ಮೈಸೂರು | ಅ.20ರಂದು ದಸರಾ ಕವಿ-ಕಾವ್ಯ ಸಂಭ್ರಮ

Date:

Advertisements

ಸ್ಪಂದನ ಸಾಂಸ್ಕೃತಿಕ ಪರಿಷತ್ ಹಾಗೂ ‌ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದೊಂದಿಗೆ ‘ದಸರಾ ಕವಿ-ಕಾವ್ಯ ಸಂಭ್ರಮ’ದ ಅಂಗವಾಗಿ ಅಕ್ಟೋಬರ್‌ 20ರಂದು ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ದಿನವಿಡೀ ರಾಜ್ಯ ಮಟ್ಟದ ಕಾವ್ಯೋತ್ಸವ ಹಾಗೂ ಡಾ. ಸಿಪಿಕೆ ಕಾವ್ಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಪರಿಷತ್ ಅಧ್ಯಕ್ಷ ಟಿ ಸತೀಶ್ ಜವರೇಗೌಡ ತಿಳಿಸಿದ್ದಾರೆ.

ಮೈಸೂರು ನಗರದಲ್ಲಿ ಪ್ರಕಟಣೆಯಲ್ಲಿ ತಿಳಿಸಿದ್ದು, “ದಸರಾ ಕಾವ್ಯೋತ್ಸವವನ್ನು ಪ್ರಸಿದ್ಧ ಕವಯಿತ್ರಿ ಹಾಗೂ ಸ್ತ್ರೀವಾದಿ ಚಿಂತಕಿ ಪ್ರೊ ಚ ಸರ್ವಮಂಗಳಾ ಉದ್ಘಾಟಿಸಲಿದ್ದು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್ ಅಧ್ಯಕ್ಷತೆ ವಹಿಸುವರು. ಸ್ಪಂದನ ಸಾಂಸ್ಕೃತಿಕ ಪರಿಷತ್ತಿನ ಅಧ್ಯಕ್ಷ ಟಿ ಸತೀಶ್ ಜವರೇಗೌಡ ಆಶಯ ನುಡಿಗಳನ್ನಾಡುವರು” ಎಂದು ತಿಳಿಸಿದರು.

“ಮುಖ್ಯ ಅತಿಥಿಗಳಾಗಿ ರಾಜ್ಯ ಸರ್ಕಾರಿ ನೌಕರರ ಸಂಘದ ನಿಕಟಪೂರ್ವ ರಾಜ್ಯಾಧ್ಯಕ್ಷ ಹೆಚ್ ಕೆ ರಾಮು, ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಮಾಜಿ ಸದಸ್ಯ ಡಾ ಈ ಸಿ ನಿಂಗರಾಜ್ ಗೌಡ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಪಿ ಶಾಂತರಾಜು, ಸಾಹಿತಿ ಜೆ ರಾಮಲಿಂಗೇಗೌಡ, ನಿವೃತ್ತ ಮುಖ್ಯ ಶಿಕ್ಷಕ ಯೋಗೇಂದ್ರ, ಸಮಾಜ ಸೇವಕ ಅರಸು ಮಡಿಲು, ಜಿಲ್ಲಾ ಸರ್ಕಾರಿ ನೌಕರರ ಸಂಘದ ಸಂಘಟನಾ ಕಾರ್ಯದರ್ಶಿಗಳಾದ ಬಿ ಎಸ್ ಸತೀಶ್ ಮತ್ತು ಎಂ ವಿ ಭಾಸ್ಕರ್ ಪಾಲ್ಗೊಳ್ಳುವರು” ಎಂದರು.

Advertisements

ಕಾವ್ಯೋತ್ಸವ : ಮಧ್ಯಾಹ್ನ 12ಕ್ಕೆ ಮೊದಲ‌ ಕವಿಗೋಷ್ಠಿ ನಡೆಯಲಿದ್ದು, ಕುಣಿಗಲ್‌ನ ಕನ್ನಡ ಸಹ ಪ್ರಾಧ್ಯಾಪಕಿ ಡಾ. ಲಕ್ಷ್ಮಿನರಸಮ್ಮ ಆಶಯ ನುಡಿಗಳನ್ನಾಡುವರು. ಶಿವಮೊಗ್ಗದ ಹಿರಿಯ ಸಾಹಿತಿ ಡಾ. ಎಚ್ ಎಸ್ ರುದ್ರೇಶ್ ಅಧ್ಯಕ್ಷತೆ ವಹಿಸುವರು. ಮಧ್ಯಾಹ್ನ 2:30ಕ್ಕೆ ನಡೆಯುವ ಎರಡನೇ ಕವಿಗೋಷ್ಠಿಗೆ ಸಾಹಿತಿ ಶಿವಬಸಪ್ಪ ಹೊರೆಯಾಲ ಆಶಯ ನುಡಿಗಳನ್ನಾಡುವರು. ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ಉಪನ್ಯಾಸಕಿ ಹಾಗೂ ಕವಯಿತ್ರಿ ಡಾ. ಹೆಚ್ ಕೆ ಹಸೀನಾ ಅಧ್ಯಕ್ಷತೆ ವಹಿಸುವರು. ಎರಡೂ ಕವಿಗೋಷ್ಠಿಗಳಲ್ಲಿ 84 ಮಂದಿ ಕವಿ-ಕವಯಿತ್ರಿಯರು ಕವನ ವಾಚನ ಮಾಡುವರು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಮನಗರ | ಕಸಾಪದಿಂದ ಅಗಲಿದ ಉದ್ಯಮಿ ರತನ್ ಟಾಟಾಗೆ ನುಡಿನಮನ

ಪ್ರಶಸ್ತಿ ಪ್ರದಾನ : ಸಂಜೆ 4ಕ್ಕೆ ನಡೆಯುವ ಸಮಾರೋಪ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆಯನ್ನು ವಿಧಾನ ಪರಿಷತ್ ಸದಸ್ಯ ಡಾ.ಡಿ ತಿಮ್ಮಯ್ಯ ವಹಿಸಲಿದ್ದು, ಖ್ಯಾತ ಸಾಹಿತಿ ಮತ್ತು ವಿಚಾರವಾದಿ ಪ್ರೊ.‌ ಕೆ ಎಸ್ ಭಗವಾನ್ ʼಡಾ. ಸಿಪಿಕೆ ಕಾವ್ಯ ಪ್ರಶಸ್ತಿ’ ಪ್ರದಾನ ಮಾಡುವರು. ಪರಿಷತ್ತಿನ ಅಧ್ಯಕ್ಷ ಟಿ. ಸತೀಶ್ ಜವರೇಗೌಡ ಅಭಿನಂದನಾ ಭಾಷಣ ಮಾಡುವರು. ಪಂಪ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ. ಸಿಪಿಕೆ ಉಪಸ್ಥಿತರಿರುವರು” ಎಂದರು.

“ಇದೇ ಸಂದರ್ಭದಲ್ಲಿ ನಾಡಿನ ಪ್ರತಿಭಾನ್ವಿತ ಕವಯಿತ್ರಿಯರಾದ ಡಾ. ವಿಜಯಮಾಲಾ ರಂಗನಾಥ್, ವಿದ್ಯಾರಶ್ಮಿ ಪೆಲತ್ತಡ್ಕ, ಡಾ. ಬಿ ಆರ್ ಶೃತಿ ಹಾಗೂ ಕವಿಗಳಾದ ಮಂಜು‌ ಕೋಡಿ ಉಗನೆ, ಡಾ. ನಾಗಣ್ಣ ಕಿಲಾರಿ, ಎನ್ ಎಸ್ ಚಾಂದ್ ಪಾಷ, ಗಣಂಗೂರು ನಂಜೇಗೌಡ, ಡಾ. ಗುಣವಂತ ಮಂಜು ಅವರಿಗೆ ಡಾ. ಸಿಪಿಕೆ ಕಾವ್ಯ ಪ್ರಶಸ್ತಿ ಪ್ರದಾನ ಮಾಡಲಾಗುವುದು” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X