ಮೈಸೂರಿನಲ್ಲಿ 2021, 2022ಕ್ಕೆ ಹೋಲಿಸಿದರೆ 2023ರಲ್ಲಿ ಮಾದಕ ದ್ರವ್ಯ ಸೇವನೆ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಆದ್ದರಿಂದ ಮಾದಕ ದ್ರವ್ಯ ಸೇವನೆಯ ವಿರುದ್ಧ ಜಾಗೃತಿ ಮೂಡಿಸಲು ಪೊಲೀಸರು ನಿರ್ಧರಿಸಿದ್ದಾರೆ” ಎಂದು ಎಸ್‌ಪಿ ಸೀಮಾ ಲಾಟ್ಕರ್ ಮಾಹಿತಿ ನೀಡಿದರು.
ಮೈಸೂರಿನಲ್ಲಿ ಮಾದಕ ದ್ರವ್ಯ ಸೇವನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸರು ಶನಿವಾರ ನಂಜನಗೂಡಿನಲ್ಲಿ ಹಮ್ಮಿಕೊಂಡಿದ್ದ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
“ಮಾದಕ ವ್ಯಸನದಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದ್ದು, ಬಹುತೇಕ ಕುಟುಂಬಗಳನ್ನು ಹಾಳುಮಾಡಿದೆ” ಎಂಬುದರ ಬಗ್ಗೆ ಪೊಲೀಸರು ಸಾರ್ವಜನಿಕರಿಗೆ ಅರಿವು ಮೂಡಿಸಿದರು.
ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಮೆರವಣಿಗೆ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದ ಆವರಣದಿಂದ ನಂಜನಗೂಡು ಕ್ರೀಡಾಂಗಣದವರೆಗೆ ಸುಮಾರು 2 ಕಿ ಮೀ ದೂರ ಸಾಗಿತು.
ಜಾಗೃತಿ ಮೆರವಣಿಗೆಯಲ್ಲಿ ಜೂನಿಯರ್ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಮತ್ತು ಯುವಜನರು ಪೊಲೀಸ್ ಸಿಬ್ಬಂದಿಯೊಂದಿಗೆ ಸೇರಿಕೊಂಡರು.
ಈ ಸುದ್ದಿ ಓದಿದ್ದೀರಾ? ವಿಜಯಪುರ | ಸಿದ್ದೇಶ್ವರ ದೇವಸ್ಥಾನದ ಜಾತ್ರೆ; ʼಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶʼವೆಂಬ ಬ್ಯಾನರ್ ಅಳವಡಿಕೆ
ಸಾರ್ವಜನಿಕರ ಗಮನ ಸೆಳೆಯಲು ಪೊಲೀಸ್ ಸಿಬ್ಬಂದಿ ಕ್ರೀಡಾಂಗಣದಲ್ಲಿ ಡ್ರಗ್ಸ್ ಬೇಡ ಎಂಬ ಮಾನವ ಪತ್ರಗಳನ್ನು ರಚಿಸಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ ಎನ್ ನಂದಿನಿ, ಡಿಎಸ್‌ಪಿಗಳು, ಇನ್ಸ್‌ಪೆಕ್ಟರ್‌ಗಳು, ಸಬ್ ಇನ್ಸ್‌ಪೆಕ್ಟರ್‌ಗಳು ಇದ್ದರು.