ಮೈಸೂರು ನಗರ ಹಸಿರೀಕರಣಕ್ಕೆ ಮಹಾನಗರ ಪಾಲಿಕೆ ಸಂಕಲ್ಪ: 13 ಸಾವಿರ ಗಿಡಗಳ ಪೋಷಣೆಗೆ ಯೋಜನೆ

Date:

ವಿಶ್ವ ಪರಿಸರ ದಿನ-2026ರ ಅಂಗವಾಗಿ ಮೈಸೂರು ಮಹಾನಗರ ಪಾಲಿಕೆ ಹಾಗೂ ಅರಣ್ಯ ಇಲಾಖೆಯ ಸಹಯೋಗದಲ್ಲಿ ರಾಮಕೃಷ್ಣನಗರ ಹೆಚ್ ಬ್ಲಾಕ್‌ನ ಆರೋಗ್ಯ ಬಡಾವಣೆ ಉದ್ಯಾನವನದಲ್ಲಿ ಶುಕ್ರವಾರ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

- Advertisement -

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಜಿ.ಟಿ. ದೇವೇಗೌಡ ಅವರು, ಪರಿಸರ ಸಂರಕ್ಷಣೆಯಲ್ಲಿ ನಾಗರಿಕರ ಪಾತ್ರ ಮಹತ್ವದ್ದಾಗಿದ್ದು, ನಿವಾಸಿಗಳು ಮರಗಳನ್ನು ದತ್ತು ಪಡೆದು ಅವುಗಳ ನಿರ್ವಹಣೆ ಹಾಗೂ ಪೋಷಣೆಗೆ ಮುಂದಾಗಬೇಕು ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಮೈಸೂರು ಮಹಾನಗರ ಪಾಲಿಕೆಯು 2026-27ನೇ ಸಾಲಿನ ಆಯ-ವ್ಯಯದಲ್ಲಿ ನಗರದ ಪ್ರತಿಯೊಂದು ವಾರ್ಡ್‌ನಲ್ಲಿ 200ರಂತೆ ಒಟ್ಟು 13,000 ಗಿಡಗಳನ್ನು ನೆಟ್ಟು ಪೋಷಿಸುವ ಮಹತ್ವಾಕಾಂಕ್ಷಿ ಯೋಜನೆಯನ್ನು ಘೋಷಿಸಿದೆ. ಅದರ ಭಾಗವಾಗಿ ವಿಶ್ವ ಪರಿಸರ ದಿನಾಚರಣೆಯಂದು ಪಾಲಿಕೆ ವ್ಯಾಪ್ತಿಯ ಎಲ್ಲಾ ವಾರ್ಡ್‌ಗಳಲ್ಲಿ 2,000ಕ್ಕೂ ಅಧಿಕ ಗಿಡಗಳನ್ನು ನೆಡಲಾಗಿದೆ.

ಮುಂದಿನ ಎರಡು ತಿಂಗಳುಗಳಲ್ಲಿ ಹಂತ ಹಂತವಾಗಿ 13,000ಕ್ಕೂ ಹೆಚ್ಚು ಗಿಡಗಳನ್ನು ನೆಟ್ಟು ಅವುಗಳ ಸಮರ್ಪಕ ಪೋಷಣೆ ಹಾಗೂ ಸಂರಕ್ಷಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದರೊಂದಿಗೆ, ಮಹಾನಗರ ಪಾಲಿಕೆಯ ನಾಲ್ಕು ಉದ್ಯಾನವನಗಳಲ್ಲಿ ಸಿಎಸ್‌ಆರ್ ಯೋಜನೆಯಡಿ 70,000ಕ್ಕೂ ಹೆಚ್ಚು ಗಿಡಗಳನ್ನು ನೆಟ್ಟು ಮಿಯಾವಾಕಿ ಮಾದರಿಯ ಕಿರು ಅರಣ್ಯಗಳನ್ನು ಅಭಿವೃದ್ಧಿಪಡಿಸುವ ಯೋಜನೆಯನ್ನೂ ಕೈಗೊಳ್ಳಲಾಗಿದೆ. ಈ ಯೋಜನೆಯು ನಗರದಲ್ಲಿ ಹಸಿರು ಹೊದಿಕೆಯನ್ನು ಹೆಚ್ಚಿಸುವುದರ ಜೊತೆಗೆ ಪರಿಸರ ಸಮತೋಲನ ಕಾಪಾಡಲು ನೆರವಾಗಲಿದೆ ಎಂದು ತಿಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ?ಕೊಡಗು | ನಾಲ್ವಡಿ ಕೃಷ್ಣರಾಜ ಒಡೆಯರ್ ಕನ್ನಡ ನಾಡಿನ ಅಭಿವೃದ್ಧಿಯ ಶಿಲ್ಪಿ: ಎಂ.ಪಿ. ಕೇಶವ ಕಾಮತ್

ಕಾರ್ಯಕ್ರಮದಲ್ಲಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ, ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತರೆಡ್ಡಿ, ಮೈಸೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನಾಗರಾಜ ಸಿದ್ದಪ್ಪ ಅಂಕಸದೊಡ್ಡಿ, ಮಹಾನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್ ಸೇರಿದಂತೆ ಪಾಲಿಕೆ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಮತ್ತು ಸಾರ್ವಜನಿಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಅಕ್ರಮ ಪೋಡಿ ದುರಸ್ತಿ: ರದ್ದು ಪಡಿಸಲು ನ್ಯಾಯಾಲಯ ಆದೇಶ 

ಸಕಲೇಶಪುರ ತಾಲೂಕಿನ ಸರ್ವೆಯರ್ ಹಾಗೂ ಸೂಪರ್‌ವೈಸರ್ ಸೇರಿ ಅಕ್ರಮವಾಗಿ ಕಿರುಹುಣಸೆ ಗ್ರಾಮದ...

ವಿಜಯಪುರ | ಮಧ್ವಾಚಾರ್ಯರ ದ್ವೈತ ಸಿದ್ಧಾಂತ ಭಾರತೀಯ ತತ್ವಶಾಸ್ತ್ರಕ್ಕೆ ಮಹತ್ವದ ಕೊಡುಗೆ: ಪ್ರೊ. ಪಿ.ಜಿ. ತಡಸ

ಮಧ್ವಾಚಾರ್ಯರು ದ್ವೈತ ತತ್ವವನ್ನು ದೇಶಾದ್ಯಂತ ಪಸರಿಸುವ ಮೂಲಕ ಭಾರತೀಯ ತತ್ವಶಾಸ್ತ್ರ ಹಾಗೂ...

ಹಾಸನ | ಮತದಾರರ ಗುರುತಿನ ಚೀಟಿ ಸುಟ್ಟ ಪ್ರಕರಣ 

ಸಕಲೇಶಪುರ ತಾಲೂಕಿನಲ್ಲಿ ಮತದಾರರ ಗುರುತಿನ ಚೀಟಿ ಹಾಗೂ ಇತರೆ ಕಾರ್ಡ್‌ಗಳನ್ನು ಸುಟ್ಟುಹಾಕಿರುವ...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ ವರದಿ ಬಳಿಕ ಎಚ್ಚೆತ್ತ ಅಧಿಕಾರಿಗಳು

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ...