ಮೈಸೂರು | ಬಿಜೆಪಿ ಅಭ್ಯರ್ಥಿ ಯದುವೀರ್ ರೇಡಿಯೋ ಕಾರ್ಯಕ್ರಮ; ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

Date:

ಲೋಕಸಭೆ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ರೇಡಿಯೋ ಮಿರ್ಚಿ ಕಾರ್ಯಕ್ರಮ ಸಂಬಂಧ ಕೆಪಿಸಿಸಿ ವಕ್ತಾರ ಎಚ್.ಎ ವೆಂಕಟೇಶ್ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ಮೈಸೂರಿನ 104.8 ರೇಡಿಯೋ ಮಿರ್ಚಿ ಚಾನೆಲ್‌ನಲ್ಲಿ ಮೈಸೂರು-ಕೊಡಗು ಕ್ಷೇತ್ರದ ಲೋಕಸಭಾ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮೈಸೂರು ಸಂಸ್ಥಾನದ ಇತಿಹಾಸದ ಬಗ್ಗೆ ಸಂದರ್ಶನದ ರೂಪದಲ್ಲಿ ʼರಾಜರಿಂದಲೇ ರಾಜರ ಕಥೆಗಳುʼ ಎಂಬ ಶೀರ್ಷಿಕೆಯಲ್ಲಿ ಮಾತನಾಡುತ್ತಾರೆ.

“ರೇಡಿಯೋದಲ್ಲಿ ಮಾತನಾಡುವ ಬಗ್ಗೆ ಕ್ಷಣ ಕ್ಷಣಕ್ಕೂ ರೇಡಿಯೋದಲ್ಲಿ ಜಾಹೀರಾತನ್ನು ಕೂಡ ಪ್ರಕಟಿಸಲಾಗುತ್ತಿದೆ. ಒಬ್ಬ ವ್ಯಕ್ತಿಯಾಗಿ ರಾಜರ ಬಗ್ಗೆ ಮಾತನಾಡುವುದರಲ್ಲಿ ತಪ್ಪಿಲ್ಲ. ಆದರೆ ಏಪ್ರಿಲ್‌ 26ರಂದು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವುದರಿಂದ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆಗುತ್ತದೆ” ಎಂದು ಕೆಪಿಸಿಸಿ ವಕ್ತಾರ ಎಚ್ ಎ ವೆಂಕಟೇಶ್ ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಧಾರವಾಡ | ಮಧ್ಯಪ್ರದೇಶದ ಕಳ್ಳರ ತಂಡದಲ್ಲಿದ್ದ ಬಾಲಕ ಪೊಲೀಸ್‌ ವಶಕ್ಕೆ

“ಯದುವೀರ್ ಅವರ ಮಾತುಗಳು ಮತದಾರರ ಮೇಲೆ ಪರಿಣಾಮ ಬೀರುವುದರಿಂದ ಈ ಕೂಡಲೇ ರೇಡಿಯೋದಲ್ಲಿ ಕಾರ್ಯಕ್ರಮ ಪ್ರಸಾರವಾಗದಂತೆ ನಿರ್ಬಂಧ ವಿಧಿಸಬೇಕು” ಎಂದು ಮನವಿ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚೊಂಬು, ಗ್ಯಾಸ್ ಹೊರತುಪಡಿಸಿ ಶಾಂತಿಯುತ ಮತದಾನಕ್ಕೆ ಸಾಕ್ಷಿಯಾದ ಬೆಂಗಳೂರು

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ...

ಕಸ ಸುರಿಯುವ ಜಾಗವಾಗಿ ಮಾರ್ಪಟ್ಟ ಬೆಂಗಳೂರಿನ ಮೇಲ್ಸೇತುವೆಗಳು!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಹನ ಸವಾರರಿಗೆ ಸಂಚಾರ ದಟ್ಟಣೆ ತಲೆನೋವಾಗಿ ಪರಿಣಮಿಸಿದೆ....

ರಾಯಚೂರು | ಅಬಕಾರಿ ಇಲಾಖೆ ದಾಳಿ; ₹500 ಮುಖಬೆಲೆಯ ನೋಟಿನ 62 ಬಂಡಲ್ ಪತ್ತೆ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೌಳಿಗಲ್ಲಿಯ ಗೌಳಿಯೊಬ್ಬರ ಮನೆಯಲ್ಲಿ ಗೋಣಿ ಚೀಲದ...