ಮೈಸೂರು | ದಲಿತ ಯುವ ಚಿಂತಕ ಸಿ ನರೇಂದ್ರ ನಾಗಾವಾಲರಿಗೆ ದ.ಸಾ.ಪ ರಾಜ್ಯ ಗೌರವ ಪ್ರಶಸ್ತಿ

Date:

ದಲಿತ ಸಾಹಿತ್ಯ ಪರಿಷತ್‌ ರಾಜ್ಯ ಘಟಕವು ನಡೆಸಿದ 10ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳದಲ್ಲಿ ಸಮಾಜ ಸೇವಾ ಕ್ಷೇತ್ರಕ್ಕೆ ಕೊಡಮಾಡುವ ರಾಜ್ಯ ಗೌರವ ಪ್ರಶಸ್ತಿಗೆ ಸಿ ನರೇಂದ್ರ ನಾಗವಾಲರವರ ಹೆಸರನ್ನು ರಾಜ್ಯ ಸಮಿತಿಗೆ ಶಿಫಾರಸು ಮಾಡಿ, ರಾಜ್ಯ ಗೌರವ ಪ್ರಶಸ್ತಿಗೆ ಇವರನ್ನು ಆಯ್ಕೆ ಮಾಡಿ ಗೌರವಿಸಿರುವುದು ರಾಜ್ಯ ಹಾಗೂ ಜಿಲ್ಲೆಯ ಹೆಮ್ಮೆ ಎಂದು ದಲಿತ ಸಾಹಿತ್ಯ ಪರಿಷತ್‌ ಜಿಲ್ಲಾ ಸಂಯೋಜಕ ಡಾ. ಚಂದ್ರಗುಪ್ತ ಅಭಿಪ್ರಾಯಪಟ್ಟರು.

- Advertisement -

ದಲಿತ ಸಾಹಿತ್ಯ ಪರಿಷತ್‌ ಮೈಸೂರು ಜಿಲ್ಲಾ ಘಟಕದ ಕಾರ್ಯಕರ್ತರು ಹಮ್ಮಿಕೊಂಡಿದ್ದ ರಾಜ್ಯ ಪ್ರಶಸ್ತಿ ಸಮಾರಂಭ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ವಿಜಯಪುರದ ರಂಗಮಂದಿರದಲ್ಲಿ ಜುಲೈ 29 ಮತ್ತು 30 ರಂದು ಎರಡು ದಿನಗಳ ಕಾಲ ದಲಿತ ಸಾಹಿತ್ಯ ಪರಿಷತ್ತು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಖಿಲ ಭಾರತ 10ನೇ ದಲಿತ ಸಾಹಿತ್ಯ ಸಮ್ಮೇಳನದಲ್ಲಿ ರಾಜ್ಯ ಗೌರವ ಪ್ರಶಸ್ತಿ ಪುರಸ್ಕೃತರಾಗಿ ಸಿ.ನರೇಂದ್ರ ನಾಗವಾಲ ಅವರನ್ನು ಆಯ್ಕೆ ಮಾಡಲಾಗಿತ್ತು” ಎಂದು ತಿಳಿಸಿದರು.

“ಬುದ್ಧ, ಬಸವ, ಅಂಬೇಡ್ಕರ್‌ ಅವರ ಚಿಂತನೆ ಮತ್ತು ಹೋರಾಟವನ್ನು ಮೈಗೂಡಿಸಿಕೊಂಡಿರುವ ಎಐಸಿಸಿ ಅಧ್ಯಕ್ಷ ಡಾ. ಎಂ ಮಲ್ಲಿಕಾರ್ಜುನ ಖರ್ಗೆಯವರ ಮಾನಸಪುತ್ರರೆಂದೇ ಹೆಸರುವಾಸಿಯಾಗಿರುವ ಇವರು ಪ್ರಸ್ತುತದಲ್ಲಿ ಡಾ. ಎಂ ಮಲ್ಲಿಕಾರ್ಜುನ ಖರ್ಗೆ ಅಭಿಮಾನಿಗಳ ಬಳಗದ ರಾಜ್ಯಾಧ್ಯಕ್ಷರಾಗಿ, ಕೆಪಿಸಿಸಿ ಕಾರ್ಯದರ್ಶಿಗಳಾಗಿ ಮತ್ತು ನಾಗವಾಲ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರು ಹಾಗೂ ಹಾಲಿ ಸದಸ್ಯರಾಗಿದ್ದಾರೆ” ಎಂದರು.

“ದಲಿತ ಯುವ ಮುಖಂಡರಾದ ಇವರು ದಲಿತ ಚಳವಳಿ, ದಲಿತ ವಿದ್ಯಾರ್ಥಿಗಳ ಚಳವಳಿಗಳಲ್ಲಿ ಭಾಗವಹಿಸಿ, ದಲಿತರ ನೋವು ನಲಿವುಗಳಿಗೆ ಸ್ಪಂದಿಸುವ ಯುವ ನೇತಾರರಾಗಿದ್ದಾರೆ. ಸಾಮಾಜಿಕವಾಗಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಇವರು ಗ್ರಾಮಾಂತರ ಪ್ರದೇಶಗಳಲ್ಲಿ ದಲಿತರ ಮೇಲೆ ನಡೆಯುತ್ತಿರುವ ಶೋಷಣೆ, ದಬ್ಬಾಳಿಕೆ, ದೌರ್ಜನ್ಯ, ಅಸಮಾನತೆಯ ವಿರುದ್ಧ ಹೋರಾಟದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಯುವ ದಲಿತ ಸಮೂಹಕ್ಕೆ ಧ್ವನಿಯಾಗಿದ್ದಾರೆ” ಎಂದು ಹೇಳಿದರು.

“ಸಮಾಜ ಸೇವೆ ಮತ್ತು ಅಭಿವೃದ್ಧಿ ಪರವಾದ ಕಾರ್ಯಚಟುವಟಿಕೆಗಳು, ಹೋರಾಟಗಳು, ಸಮಾಜ ಕಟ್ಟುವ ಯುವ ಚಿಂತನೆಗಳನ್ನು ದಲಿತ ಸಾಹಿತ್ಯ ಪರಿಷತ್‌ ಮೈಸೂರು ಜಿಲ್ಲಾ ಘಟಕ ಮತ್ತು ರಾಜ್ಯ ಘಟಕವು ಇವರನ್ನು ಗುರುತಿಸಿದೆ. ಇದೇ ರೀತಿ ಸಮಾಜ ಸೇವಾ ಕಾರ್ಯಗಳಲ್ಲಿ ಇನ್ನೂ ಹೆಚ್ಚು ಕೆಲಸ ಮಾಡಿ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಉನ್ನತ ಪ್ರಶಸ್ತಿಗಳು ಸಿಗಲಿ, ಉನ್ನತ ಸ್ಥಾನಮಾನಗಳನ್ನು ಅಲಂಕರಿ ಉತ್ತಮ ನಾಯಕರಾಗಲಿ” ಎಂದು ಆಶಿಸಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಮೊಗೇರ ಸಮುದಾಯವನ್ನು ಪ್ರವರ್ಗ-1ರ ಪಟ್ಟಿಯಿಂದ ಕೈಬಿಡದಂತೆ ದಸಂಸ ಆಗ್ರಹ

ಪ್ರಶಸ್ತಿ ಪುರಸ್ಕೃತ ಸಿ ನರೇಂದ್ರ ನಾಗಾವಾಲ ಅವರು ಮಾತನಾಡಿ, ಪ್ರಶಸ್ತಿ ಪ್ರದಾನ ಮಾಡಿದ ಸಂಘಟನೆಯ ಕಾರ್ಯಕರ್ತರಿಗೆ ವಂದಿಸಿದರು.

ಈ ವೇಳೆ ದಲಿತ ಸಾಹಿತ್ಯ ಪರಿಷತ್ತು ಮೈಸೂರು ಜಿಲ್ಲಾ ಘಟಕ ಅಧ್ಯಕ್ಷ ಡಾ. ರಂಗಸ್ವಾಮಿ ಕಾಳಹುಂಡಿ, ಉಪಾಧ್ಯಕ್ಷೆ ಡಾ. ಜಯಶೀಲ ಎಸ್‌, ಕಾರ್ಯದರ್ಶಿ ಡಾ. ಟಿ. ಮಂಜು ಸತ್ತಿಗೆಹುಂಡಿ, ಖಜಾಂಚಿ ಡಾ. ಶಿವಶಂಕರ ಬಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...