ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್. ಸಿ. ಮಹದೇವಪ್ಪ ಅವರನ್ನು ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಜಿಲ್ಲಾಡಳಿತದ ವತಿಯಿಂದ ಇಂದು ಬೆಂಗಳೂರಿನ ಸಚಿವರ ನಿವಾಸದಲ್ಲಿ ಅಧಿಕೃತ ಆಹ್ವಾನ ನೀಡಲಾಯಿತು.
ಇದೇ ವೇಳೆ ಸಚಿವರು ಯುವ ಸಂಭ್ರಮ ಪೋಸ್ಟರ್ ಬಿಡುಗಡೆ ಮಾಡಿದರು.
ಈ ಸುದ್ದಿ ಓದಿದ್ದೀರಾ? ಮೈಸೂರು | ಪತ್ರಿಕಾ ವಿತರಕರ ವೃತ್ತಿ ಶ್ರೇಷ್ಠವಾದದ್ದು : ಜಿ ಲಕ್ಷ್ಮಿಕಾಂತ್ ರೆಡ್ಡಿ
ಆಹ್ವಾನ ನಿಯೋಗದಲ್ಲಿ ದಸರಾ ವಿಶೇಷಾಧಿಕಾರಿಯಾದ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ್ ರೆಡ್ಡಿ, ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಮಹಾನಗರ ಪಾಲಿಕೆ ಆಯುಕ್ತರಾದ ಶೇಕ್ ತನ್ವಿರ್ ಆಸಿಫ್, ಜಿಲ್ಲಾ ಪಂಚಾಯಿತಿ ಸಿಇಒ ಎಸ್. ಯುಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಡಾ. ಪಿ. ಶಿವರಾಜು, ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ. ಜೆ. ರೂಪಾ ಸೇರಿದಂತೆ ಇನ್ನಿತರರು ಇದ್ದರು.