ಮೈಸೂರು | ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ

Date:

Advertisements

ವಿಜಯ ದಶಮಿಯ ಸಾಂಪ್ರದಾಯಿಕ ಪೂಜೆಯನ್ನು ರಾಜ ವಂಶಸ್ಥ ಯಧುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಅರಮನೆಯಲ್ಲಿ ನೆರವೇರಿಸಿದ್ದಾರೆ. ಬೆಳಗ್ಗೆ 9.45ಕ್ಕೆ ಆನೆ ಬಾಗಿಲಿಗೆ ಪಟ್ಟದ ಕುದುರೆ, ಪಟ್ಟದ ಆನೆ, ಪಟ್ಟದ ಹಸು ಆಗಮಿಸಿದ್ದವು. ಕಲ್ಯಾಣ ಮಂಟಪದಲ್ಲಿ ಖಾಸಾ ಆಯುಧಗಳಿಗೆ ಪೂಜೆ, ನಂತರ ಸವಾರಿ ತೊಟ್ಟಿಯಲ್ಲಿ ನಡೆದ ಜಟ್ಟಿ ಕಾಳಗವನ್ನು ಯಧುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ವೀಕ್ಷಣೆ ಮಾಡಿದರು.

ಚಿನ್ನ ಲೇಪಿತ ಪಲ್ಲಕ್ಕಿಯಲ್ಲಿ ಖಾಸಾ ಆಯುಧಗಳನ್ನು ಇಟ್ಟು 11ರಿಂದ 11:40ರ ಸಮಯದಲ್ಲಿ ಅರಮನೆಯಿಂದ ಭುವನೇಶ್ವರಿ ದೇವಾಲಯದವರೆಗೆ ವಿಜಯ ದಶಮಿ ಮೆರವಣಿಗೆ ಸಾಗಿ, ಶಮಿ ಪೂಜೆ ನೆರವೇರಿಸಿದರು.

ಈ ಮೂಲಕ ನವರಾತ್ರಿಯ 10 ದಿನಗಳ ಧಾರ್ಮಿಕ ಕೈಂಕರ್ಯಗಳು ಇಂದಿಗೆ ಕೊನೆಗೊಂಡವು. ಸಂಜೆ ಜಂಬೂಸವಾರಿ ಮೆರವಣಿಗೆ ನಡಯಲಿದೆ. ಗಣ್ಯರೊಂದಿಗೆ ಯಧುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಜಂಬೂಸವಾರಿಯ ಪುಷ್ಪಾರ್ಚನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Advertisements

ಸಂಜೆ 4.40ರಿಂದ 5ರವರೆಗೆ ಸಲ್ಲುವ ಶುಭ ಮೀನ ಮುಹೂರ್ತದಲ್ಲಿ ಅಂಬಾರಿಯಲ್ಲಿನ ಚಾಮುಂಡೇಶ್ವರಿ ದೇವಿಗೆ ಗಣ್ಯರು ಪುಷ್ಪಾರ್ಚನೆ ಮಾಡಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ರಾಜಪಥದಲ್ಲಿ ಸುಮಾರು ಐದು ಕಿ.ಮೀ ದೂರದವರೆಗೆ ಮೆರವಣಿಗೆ ಸಾಗಲಿದೆ. ನಂತರ ಬನ್ನಿಮಂಟಪದಲ್ಲಿ ಮೆರವಣಿಗೆ ಕೊನೆಗೊಳ್ಳಲಿದೆ. ಮೆರವಣಿಗೆ ಸಾಗುವ ವೇಳೆ ನಾಡಿನ ಕಲೆ, ಸಂಸ್ಕೃತಿ, ಸರ್ಕಾರದ ಯೋಜನೆಗಳನ್ನು ಬಿಂಬಿಸುವ ಸ್ತಬ್ಧಚಿತ್ರಗಳು ಇರಲಿವೆ.

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು. ಜಂಬೂ ಸವಾರಿ ಸಾಗುವ ಮಾರ್ಗದಲ್ಲಿ ಭಾರಿ ಬಿಗಿ ಭದ್ರತೆ ವಹಿಸಲಾಗಿದೆ. 6,000ಕ್ಕೂ ಹೆಚ್ಚು ಪೊಲೀಸರನ್ನು ಜಂಬೂ ಸವಾರಿ ಮಾರ್ಗದಲ್ಲಿ ನಿಯೋಜಿಸಲಾಗಿದೆ. ಒಬ್ಬರು ಡಿಐಜಿ, ಎಂಟು ಜನ ಎಸ್ಪಿ, 10 ಜನ ಅಡಿಷನಲ್ ಎಸ್ಪಿಗಳು ಹಾಗೂ ಸಿಟಿವಿ ಕ್ಯಾಮರಾಗಳು, ಗುಪ್ತಚರ ಇಲಾಖೆಯ ಅಧಿಕಾರಿಗಳು ಸೇರಿದಂತೆ ಭಾರಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಬಾಂಬ್ ಪತ್ತೆ ಮತ್ತು ನಿಗ್ರಹದಳ, ಶ್ವಾನದಳ ಸೇರಿದಂತೆ ಹೆಚ್ಚಿನ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X