ಮೈಸೂರು | ಕೆರೆಹಾಡಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ಆದಿವಾಸಿಗಳ ನಿಗಮ ಸ್ಥಾಪನೆ ಭರವಸೆ

Date:

Advertisements

ಮೈಸೂರು ಜಿಲ್ಲೆಯ ಹೆಗ್ಗಡ ದೇವನಕೋಟೆ ತಾಲೂಕಿನ ಕೆರೆಹಾಡಿಗೆ ಕಳೆದ ದಿನ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದು, ಆದಿವಾಸಿಗಳ ಸಮಸ್ಯೆ ಆಲಿಸಿದ್ದಾರೆ. ಸಮಸ್ಯೆ ನಿವಾರಣೆಗೆ ‘ಆದಿವಾಸಿಗಳ ಅಭಿವೃದ್ಧಿ ನಿಗಮ’ ಸ್ಥಾಪನೆ ಕುರಿತಾಗಿ ಸದ್ಯದಲ್ಲೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

“ವನ್ಯಜೀವಿ ಮಂಡಳಿ ಸಭೆ ಕರೆದು ಅರಣ್ಯಾಧಿಕಾರಿಗಳಿಂದ ಅರಣ್ಯವಾಸಿಗಳಿಗೆ ಆಗುತ್ತಿರುವ ಸಮಸ್ಯೆಗಳ ಕುರಿತಾಗಿ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು” ಎಂದರು.

“ಹಲವು ದಶಕಗಳಿಂದ ಕೆರೆಹಾಡಿ ಸೇರಿದಂತೆ ಒಂಬತ್ತು ಹಾಡಿಗಳಿಗೆ ವಿದ್ಯುತ್ ಸಂಪರ್ಕ ಇಲ್ಲ. ಕುಡಿಯುವ ನೀರಿನ ಸಮಸ್ಯೆ ಇದೆ. ಇದು ಗಂಭೀರವಾದದ್ದು. ಯಾವ ಅರಣ್ಯ ಕಾಯ್ದೆ ಕೂಡ ಅರಣ್ಯವಾಸಿಗಳಿಗೆ ವಿದ್ಯುತ್, ನೀರು ಕೊಡಬೇಡಿ ಅಂತ ಹೇಳುವುದಿಲ್ಲ. ಅರಣ್ಯಾಧಿಕಾರಗಳು ಅನಗತ್ಯವಾಗಿ ಕಿರುಕುಳ, ತೊಂದರೆ ಕೊಡಬಾರದು” ಎಂದು ತಾಕೀತು ಮಾಡಿದರು.

Advertisements
ಸಿದ್ದರಾಮಯ್ಯ 109

“ಒಂದು ತಿಂಗಳಲ್ಲಿ ಕೆರೆಹಾಡಿ ಮತ್ತು ಇತರೆ ಎಂಟು ಹಾಡಿಗಳ ಕುಡಿಯುವ ನೀರು ಹಾಗೂ ವಿದ್ಯುತ್ ಸಂಪರ್ಕದ ಸಮಸ್ಯೆ ಬಗೆಹರಿಸಬೇಕು” ಎಂದು ಜಿಲ್ಲಾಧಿಕಾರಿ ಜಿ ಲಕ್ಷ್ಮಿಕಾಂತ್ ರೆಡ್ಡಿಯವರಿಗೆ ಸೂಚಿಸಿದರು.

“ಹಕ್ಕುಪತ್ರ ಇದ್ದರೂ ಅರಣ್ಯಾಧಿಕಾರಿಗಳು ಮನೆ ಕಟ್ಟಲು ಬಿಡುತ್ತಿಲ್ಲ. ಎರಡ್ಮೂರು ಎಕರೆ ಜಾಗದಲ್ಲಿ ಹಲವಾರು ದಶಕಗಳಿಂದ ಉಳುಮೆ ಮಾಡುತ್ತಿದ್ದರೂ ಕೇವಲ 2 ರಿಂದ 3 ಗುಂಟೆಗೆ ಹಕ್ಕು ಪತ್ರ ನೀಡಿದ್ದಾರೆ. ಜಮೀನಿನಲ್ಲಿ ಟ್ರ್ಯಾಕ್ಟರ್ ಬಳಸಲು ಅವಕಾಶ ನೀಡುತ್ತಿಲ್ಲ” ಎಂದು ಸಿಎಂ ಅವರಿಗೆ ಹಾಡಿ ಜನ ಅಹವಾಲು ಹೇಳಿಕೊಂಡರು.

ಸಿಎಂ ಸಿದ್ದರಾಮಯ್ಯ 55

“ಆದಿವಾಸಿಗಳೆಂದರೆ ಅವರು ಅರಣ್ಯದ ಭಾಗವೇ ಆಗಿದ್ದಾರೆ. ಇವರಿಂದ ಅರಣ್ಯಕ್ಕೆ ಯಾವುದೇ ತೊಂದರೆಯಾಗುವುದಿಲ್ಲ. ಆದ್ದರಿಂದ ಇವರಿಗೆ ಅನಗತ್ಯ ತೊಂದರೆ ಕೊಡಬಾರದು. ವನ್ಯ ಜೀವಿ ಮಂಡಳಿಗೆ ನಾನೇ ಅಧ್ಯಕ್ಷ ಆಗಿದ್ದೀನಿ. ಸದ್ಯದಲ್ಲೇ ಮಂಡಳಿ ಸಭೆ ಕರೆದು ಬುಡಕಟ್ಟು ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸುತ್ತೇನೆ” ಎಂದು ಭರವಸೆ ನೀಡಿದರು.

“ಆದಿವಾಸಿ ಸಮುದಾಯದ ಮಕ್ಕಳೂ ಕೂಡ ಶಾಲೆಗೆ ಹೋಗಬೇಕು. ಶಿಕ್ಷಣ ಮೊಟಕುಗೊಳಿಸದೆ ವಿದ್ಯಾವಂತರಾಗಬೇಕು. ಮೊದಲು ನಾಲ್ಕನೇ ತರಗತಿವರೆಗೂ ಮಾತ್ರ ಆಶ್ರಮ ಶಾಲೆಗಳು ಇದ್ದವು. ಈಗ ಎಂಟನೇ ತರಗತಿವರೆಗೂ ವಿಸ್ತರಣೆಯಾಗಿದ್ದು, ಪಿಯುಸಿವರೆಗೆ ವಿಸ್ತರಿಸಿ ಎನ್ನುವುದು ಆದಿವಾಸಿಗಳ ಬೇಡಿಕೆಯಾಗಿದೆ. ಈ ಬಗ್ಗೆ ಸಭೆ ಕರೆದು ಪರಿಶೀಲನೆ ನಡೆಸುತ್ತೇನೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಅಕ್ರಮವಾಗಿ ಗಾಂಜಾ ಸಂಗ್ರಹಿಸಿಟ್ಟಿದ್ದ ಮನೆ ಮೇಲೆ ಪೊಲೀಸ್ ದಾಳಿ; ಇಬ್ಬರು ಆರೋಪಿಗಳ ಬಂಧನ

“ಪರಿಶಿಷ್ಟ ಜಾತಿಯವರ ಒಳಮೀಸಲಾತಿಗೆ ಮುಂದಾಗಿರುವ ರೀತಿಯಲ್ಲೇ , ಪರಿಶಿಷ್ಠ ವರ್ಗದವರ ಒಳಮೀಸಲಾತಿಗೆ ಕ್ರಮ ವಹಿಸಬೇಕೆನ್ನುವ ಬೇಡಿಕೆಯಿದೆ. ಆದರೆ ಎಸ್‌ಸಿ ಒಳಮೀಸಲಾತಿ ಕುರಿತಂತೆ ಸುಪ್ರಿಂ ಕೋರ್ಟ್ ತೀರ್ಪು ನೀಡಿದೆ. ಅದರ ಆಧಾರದಲ್ಲಿ ಮುಂದುವರೆದಿದ್ದೇವೆ. ಎಸ್‌ಟಿ ಒಳಮೀಸಲಾತಿ ಬಗ್ಗೆ ಇನ್ನೂ ತೀರ್ಪು ಬಂದಿಲ್ಲ. ಈ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚಿಸಲಾಗುವುದು” ಎಂದರು.

ಶಾಸಕರಾದ ಯತೀಂದ್ರ ಸಿದ್ದರಾಮಯ್ಯ, ಅನಿಲ್ ಚಿಕ್ಕಮಾದು, ದರ್ಶನ್ ಧ್ರುವನಾರಾಯಣ, ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ, ಸಿಇಒ ಗಾಯತ್ರಿ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X