದರು.

ಶಿಕ್ಷಕರ ಗುಣಮಟ್ಟ ಅಥವಾ ಅವರ ಸಾಧನೆಯನ್ನು ಗುರುತಿಸಲು ಯಾವುದೇ ಪರೀಕ್ಷೆಗಳು ನಡೆಸಬೇಕಿಲ್ಲ. ಕೇವಲ ಅವರ ವಿದ್ಯಾರ್ಥಿಳನ್ನು ನೋಡಿದರೆ ಸಾಕು ಶಿಕ್ಷಕರ ಗುಣಮಟ್ಟ ತಿಳಿಯುತ್ತದೆ. ವಿದ್ಯಾರ್ಥಿಗಳೇ ಶಿಕ್ಷಕರ ಪರೀಕ್ಷೆಯ ಮಾನದಂಡ ಎಂದು ವಿವರಣೆ ನೀಡಿದರು.

ಕನ್ನಡಾಂಬೆ ರಕ್ಷಣಾ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಬಿ. ಬಿ. ರಾಜಶೇಖರ್ ಮಾತನಾಡಿ, “ಕಳೆದ ಐದು ವರ್ಷಗಳಿಂದ ನಮ್ಮ ಸಂಘಟನೆ ವತಿಯಿಂದ ಪ್ರತಿವರ್ಷ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಕನ್ನಡ ನೆಲ, ಜಲ, ಭಾಷೆಯ ಉಳಿವು ಮತ್ತು ರಕ್ಷಣೆಗಾಗಿ ನಮ್ಮ ಸಂಘಟನೆ ಪ್ರಾಮಾಣಿಕವಾಗಿ ದುಡಿಯುತ್ತಿದೆ. ಇದರ ಜತೆ ದೇಶಕ್ಕೆ ಉತ್ತಮ ನಾಗರಿಕರನ್ನು ಸೃಷ್ಟಿಸುತ್ತಿರುವ ಶಿಕ್ಷಕರು ದೇಶದ ಅಭಿವೃದ್ಧಿ ಮತ್ತು ಉತ್ತಮ ಸಮಾಜ ನಿರ್ಮಾಣದ ರೂವಾರಿಗಳಾಗಿದ್ದಾರೆ. ಅಂತಹ ಶಿಕ್ಷಕರನ್ನು ಗುರುತಿಸಿ ಗೌರವಿಸುವುದು ಸಹ ನಮ್ಮ ಸಂಘಟನೆಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಪ್ರಸಕ್ತ ಸಾಲಿನಲ್ಲಿ ಇಲವಾಲ ಕರ್ನಾಟಕ ಪಬ್ಲಿಕ್ ಶಾಲೆ ಮತ್ತು ಸರ್ಕಾರಿ ಪ್ರೌಢಶಾಲೆಯ ಎಂಟು ಜನ ಶಿಕ್ಷಕರನ್ನು ಗುರುತಿಸಿ ಅವರನ್ನು ಗೌರವಿಸಡಲಾಗುತ್ತಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಹನೂರು | ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಶಾಸಕ ಎಂ ಆರ್ ಮಂಜುನಾಥ್ ಚಾಲನೆ

ತಮ್ಮ ಸಾಧನೆಯಿಂದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಜಗದೀಶ್ ಕೆ. ಎ, ಮಮತಾ ಎಸ್. ಎಸ್, ಶಶಿಕಲ ಎಸ್. ಎಸ್, ಮಹದೇವು ಡಿ. ಎನ್, ಲಿಂಗರಾಜಪ್ಪ ಎಲ್. ಜಿ, ಬಿ. ವಾಸುದೇವ, ಪುರುಷೋತ್ತಮ, ಬಸವರಾಜೇಂದ್ರ ಸ್ವಾಮಿ ಅವರನ್ನು ಇಲವಾಲ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಭೈರೇಗೌಡ, ಕನ್ನಡಾಂಬೆ ರಕ್ಷಣಾ ವೇದಿಕೆಯ ಇತರೆ ಪದಾಧಿಕಾರಿಗಳು ಪ್ರಶಸ್ತಿ ಫಲಕ, ಶಾಲು, ಹಾರ, ಫಲ, ತಾಂಬೂಲ ನೀಡಿ ಗೌರವಿಸಿದರು.

ಕಾರ್ಯಕ್ರಮದಲ್ಲಿ ಕನ್ನಡಾಂಬೆ ರಕ್ಷಣಾ ವೇದಿಕೆಯ ಜಿಲ್ಲಾ ಗೌರವಾಧ್ಯಕ್ಷರಾದ ಮನುಗೌಡ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಮಂಜುಳ ಆರ್, ರಾಜ್ಯ ಖಜಾಂಚಿ ನಂಜುಂಡ, ರಾಜ್ಯ ಕಾರ್ಯದರ್ಶಿ ಶಿವಕುಮಾರ್, ಮೈಸೂರು ಜಿಲ್ಲಾ ಅಧ್ಯಕ್ಷರಾದ ಸಂತೋಷ್, ಡಿಪಿಕೆ ಪರಮೇಶ್, ಜಿಲ್ಲಾ ಘಟಕದ ಸದಸ್ಯರಾದ ಕಿರಣ್, ಗೌರವ ಅಧ್ಯಕ್ಷ ನಾಗರಾಜು, ಆಪ್ತ ಕಾರ್ಯದರ್ಶಿ ಶಿವಕುಮಾರ್, ಸಂಘಟನಾ ಕಾರ್ಯದರ್ಶಿ ಲೋಕೇಶ್, ಲೋಕೇಶ್ ಚಿನ್ನಬುದ್ದಿ, ಮಹಿಳಾ ಘಟಕದ ಜಿಲ್ಲಾ ಉಪಾಧ್ಯಕ್ಷೆ ಸೌಭಾಗ್ಯ, ಬೊಮ್ಮನಹಳ್ಳಿ ಕುಮಾರ್, ಕೆ.ಎಸ್.ಪೂರ್ಣಿಮಾ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಭೂಮಾಪಕ–ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ನಿಷೇಧಿತ ಪ್ರದೇಶ

ಭೂದಾಖಲೆಗಳ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ ಭೂಮಾಪಕರ ಹುದ್ದೆಗಳು ಹಾಗೂ ಕಂದಾಯ...

ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: ಓರ್ವ ಸಾವು; ಸುರಕ್ಷತಾ ಲೋಪದ ಸಮಗ್ರ ತನಿಖೆಗೆ ಆಗ್ರಹ

ಜೋಕಟ್ಟೆ ಸಮೀಪದ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ (ಎಂಆರ್‌ಪಿಎಲ್) ಘಟಕದಲ್ಲಿ...

ಮಡಗಾಂವ್- ಮಂಗಳೂರು ವಂದೇ ಭಾರತ್ ರೈಲು ಬೆಂಗಳೂರಿಗೆ ವಿಸ್ತರಣೆ

ಮಂಗಳೂರು-ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಬೆಂಗಳೂರಿನವರೆಗೆ ವಿಸ್ತರಿಸಲಾಗಿದೆ....