ಮೈಸೂರು | ಬೇಸಿಗೆ ಹಿನ್ನಲೆಯಲ್ಲಿ ಪೌರಕಾರ್ಮಿಕರ ಕೆಲಸದ ಸಮಯ ಬದಲಾವಣೆ

Date:

ಮೈಸೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬೇಸಿಗೆ ಕಾಲದ ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೌರಕಾರ್ಮಿಕರ ಆರೋಗ್ಯದ ಹಿತದೃಷ್ಟಿಯಿಂದ ಕೆಲಸದ ಸಮಯವನ್ನು ಪರಿಷ್ಕರಿಸಿ ಕೆಲಸದ ಸಮಯ ಬದಲಾವಣೆ ಮಾಡಲಾಗಿದೆ.

- Advertisement -

ಇದುವರೆಗೆ ಜಾರಿಯಲ್ಲಿದ್ದ ಬೆಳಗ್ಗೆ 6:30 ರಿಂದ ಮಧ್ಯಾಹ್ನ 2:00 ಗಂಟೆಯವರೆಗೆ ಇದ್ದ ಕೆಲಸದ ಸಮಯವನ್ನು, ಇನ್ನುಮುಂದೆ ಬೆಳಗ್ಗೆ 5:30 ರಿಂದ ಮಧ್ಯಾಹ್ನ 1:00 ಗಂಟೆಯವರೆಗೆ ಬದಲಾಯಿಸಲಾಗಿದೆ. ಈ ಹೊಸ ಸಮಯವು ದಿನಾಂಕ-01-04-2026ರಿಂದ ಜಾರಿಗೆ ಬಂದಿದೆ. ಬೇಸಿಗೆ ಕಾಲದಲ್ಲಿ ಉಷ್ಣತೆಯ ಹೆಚ್ಚಳದಿಂದ ಪೌರಕಾರ್ಮಿಕರ ಆರೋಗ್ಯ ಸಮಸ್ಯೆಗಳು, ದೇಹದ ನೀರಿನ ಕೊರತೆ (Dehydration) ಮುಂತಾದ ಸಮಸ್ಯೆಗಳನ್ನು ಎದುರಿಸುವ ಸಾಧ್ಯತೆ ಇರುವುದರಿಂದ, ಅವರ ಸುರಕ್ಷತೆ ಮತ್ತು ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮವನ್ನು ಕೈಗೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಿಡಿದೆದ್ದ ಅಮೆರಿಕ- ತಿಕ್ಕಲು ಟ್ರಂಪ್‌ನ ಬೆನ್ನಟ್ಟಿ ಕಾಡಲಿವೆ ಕೆಟ್ಟ ಕನಸುಗಳು!

ಈ ಕ್ರಮದಿಂದ ಪೌರಕಾರ್ಮಿಕರ ಕಾರ್ಯಕ್ಷಮತೆ ಹೆಚ್ಚುವುದರ ಜೊತೆಗೆ ನಗರ ಸ್ವಚ್ಛತಾ ಕಾರ್ಯಗಳು ಪರಿಣಾಮಕಾರಿಯಾಗಿ ಮುಂದುವರಿಯಲಿವೆ. ಈ ಮೂಲಕ ಸಾರ್ವಜನಿಕರು ಪೌರಕಾರ್ಮಿಕರು ಹಾಗೂ ಮೈಸೂರು ಮಹಾನಗರ ಪಾಲಿಕೆಯೊಂದಿಗೆ ಸಹಕರಿಸಿ, ನಗರದ ಸ್ವಚ್ಛತೆಯನ್ನು ಕಾಪಾಡಲು ಕೈಜೋಡಿಸುವಂತೆ ಪಾಲಿಕೆಯವರು ವಿನಂತಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...