ಮೈಸೂರು | ಸಿಡಿಮದ್ದು ಸಿಡಿದು ಹಸುವಿನ ಬಾಯಿ ಛಿದ್ರ; ಸಾವು-ಬದುಕಿನ ನಡುವೆ ಹಸು ಹೋರಾಟ

Date:

ಹಂದಿ ಬೇಟೆಗಾಗಿ ಇಟ್ಟಿದ್ದ ಸಿಡಿಮದ್ದನ್ನು ಹಸುವೊಂದು ತಿಂದಿದ್ದು, ಬಾಯಿ ಹಾಕುತ್ತಿದ್ದಂತೆ ಸಿಡಿಮದ್ದು ಸ್ಪೋಟಿಸಿ ಹಸುವಿನ ಬಾಯಿ ಛಿದ್ರಗೊಂಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

- Advertisement -

ಜಿಲ್ಲೆಯ ನಂಜನಗೂಡು ತಾಲೂಕಿನ ಅಡಕನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ದುರ್ಘಟನೆ ನಡೆದಿದೆ. ಕೆಂಪಿಸಿದ್ದನಹುಂಡಿ ಗ್ರಾಮದ ರೈತ ಚನ್ನನಂಜೇಗೌಡ ಅವರ ಹಸುವಿನ ಬಾಯಿ ಛಿದ್ರವಾಗಿದೆ. ಹಸು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗ್ರಾಮದ ವಾಟರ್ ಟ್ಯಾಂಕ್‌ ಬಳಿ ಜಾನುವಾರು ಹಸುವನ್ನು ಮೇಯಲು ಬಿಟ್ಟಿದ್ದರು. ಆದರೆ, ಅದೇ ಜಾಗದಲ್ಲಿ ಕಾಡು ಹಂದಿ ಬೇಟೆಗಾಗಿ ಸಿಡಿಮದ್ದು ಇಡಲಾಗಿತ್ತು. ಸಿಡಿಮದ್ದು ಇದ್ದ ಜಾಗದಲ್ಲಿ ಹಸು ಬಾಯಿ ಹಾಕಿದ್ದು, ತಕ್ಷಣವೇ ಸಿಡಿಮದ್ದು ಸಿಡಿದಿದೆ. ಹಸುವಿನ ಬಾಯಿ ಛಿದ್ರಗೊಂಡಿದೆ.

ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದಾರೆ.

2020ರಲ್ಲಿ ಇಂಥದ್ದೇ ಘಟನೆ ನಡೆದಿತ್ತು. ಕೇರಳದ ಮಲಪ್ಪುರಂ ಜಿಲ್ಲೆಯ ಸೈಲೆಂಟ್​ ವ್ಯಾಲಿಯಲ್ಲಿ ಆಹಾರ ಹುಡುಕುತ್ತಾ ಗ್ರಾಮವೊಂದರ ಸಮೀಪಕ್ಕೆ ಬಂದಿದ್ದ ಗರ್ಭಿಣಿ ಆನೆಗೆ ಕೆಲ ಕಿಡಿಗೇಡಿಗಳು ಪೈನಾಪಲ್​ನಲ್ಲಿ ಸ್ಪೋಟಕ ತುಂಬಿ ತಿನ್ನಲು ಕೊಟ್ಟಿದ್ದರು. ಅದನ್ನು ತಿಂದ ಕೂಡಲೇ ಸಿಡಿಮದ್ದು ಸ್ಪೋಟಗೊಂಡು ಆನೆ ಸಾವನ್ನಪ್ಪಿತ್ತು. ಘಟನೆ ಕುರಿತು ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...