ಮೈಸೂರು | ಸ್ವಚ್ಛತಾ ರಾಯಭಾರಿಗಳಾದ ವಸಿಷ್ಠ ಸಿಂಹ, ಹರಿಪ್ರಿಯ, ಅರುಣ್ ಯೋಗಿರಾಜ್

Date:

ಚಲನಚಿತ್ರ ಕಲಾವಿದೆಯರಾದ ವಸಿಷ್ಠ ಸಿಂಹ, ನಟಿ ಹರಿಪ್ರಿಯ, ಶಿಲ್ಪಿ ಅರುಣ್ ಯೋಗಿರಾಜ್, ಬಿಗ್ ಬಾಸ್ ಸ್ಪರ್ಧಿ ಸೂರಜ್ ಸಿಂಗ್, ಗಾಯಕಿ ಅನನ್ಯ ಭಟ್ ಹಾಗೂ ಆಲೋಕ್ ಇವರುಗಳು ಮೈಸೂರು ಮಹಾನಗರ ಪಾಲಿಕೆಯ ನೂತನ ಸ್ವಚ್ಛತಾ ರಾಯಭಾರಿಗಳಾಗಿ ಕಾರ್ಯನಿರ್ವಹಿಸಲಿದ್ದಾರೆ.

- Advertisement -

ಐತಿಹಾಸಿಕ ಪರಂಪರೆ ಹಾಗೂ ಸಾಂಸ್ಕೃತಿಕ ವೈಭವದಿಂದ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಮೈಸೂರು ನಗರದ ಸ್ವಚ್ಛತೆಯನ್ನು ಇನ್ನಷ್ಟು ಉತ್ತಮಪಡಿಸುವ ಉದ್ದೇಶದಿಂದ ಮೈಸೂರು ಮಹಾನಗರ ಪಾಲಿಕೆಯು ಆರು ಮಂದಿ ಸಾಧಕರನ್ನು ‘ಸ್ವಚ್ಛತಾ ಬ್ರಾಂಡ್ ಅಂಬಾಸಿಡರ್’ಗಳನ್ನಾಗಿ ನೇಮಕ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಸ್ವಚ್ಛ ಭಾರತ ಅಭಿಯಾನದಡಿ ಮೈಸೂರು ನಗರವನ್ನು ಕೇವಲ ಬಾಹ್ಯವಾಗಿ ಅಷ್ಟೇ ಅಲ್ಲದೆ, ನಾಗರಿಕರ ಮನೋಭಾವದಲ್ಲಿಯೂ ಸ್ವಚ್ಛತೆಯ ಮೌಲ್ಯಗಳನ್ನು ಬೆಳೆಸುವ ನಿಟ್ಟಿನಲ್ಲಿ ಪಾಲಿಕೆ ಈ ಕ್ರಮ ಕೈಗೊಂಡಿದೆ. ಚಲನಚಿತ್ರ, ಸಂಗೀತ ಹಾಗೂ ಕಲೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗುರುತರ ಸೇವೆ ಸಲ್ಲಿಸಿರುವ ಗಣ್ಯರ ಜನಪ್ರಿಯತೆ ಮತ್ತು ಬದ್ಧತೆಯನ್ನು ಗಮನಿಸಿ ಈ ಜವಾಬ್ದಾರಿ ನೀಡಲಾಗಿದೆ.

ನೇಮಕಗೊಂಡಿರುವ ಈ ಗಣ್ಯರು ನಗರದ ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಯ ಬಗ್ಗೆ ನಾಗರಿಕರಲ್ಲಿ ಅರಿವು ಮೂಡಿಸಲಿದ್ದಾರೆ. ಪಾಲಿಕೆಯು ಹಮ್ಮಿಕೊಳ್ಳುವ ಸ್ವಚ್ಛ ಭಾರತ ಅಭಿಯಾನದ ವಿವಿಧ ಕಾರ್ಯಕ್ರಮಗಳು ಹಾಗೂ ಜಾಗೃತಿ ಜಾಥಾಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲಿದ್ದಾರೆ. ಶಾಲಾ-ಕಾಲೇಜುಗಳು, ಶಿಕ್ಷಣ ಸಂಸ್ಥೆಗಳು ಮತ್ತು ಸಾರ್ವಜನಿಕ ವೇದಿಕೆಗಳಲ್ಲಿ ಸ್ವಚ್ಛತೆಯ ಸಂದೇಶವನ್ನು ಪರಿಣಾಮಕಾರಿಯಾಗಿ ತಲುಪಿಸುವ ಕೆಲಸವನ್ನು ಮಾಡಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರು ಅಂಕಿತ ಹಾಕುವಂತೆ ಒತ್ತಾಯಿಸಿ ಪ್ರತಿಭಟನೆ

ಸಂಪೂರ್ಣವಾಗಿ ಸೇವಾ ಮನೋಭಾವದಿಂದ, ಯಾವುದೇ ಗೌರವಧನ ಅಥವಾ ಆರ್ಥಿಕ ಲಾಭದ ಅಪೇಕ್ಷೆಯಿಲ್ಲದೆ ಸಾರ್ವಜನಿಕ ಹಿತದೃಷ್ಟಿಯಿಂದ ಈ ಸಾಧಕರು ರಾಯಭಾರಿಗಳಾಗಿ ನೇಮಕಗೊಂಡಿದ್ದಾರೆ. ಮೈಸೂರನ್ನು ಶಿಸ್ತುಬದ್ಧ ಹಾಗೂ ಮಾದರಿ ನಗರವಾಗಿ ರೂಪಿಸುವ ಪಾಲಿಕೆಯ ಆಶಯಕ್ಕೆ ಇವರ ಸಹಕಾರ ಜೊತೆಯಾಗಲಿದೆ ಎಂದು ಮೈಸೂರು ಮಹಾನಗರ ಪಾಲಿಕೆಯ ಆಯುಕ್ತ ಶೈಖ್ ತನ್ವಿರ್ ಆಸೀಫ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...