ಮೈಸೂರು | ಮಕ್ಕಳ ಪ್ರತಿಭೆ ಅನಾವರಣಕ್ಕೆ ಮಕ್ಕಳ ದಸರಾ ಉತ್ತಮ ವೇದಿಕೆ: ಸಚಿವ ಹೆಚ್ ಸಿ ಮಹದೇವಪ್ಪ

Date:

Advertisements

ಮಕ್ಕಳ ಪ್ರತಿಭೆ ಅನಾವರಣಕ್ಕೆ ಮಕ್ಕಳ ದಸರಾ ಉತ್ತಮ ವೇದಿಕೆಯಾಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿ ಕಲಾ ಮಂದಿರದಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಶೈಕ್ಷಣಿಕ ವಸ್ತು ಪ್ರದರ್ಶನದಲ್ಲಿ ಮಾತನಾಡಿದರು.

“ಮಕ್ಕಳು ತಮ್ಮಲ್ಲಿರುವ ಪ್ರತಿಭೆಗಳನ್ನು ಅನಾವರಣಗೊಳಿಸಲು ಆಯೋಜಿಸಿರುವ ‘ಮಕ್ಕಳ ದಸರಾ’ ಕಾರ್ಯಕ್ರಮವು ಉತ್ತಮ ವೇದಿಕೆಯಾಗಿದೆ. ಮಕ್ಕಳ ದಸರಾವನ್ನು ಅಚ್ಚುಕಟ್ಟಾಗಿ ಆಯೋಜಿಸಲಾಗಿದೆ. ಮಕ್ಕಳು ಧರ್ಮ, ಜಾತಿ ಮೀರಿದ ನಿರ್ಮಲ ಮನಸ್ಸುಳ್ಳವರು. ಅವರಲ್ಲಿ ಸಾಂಸ್ಕೃತಿಕ ಅಭಿರುಚಿಯನ್ನು ಬೆಳೆಸಲು ಪೋಷಕರು ನೆರವಾಗಬೇಕು. ಶಿಕ್ಷಕರು ಕೂಡ ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಮಕ್ಕಳು ಪ್ರಬುದ್ಧ ನಾಗರಿಕರಾಗಿ ಜೀವಿಸಲು ಅತ್ಯುತ್ತಮ ಮಾರ್ಗದರ್ಶನ ನೀಡಬೇಕು” ಎಂದು ತಿಳಿಸಿದರು.‌

Advertisements
ಮಕ್ಕಳ ದಸರಾ 1

“ಮಕ್ಕಳನ್ನು ಅತ್ಯಂತ ಎಚ್ಚರಿಕೆಯಿಂದ ಮುತುವರ್ಜಿವಹಿಸಿ ಬಾಲ್ಯದಲ್ಲಿ ಗುಣಾತ್ಮಕ ಶಿಕ್ಷಣದ ಜತೆಗೆ ಸಾಂಸ್ಕೃತಿಕ ನಡವಳಿಕೆಗಳನ್ನು ಕಲಿಸಬೇಕು. ನಮ್ಮ ದೇಶದ ಸಂವಿಧಾನದ ಆಶಯದಂತೆ ಮಕ್ಕಳು ಉತ್ತಮ ಪ್ರಜೆಗಳಾಗಬೇಕು” ಎಂದು ಆಶಿಸಿದರು.

ಈ ಸುದ್ದಿ ಓದಿದ್ದೀರಾ? ರಾಮನಗರ | ಮೇಕೆದಾಟು ಅಣೆಕಟ್ಟೆಗೆ ನಿರಂತರ ಹೋರಾಟದ ಸಂಕಲ್ಪ: ರಮೇಶ್‌ಗೌಡ

ಬಾಲಕ ಅಗಸ್ತ್ಯ ಮಾತನಾಡಿ, “ಮಕ್ಕಳಲ್ಲಿ ಸುಪ್ತವಾಗಿರುವ ಪ್ರತಿಭೆಯನ್ನು ಗುರುತಿಸಲು ಉತ್ತಮ ವೇದಿಕೆ ಇದಾಗಿದ್ದು, ಮಕ್ಕಳಿಗೆ ಶಿಕ್ಷಣದ ಜತೆಗೆ ಸಾಂಸ್ಕೃತಿಕ ಚಟುವಟಿಕೆಗಳು ಅಗತ್ಯವಾಗಿವೆ. ಮಕ್ಕಳೂ ಕೂಡ ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸಿ, ತಮ್ಮ ಪ್ರತಿಭೆ ಪ್ರದರ್ಶಿಸಬೇಕು” ಎಂದು ನುಡಿದರು.

ಕಾರ್ಯಕ್ರಮದಲ್ಲಿ ಸುತ್ತೂರು ಮಠದ ಆಡಳಿತಾಧಿಕಾರಿ ಮಂಜುಬುದ್ದಿ, ವಿಭಾಗಧಿಕಾರಿ ರಮೇಶ್, ಡಿಡಿಪಿಐ ಜವರೇಗೌಡ, ಶಿಕ್ಷಣಾಧಿಕಾರಿ ಶೋಭಾ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X