ಮೈಸೂರು | ಆರೋಗ್ಯ ಮತ್ತು ಆರ್ಥಿಕ ಅಭಿವೃದ್ಧಿಗೆ ಸಿರಿಧಾನ್ಯ ಸಹಕಾರಿ: ಡಾ. ಎಚ್‌.ಸಿ ಮಹದೇವಪ್ಪ

Date:

Advertisements

ಜನರ ಆರೋಗ್ಯ ಮತ್ತು ಆರ್ಥಿಕ ಅಭಿವೃದ್ಧಿಯ ಜೊತೆಗೆ ರೈತರೂ ಹೆಚ್ಚಿನ ಮಟ್ಟದಲ್ಲಿ ಉದ್ಯೋಗದಲ್ಲಿ ತೊಡಗಿಸಿಕೊಳ್ಳಲು ಸಾವಯವ ಕೃಷಿಯ ಸಿರಿಧಾನ್ಯ ಸಹಕಾರಿ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ ಮಹದೇವಪ್ಪ ಹೇಳಿದರು.

ಸಹಜ ಸಮೃದ್ಧ ಸಾವಯವ ಕೃಷಿಕರ ಬಳಗದ ವತಿಯಿಂದ ನಗರದ ನಂಜರಾಜ ಬಹದ್ಧೂರ್ ಛತ್ರದಲ್ಲಿ ಮಂಗಳವಾರ(ಡಿ.19) ಆಯೋಜಿಸಿದ್ದ ಮೂರು ದಿನಗಳ ‘ಸಿರಿಧಾನ್ಯ ಸಂಭ್ರಮಕ್ಕೆ’ ಚಾಲನೆ ನೀಡಿ ಮಾತನಾಡಿದ ಅವರು, ಮೈಸೂರು ಹಾಗೂ ಚಾಮರಾಜನಗರ ಭಾಗದ ರೈತರು ಹೆಚ್ಚಾಗಿ ಸಾವಯವ ಕೃಷಿಯಲ್ಲಿ ತೊಡಸಿಕೊಳ್ಳುವಂತಾಗಲಿ ಎಂದರು.

ಭಾರತವು ಮೂಲತಃ ಕೃಷಿ ಪ್ರಧಾನ ರಾಷ್ಟ್ರವಾಗಿದ್ದು, ಗ್ರಾಮೀಣ ಭಾಗದ ಜನರ ಮೂಲ ಕಸುಬು ಕೃಷಿಯಾಗಿದೆ. ಅಗತ್ಯಕ್ಕೆ ತಕ್ಕಂತೆ ವೈಜ್ಞಾನಿಕವಾಗಿ ಆಹಾರ ಉತ್ಪಾದಿಸುವ ಜೊತೆಗೆ ಕೃಷಿಯು ರೈತರ ಕೈಯಲ್ಲೆ ಇರಬೇಕು. ಕೃಷಿ ಕೈಗಾರಿಕೆಯಾಗಿ ಪರಿವರ್ತನೆಯಾಗುತ್ತಿರುವಾಗ ರೈತರಿಗೆ ನೇರವಾಗಿ ಹೆಚ್ಚಿನ ಲಾಭ ದೊರಕಬೇಕು. ಕೈಗಾರಿಕೋದ್ಯಮಿಗಳ ಕೈಗೆ ಸಿಗದಂತೆ ಎಚ್ಚರ ವಹಿಸಬೇಕು ಎಂದು ಸಲಹೆ ನೀಡಿದರು.

Advertisements

ರೈತರು ಸಾವಯವ ಕೃಷಿಯಲ್ಲಿ ತೊಡಗಲು ರಾಜ್ಯ ಸರ್ಕಾರ ಹೆಕ್ಟೇರ್‌ಗೆ ಹತ್ತು ಸಾವಿರ ರೂ. ನೀಡುವ ಮೂಲಕ ಸಿರಿಧಾನ್ಯ ಉತ್ಪಾದನೆಯನ್ನು ಉತ್ತೇಜಿಸುತ್ತಿದೆ. ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಗೂ ಕೃಷಿ ಸಚಿವರು ನಮ್ಮೆಲ್ಲರನ್ನೂ ಸೇರಿಸಿ ಬೆಳಗಾವಿಯಲ್ಲಿ ಅಂತಾರಾಷ್ಟ್ರೀಯ ಸಿರಿಧಾನ್ಯ ಆಚರಣೆಯನ್ನು ಮಾಡಿದ್ದರು ಎಂದು ತಿಳಿಸಿದರು‌.

ಕೊಲಂಬಸ್ ಭಾರತಕ್ಕೆ ಬರುವ ಮುನ್ನವೇ ಬಣ್ಣದ ಜೋಳ ಬೆಳೆಯಲಾಗುತ್ತಿತ್ತು ಎಂಬ ಮಾಹಿತಿ ಇದೆ. ರಾಸಯನಿಕ ಗೊಬ್ಬರ ಬಳಸದೇ ಮಣ್ಣಿನ ಫಲವತ್ತತೆ ಕಾಪಾಡುವ ಸಾವಯವ ಕೃಷಿಗೆ ನಾವೆಲ್ಲರೂ ಬೆಂಬಲ ಕೊಡಬೇಕು ಎಂದರು.

ನಟಿ, ರಂಗಕರ್ಮಿ ಅಕ್ಷತಾ ಪಾಂಡವಪುರ ಅವರು ಪೌಷ್ಠಿಕ ಪಾಕ ಪುಸ್ತಕವನ್ನು ಲೋಕಾರ್ಪಣೆ ಮಾಡಿದರು. ಹಾವೇರಿಯ ಸಿರಿಧಾನ್ಯ ಸಂರಕ್ಷಕ ವೀರಭದ್ರಯ್ಯ ಹಿರೇಮಠ ಅಧ್ಯಕ್ಷತೆ ವಹಿಸಿದ್ದರು. ದೇವಧಾನ್ಯ ರೈತ ಉತ್ಪಾದಕರ ಕಂಪನಿ ನಿರ್ದೇಶಕಿ ಸಾವಿತ್ರಿ ಕೊಡ್ಲಿ, ಸಹಜ ಸಮೃದ್ಧ ಸಂಸ್ಥೆಯ ನಿರ್ದೇಶಕ ಜಿ.ಕೃಷ್ಣಪ್ರಸಾದ್ ಸೇರಿದಂತೆ ಮುಂತಾದವರು ಹಾಜರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X