ಮೈಸೂರು | ಐಟಿಸಿ ಕಂಪನಿ ಉತ್ಪಾದನಾ ಘಟಕ ಉದ್ಘಾಟಿಸಿದ ಮುಖ್ಯಮಂತ್ರಿ

Date:

ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಕೈಗಾರಿಕಾ ಪ್ರದೇಶದಲ್ಲಿರುವ ಐಟಿಸಿ ಕಂಪನಿಯ ಉತ್ಪಾದನಾ ಘಟಕವನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ.

- Advertisement -

ಬಳಿಕ ಮಾತನಾಡಿದ ಮುಖ್ಯಮಂತ್ರಿ, ಹೆಚ್ಚು ಹೆಚ್ಚು ಕೈಗಾರಿಕೆಗಳು ಬಂದಷ್ಟು ಸ್ಥಳೀಯ ನಿರುದ್ಯೋಗಿ ಯುವಕರುಗಳಿಗೆ ಉದ್ಯೋಗ ದೊರಕುವಂತಾಗುತ್ತದೆ. ಆ ನಿಟ್ಟಿನಲ್ಲಿ ಕೈಗಾರಿಕೆಗಳು ಸ್ಥಳೀಯ ನಿರುದ್ಯೋಗಳಿಗೆ ಮೊದಲು ಆದ್ಯತೆಯನ್ನು ನೀಡಬೇಕು ಎಂದು ಕೈಗಾರಿಕೆಗಳ ಆಡಳಿತ ಮಂಡಳಿಯವರಿಗೆ ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ನಮ್ಮ ವರುಣ ಕ್ಷೇತ್ರಕ್ಕೆ ಸೇರುವ ತಾಂಡವಪುರ ಕೈಗಾರಿಕಾ ಪ್ರದೇಶದಲ್ಲಿ ಹಲವಾರು ಕಂಪನಿಗಳಿದ್ದು, ಭೂಮಿ ಕಳೆದುಕೊಂಡ ರೈತರ ಮಕ್ಕಳಿಗೆ ಮೊದಲು ಉದ್ಯೋಗ ನೀಡಬೇಕು. ನಂತರ ಸ್ಥಳೀಯ ನಿರುದ್ಯೋಗಳಿಗೆ ಆದ್ಯತೆ ನೀಡಬೇಕು. ಆಗ ಮಾತ್ರ ಸ್ಥಳೀಯ ನಿರುದ್ಯೋಗ ಸಮಸ್ಯೆ ಬಗೆಹರಿಯುತ್ತದೆ. ಈಗಾಗಲೇ ಹಲವಾರು ಬಾರಿ ಈ ಭಾಗದ ರೈತರು ಮತ್ತು ಸ್ಥಳೀಯರು, ನಮಗೆ ಈ ಭಾಗದಲ್ಲಿ ಉದ್ಯೋಗ ನೀಡುತ್ತಿಲ್ಲ ಎಂಬ ದೂರುಗಳು ಕೇಳಿಬಂದಿವೆ. ಇನ್ನು ಮುಂದೆಯಾದರು ಕೈಗಾರಿಕೆಗಳು ಸ್ಥಳೀಯರಿಗೆ ಮತ್ತು ರೈತರಿಗೆ ಮೊದಲು ಆದ್ಯತೆ ನೀಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವರುಣ ಕ್ಷೇತ್ರದ ಆಶ್ರಯ ಸಮಿತಿ ಅಧ್ಯಕ್ಷ ಮತ್ತು ಮಾಜಿಶಾಸಕ ಯತೀಂದ್ರ ಸಿದ್ದರಾಮಯ್ಯ, ಐಟಿಸಿ ಸಂಸ್ಥೆ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಸಂಜೀವ್ ಪುರಿ, ಉಪಾಧ್ಯಕ್ಷ ನಜೀಬ್ ಆರಿಫ್, ಐಟಿಸಿ  ಇಂಡಿವಿಷನ್ ಲಿ ಹಾಗೂ ಅಗ್ರಿ ಗ್ರೂಪ್ ಮುಖ್ಯಸ್ಥ ಎಸ್.ಶಿವಕುಮಾರ್, ಸಿಇಒ ಎಚ್.ಎನ್. ರಾಮಪ್ರಸಾದ್, ಸಿ. ಬಸವೇಗೌಡ, ಜಿ.ಪಂ ಮಾಜಿ ಅಧ್ಯಕ್ಷ ಕೆ. ಮರಿಗೌಡ, ಬಿ.ಎಂ. ರಾಮು ಗ್ರಾ.ಪಂ ಉಪಾಧ್ಯಕ್ಷ ಬಿ. ಶಿವಣ್ಣ ಸೇರಿದಂತೆ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೃಷ್ಣೆಯ ನೀರು ಕೇಳಲು ತೆಲಂಗಾಣಕ್ಕೆ ನೈತಿಕ ಹಕ್ಕಿಲ್ಲ: ಅಖಂಡ ಕರ್ನಾಟಕ ರೈತ ಸಂಘ

ರಾಜ್ಯದ ರೈತರ ಹಿತಾಸಕ್ತಿಯನ್ನು ಬಲಿಕೊಟ್ಟು ತೆಲಂಗಾಣಕ್ಕೆ ಕೃಷ್ಣೆಯ ನೀರು ಹರಿಸುವುದನ್ನು...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9 ತಿಂಗಳಲ್ಲಿ 28,000 ನಾಯಿ ಕಡಿತ ಪ್ರಕರಣ!

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ...

ಕುಮಟಾ | ಹೆಗಲೆ ಗ್ರಾಮದಲ್ಲಿ ಮನೆ ಬೀಗ ಮುರಿದು ಚಿನ್ನಾಭರಣ, ನಗದು ಕಳವು

ಕುಮಟಾ ತಾಲೂಕಿನ ಹೆಗಲೆಯಲ್ಲಿರುವ ಶ್ರೀಪತಿ ವೆಂಕಟ್ರಮಣ ಆಚಾರಿ ಅವರ ಮನೆಯಲ್ಲಿ ಯಾರೂ...

ಉಜಿರೆಯಲ್ಲಿ ಸೌಜನ್ಯ ನ್ಯಾಯ ಯಾತ್ರೆ: ನೈಜ ಅಪರಾಧಿಗಳ ಬಂಧನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಧರ್ಮಸ್ಥಳದ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನೈಜ ಆರೋಪಿಗಳನ್ನು...