ಮೈಸೂರು ದಸರಾ ಉತ್ಸವಕ್ಕೆ ಸಿದ್ಧತೆಗಳು ನಡೆಯುತ್ತಿದ್ದು, ಜಿಲ್ಲಾಡಳಿತ ಹಾಗೂ ಸಚಿವ ಡಾ ಹೆಚ್ ಸಿ ಮಹದೇವಪ್ಪ ಅವರು ರಾಜ ವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರನ್ನು ಸಾಂಪ್ರದಾಯಿಕವಾಗಿ ಆಹ್ವಾನಿಸಿದ್ದಾರೆ.
ಅರಮನೆ ನಿವಾಸದಲ್ಲಿ ಪ್ರಮೋದಾ ದೇವಿ ಒಡೆಯರ್ ಅವರನ್ನು ಭೇಟಿಯಾಗಿ ಜಿಲ್ಲಾಡಳಿತದ ಪರವಾಗಿ ಸಾಂಪ್ರದಾಯಿಕ ಫಲ, ತಾಂಬೂಲ ನೀಡಿ ದಸರಾ ಉತ್ಸವದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನಿಸಿದರು.

ಭೇಟಿ ಸಮಯದಲ್ಲಿ ಕುಶಲೋಪರಿ ವಿಚಾರಿಸಿದ ಸಚಿವರು, ವಿಶ್ವವಿಖ್ಯಾತ ದಸರಾ ಆಚರಣೆ ಕುರಿತಾಗಿ ಚರ್ಚಿಸಿ, ಸರ್ಕಾರದಿಂದ ಪ್ರತಿವರ್ಷ ನೀಡಲಾಗುವ ಗೌರವಧನದ ಚೆಕ್ ನೀಡಿ ಗೌರವಿಸಿದರು.
ಈ ಸುದ್ದಿ ಓದಿದ್ದೀರಾ? ಮೈಸೂರು | ಸಚಿವ ಡಾ ಹೆಚ್ ಸಿ ಮಹದೇವಪ್ಪನವರಿಂದ ಯುವ ದಸರಾ ಕಾರ್ಯಕ್ರಮ ಸ್ಥಳ ಪರಿಶೀಲನೆ
ಭೇಟಿಯ ವೇಳೆ ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ ಸಿಇಒ ಕೆ ಎಂ ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಟುವರ್ಧನ, ಅಪರ ಜಿಲ್ಲಾಧಿಕಾರಿ ಪಿ ಶಿವರಾಜು, ಅರಮನೆ ಮಂಡಳಿ ಉಪ ನಿರ್ದೇಶಕ ಸುಬ್ರಹ್ಮಣ್ಯ, ಅರಮನೆ ಎಸಿಪಿ ಚಂದ್ರಶೇಖರ್ ಸೇರಿದಂತೆ ಇದ್ದರು.