ಮೈಸೂರು ಮಹಾನಗರ ಪಾಲಿಕೆಯಿಂದ ‘ಮೈ ಮರ’ ಸಮೀಕ್ಷೆ

Date:

ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ರಸ್ತೆ ಬದಿಯ ಸಾಲು ಮರಗಳ ಸಮೀಕ್ಷೆ ನಡೆಸಲು, ಮೈಸೂರು ಅರಮನೆ ಮಂಡಳಿಯ ಸಹಯೋಗದೊಂದಿಗೆ ಸಿಎಫ್ಎಎಲ್ (Centre For Advanced Learning) ಮಂಗಳೂರು ಸಂಸ್ಥೆ, ಜಿಲ್ಲಾಧಿಕಾರಿಗಳು ಮತ್ತು ಮೈಸೂರು ಮಹಾನಗರ ಪಾಲಿಕೆಯೊಂದಿಗೆ ಒಪ್ಪಂದ ಮಾಡಿಕೊಂಡು ‘ಮೈ ಮರ’ ಸಮೀಕ್ಷೆಗೆ ಮುಂದಾಗಿದೆ.

- Advertisement -

ಸಮೀಕ್ಷೆ ನಡೆಸಲು ಸಿಎಫ್ಎಎಲ್ ಸಂಸ್ಥೆಗೆ ಮೈಸೂರು ಮಹಾನಗರ ಪಾಲಿಕೆಯಿಂದ ಅನುಮತಿ ನೀಡಲಾಗಿದ್ದು, ನಗರದಾದ್ಯಂತ ಸಮೀಕ್ಷೆಯನ್ನು ಈಗಾಗಲೇ ಪ್ರಾರಂಭಿಸಿರುತ್ತಾರೆ. ಸದರಿ ಸಮೀಕ್ಷೆಯನ್ನು ತರಬೇತಿ ಪಡೆದ ಸ್ವಯಂ ಸೇವಕರು ಮತ್ತು ವಿದ್ಯಾರ್ಥಿಗಳಿಂದ ನಡೆಸಿ, ಪ್ರತೀ ಮರದ ಜಿಪಿಎಸ್ (based geo-coordinates) ಮೂಲಕ ಮರಗಳ ಪ್ರಭೇದ, ದಪ್ಪ ಮತ್ತು ಅಂದಾಜು ಎತ್ತರದ ಮಾಹಿತಿಯನ್ನೊಳಗೊಂಡ ವರದಿಯನ್ನು ಪಾಲಿಕೆಗೆ ಸಲ್ಲಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಸದರಿ ಸಮೀಕ್ಷಾ ವರದಿಯಿಂದ ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ರಸ್ತೆ ಬದಿಯ ಮರಗಳ ಸಂಪೂರ್ಣ ಮಾಹಿತಿಯು ಲಭ್ಯವಾಗಲಿದ್ದು, ರಸ್ತೆ ಅಗಲೀಕರಣ ಮತ್ತು ಇತರೆ ಅಭಿವೃದ್ಧಿ ಕಾರ್ಯಗಳ ನಿರ್ಧಾರ ಕೈಗೊಳ್ಳಲು ಸಹಕಾರಿಯಾಗಿರುತ್ತದೆ. ನಗರದಲ್ಲಿ ಸ್ವಯಂ ಸೇವಕರು ಮತ್ತು ವಿದ್ಯಾರ್ಥಿಗಳು ಸಮೀಕ್ಷೆ ನಡೆಸುವ ಸಂದರ್ಭದಲ್ಲಿ ಸಾರ್ವಜನಿಕರು ಸಹಕಾರ ನೀಡುವಂತೆ ಕೋರಲಾಗಿದೆ.

ಈ ಸುದ್ದಿ ಓದಿದ್ದೀರಾ? ಯುಗಧರ್ಮ | ಭಾರತ-ಅಮೆರಿಕ ಒಪ್ಪಂದವು ರೈತರ ಬಿಕ್ಕಟ್ಟನ್ನು ಇನ್ನಷ್ಟು ಹೆಚ್ಚಿಸುತ್ತದೆ

ಅನುಮತಿ ನೀಡುವ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತರೆಡ್ಡಿ, ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಶೇಕ್ ತನ್ವೀರ್ ಆಸಿಫ್, ಮಹಾರಾಣಿ ತ್ರಿಷಿಕಾ ಕುಮಾರಿ ದೇವಿ, ಸಿಎಫ್ಎಎಲ್ ಸಂಸ್ಥೆಯ ಪ್ರತಿನಿಧಿಗಳು ಮತ್ತು ಮೈಸೂರು ಮಹಾನಗರ ಪಾಲಿಕೆಯ ತೋಟಗಾರಿಕೆ ವಿಭಾಗದ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಡಾ.ಮೆಹೆವಿಶ್ ಮುಶೀರ್ ಶೇಖ್‌ಗೆ ಪಿಎಚ್‌ಡಿ ಪದವಿ

ಡಾ. ಮಮತಾ ಬಾಲಚಂದ್ರ ಅವರ ಮಾರ್ಗದರ್ಶನದಲ್ಲಿ ಹಾಗೂ ಡಾ. ನರೇಂದ್ರ ವಿ.ಜಿ....

ಯಾದಗಿರಿ | ₹2,500 ಬೆಳೆನಷ್ಟ ಪರಿಹಾರ ರೈತರ ನೋವಿಗೆ ಅವಮಾನ: ಭೀಮರಾಯ ಎಲ್ಹೇರಿ

ರಾಜ್ಯ ಸರ್ಕಾರ ರೈತರ ಬೆಳೆನಷ್ಟಕ್ಕೆ ಕೇವಲ ₹2,500 ಪರಿಹಾರ ಘೋಷಿಸಿರುವುದು ರೈತರ...

ಕಲಬುರಗಿ | ವರದಕ್ಷಿಣೆ ಕಿರುಕುಳ ಆರೋಪ; ಮಹಿಳೆ ಅನುಮಾನಾಸ್ಪದ ಸಾವು!

ವರದಕ್ಷಿಣೆ ಕಿರುಕುಳದ ಆರೋಪದ ನಡುವೆ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಗರದ...

ಕೊಡಗಿನಲ್ಲಿ ‘SIR’ ಪಬ್ಲಿಕ್ ಹಿಯರಿಂಗ್: ‘ಮತದಾನದ ಹಕ್ಕು ಕಸಿಯುವುದು ಅಷ್ಟು ಸುಲಭವಲ್ಲ’ -ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಎದುರಾಗುತ್ತಿರುವ ಸಮಸ್ಯೆಗಳು,...