ಮೈಸೂರು | ಭೂಕಬಳಿಕೆ ತಡೆಯುವಂತೆ ಆಗ್ರಹಿಸಿ ಭೋಗಾದಿ ಗ್ರಾಮಸ್ಥರಿಂದ ಪ್ರತಿಭಟನೆ

Date:

ಶಾಲೆಗಾಗಿ ಮಂಜೂರಾಗಿದ್ದ ಭೂಮಿಯನ್ನು ಕೆಲವು ವ್ಯಕ್ತಿಗಳು ಅನಧಿಕೃತವಾಗಿ, ಕಾನೂನು ಬಾಹಿರವಾಗಿ ತಮ್ಮ ಸ್ವಂತ ಉಪಯೋಗಕ್ಕೆ ಬಳಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಯಾರೇ ಆಗಲಿ ಭೂಕಬಳಿಕೆ ಮಾಡದಂತೆ ತಡೆಯಬೇಕು ಎಂದು ಆರೋಪಿಸಿ ಮೈಸೂರು ತಾಲೂಕಿನ ಭೋಗಾದಿ ಗ್ರಾಮಸ್ಥರು ಶಾಂತಿಯುತ ಪ್ರತಿಭಟನೆ ಮಾಡಿದ್ದಾರೆ.

- Advertisement -

ಭೋಗಾದಿಯ ಹರಿಗಿರಿ ಸೇವಾ ಪ್ರತಿಷ್ಠಾನದ ಬಳಿ ಪ್ರತಿಭಟನೆ ನಡೆಸಿದ ಗ್ರಾಮಸ್ಥರು, ಭೂಮಿಯನ್ನು ಸಾರ್ವಜನಿಕ ಉದ್ದೇಶವಲ್ಲದೇ ಬೇರೆ ಉದ್ದೇಶಕ್ಕೆ ಬಳಸದಂತೆ ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಗ್ಯಾರೇಜ್ ರವಿ ಮಾತನಾಡಿ, “ಭೋಗಾದಿ ಗ್ರಾಮದಲ್ಲಿನ ಸರ್ವೇ ನಂಬರ್ 32ರ ಭೂಮಿ ವಿವಾದಕ್ಕೊಳಪಟ್ಟಿದ್ದು, 1997-98ನೇ ಇಸವಿಯಲ್ಲಿ ಶಾಲೆ ನಿರ್ಮಾಣ ಮಾಡುವ ಉದ್ದೇಶಕ್ಕಾಗಿ ಸರ್ಕಾರದಿಂದ 25 ಗುಂಟೆ ಜಾಗ ಮಂಜೂರಾಗಿದೆ. ಆದರೆ ಖಾಸಗಿ ವ್ಯಕ್ತಿ ಎಂ ನಾಗರಾಜು ಎಂಬುವರು ಭೂಮಿಯನ್ನು ಕಬಳಿಸಲು ನಕಲಿ ದಾಖಲೆ ಸೃಷ್ಟಿಸಿಕೊಂಡಿದ್ದಾರೆ” ಎಂದು ಆರೋಪಿಸಿದರು.

“ಈ ಕುರಿತು ತಹಶೀಲ್ದಾರ್ ಮಹೇಶ್, ಎಸಿಪಿ ಗಜೇಂದ್ರ ಪ್ರಸಾದ್ ಮತ್ತು ಸರಸ್ವತಿಪುರಂ ಠಾಣಾ ಇನ್‌ಸ್ಪೆಕ್ಟರ್ ಪುರುಷೋತ್ತಮ್ ನೇತೃತ್ವದಲ್ಲಿ ಫೆಬ್ರವರಿ 4ರಂದು ಶಾಂತಿ ಸಭೆ ನಡೆದು, ಭೂಮಿಯನ್ನು ಯತಾಸ್ಥಿತಿ ಕಾಪಾಡುವಂತೆ ಸೂಚನೆ ನೀಡಿದ್ದರೂ ಕೂಡಾ ಖಾಸಗಿ ವ್ಯಕ್ತಿ ಏಕಾಏಕಿ ಜೆಸಿಬಿ ಕರೆಸಿ ಜಾಗದಲ್ಲಿದ್ದ ಒಂದು ಪಾಳು ಮನೆಯನ್ನೂ ತೆರವುಗೊಳಿಸಿದ್ದಾರೆ. ಅಲ್ಲದೆ ಆ ಜಾಗದಲ್ಲಿ ಸ್ವಚ್ಛತಾ ಕಾರ್ಯ ನಡೆಸಿ ಸ್ವಂತ ಉಪಯೋಗಕ್ಕೆ ಬಳಸಿಕೊಳ್ಳಲು ಯತ್ನಿಸುತ್ತಿದ್ದಾರೆ” ಎಂದು ದೂರಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಮಹಿಳೆಯರ ಘನತೆ, ಮಾನವೀಯ ಮೌಲ್ಯ ಉಳಿಸಲು ‘ಯುವ ಜನರ ಸಂಕಲ್ಪ’ ಸಮಾವೇಶ

“ಸರ್ಕಾರಿ ಜಾಗ ಸಾರ್ವಜನಿಕ ಉದ್ದೇಶಕಷ್ಟೇ ಬಳಕೆಯಾಗಬೇಕು. ಖಾಸಗಿ ವ್ಯಕ್ತಿಯ ಪಾಲಾಗಬಾರದು. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಶೀಘ್ರ ಕ್ರಮ ಕೈಗೊಂಡು ಭೂಮಿಯನ್ನು ಸಾರ್ವಜನಿಕ ಉದ್ದೇಶಕ್ಕೇ ಬಿಟ್ಟುಕೊಡಬೇಕು” ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಪ್ರತಿಭಟನೆಯಲ್ಲಿ ಅರುಣ, ದೊಡ್ಲಿಂಗನ ರವಿ, ಪೈಲ್ವಾನ್ ಕೃಷ್ಣ, ತ್ಯಾಗು, ಕಿರಣ್ ಕುಮಾರ್, ಭರತ್, ಕಾಂತರಾಜು, ರಘು, ಹಾಲಿನ ರೇವಣ್ಣ, ಶಶಿ, ಈಶ್ವರ್, ವಸಂತ್, ಪ್ರೇಮಸಾಗರ್, ಕೃಷ್ಣ, ಅವಿನಾಶ್, ಪ್ರಜು, ಸತ್ಯ ಮತ್ತು ಭೋಗಾದಿ ಗ್ರಾಮಸ್ಥರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...