ಮೈಸೂರು | ವಾಹನ ತಪಾಸಣೆ ಹೆಸರಲ್ಲಿ ಹಗಲು ದರೋಡೆ; ಸ್ಥಳೀಯರ ಆರೋಪ

Date:

ಮೈಸೂರು ನಗರ ಪ್ರದೇಶಗಳಲ್ಲಿ ನಗರ ಸಂಚಾರ ಪೊಲೀಸರಿಂದ ವಾಹನ ತಪಾಸಣೆ ನಡೆಯುತ್ತಿದೆ. ನಗರ ಸಂಚಾರ ಪೊಲೀಸರು ತಪಾಸಣೆ ವೇಳೆ ಎಲ್ಲ ವಾಹನಗಳನ್ನು ತಡೆದು, ಗಂಟೆಗಟ್ಟಲೆ ನಿಲ್ಲಿಸಿಕೊಂಡು ಸಮಯ ವ್ಯರ್ಥ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.

- Advertisement -

“ನಗರದ ಸಬರ್‌ ರಸ್ತೆ, ಅರಮನೆ ರಸ್ತೆ ಆರ್‌ ಗೇಟ್‌ ಬಳಿ ಸಂಚಾರ ಪೊಲೀಸರ ದಂಡು ಜಮಾಯಿಸಿದ್ದು, ತಪಾಸಣೆ ಹೆಸರಿನಲ್ಲಿ ಎಲ್ಲ ವಾಹನಗಳನ್ನು ತಡೆದು ಹಣ ವಸೂಲಿ ಮಾಡುತ್ತಿದ್ದಾರೆ. ಮೇಲ್ನೋಟಕ್ಕೆ ಹಗಲು ದರೋಡೆಯಂತೆ ಕಂಡುಬರುತ್ತಿದೆ” ಎಂದು ಸ್ಥಳೀಯ ವಾಹನ ಸವಾರರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Quockerwodger’: ಶಶಿ ತರೂರ್ ಸೂಚಿಸಿದ ಹೊಸ ರಾಜಕೀಯ ಪದ!

ಇದು 19ನೇ ಶತಮಾನದ ಇಂಗ್ಲಿಷ್ ಭಾಷೆಯಲ್ಲಿ ಬಳಕೆಯಲ್ಲಿದ್ದ ಅಪರೂಪದ ಪದ. ಮೂಲತಃ ದಾರಗಳ ಮೂಲಕ ನಿಯಂತ್ರಿಸಲ್ಪಡುವ ಮರದ ಗೊಂಬೆಯನ್ನು ಸೂಚಿಸುತ್ತಿತ್ತು. ಗೊಂಬೆಯಾಟದಲ್ಲಿ ಸೂತ್ರಧಾರ ದಾರ ಎಳೆದಂತೆ ಗೊಂಬೆ ಕೈಕಾಲು ಆಡಿಸುತ್ತದೆ. ಗೊಂಬೆ ಚಲಿಸುತ್ತದೆಯೇ...

ರಾಷ್ಟ್ರೀಯವಾದ ಹೊಟ್ಟೆ ತುಂಬಿಸುವುದಿಲ್ಲ; ಟ್ರಂಪ್‌ಗೆ ಅಮೆರಿಕನ್ನರು ಕಲಿಸಿದ ಪಾಠ...

ಬೆಲೆ ಏರಿಕೆ, ದುಬಾರಿ ಜೀವನ, ಕುಸಿಯುತ್ತಿರುವ ಖರೀದಿ ಸಾಮರ್ಥ್ಯ ಹಾಗೂ ಆರ್ಥಿಕ ಅನಿಶ್ಚಿತತೆ—ಇವು ಇತ್ತೀಚೆಗೆ ನಡೆದ ಅಮೆರಿಕದ ಮಧ್ಯಂತರ ಚುನಾವಣಾ ವಿಷಯಗಳಾಗಿದ್ದವು. ಇದು ರಾಷ್ಟ್ರೀಯತೆಯ ಆವೇಶ, ಬಲಿಷ್ಠ ನಾಯಕತ್ವವೆಂಬ ಪ್ರಚಾರ ಹಾಗೂ ರಾಜಕೀಯ...

ಕ್ಯಾಂಪಸ್ ರಾಜಕಾರಣದ ಹರಣ: ಎಎಂಯು, ಜಾಮಿಯಾದಲ್ಲಿ ಸೊಲ್ಲಡಗಿದ್ದರ ಆಂತರ್ಯವೇನು?

ಸ್ವಾತಂತ್ರ್ಯ ಸಂಗ್ರಾಮದ ಗರಡಿಯಾಗಿ, ದೇಶಕ್ಕೆ ಕ್ರಾಂತಿಕಾರಿ ನಾಯಕರನ್ನು ನೀಡಿದ್ದ ಅಲೀಗಢ ಮತ್ತು ಜಾಮಿಯಾ ಅಂಗಳಗಳು ಇಂದು ಮೌನಕ್ಕೆ ಜಾರಿವೆ. 2006ರ ನಿರ್ಬಂಧಗಳಿಂದ ಹಿಡಿದು ಮೋದಿ ಸರ್ಕಾರದ ಅವಧಿಯ ತನಿಖೆಗಳವರೆಗೆ - ಮುಸ್ಲಿಂ ವಿಶ್ವವಿದ್ಯಾಲಯಗಳ...
ವಾಹನ ತಪಾಸಣೆ

“ಪರೀಕ್ಷೆ ಮುಗಿಸಿಕೊಂಡು, ಮುಂದಿನ ಪರೀಕ್ಷೆಗೆ ಕೆಲವು ನೋಟ್ಸ್‌ಗಳನ್ನು ತೆಗೆದುಕೊಳ್ಳಲು ಅರಮನೆ ರಸ್ತೆ ಮಾರ್ಗದಲ್ಲಿ ಹೋಗುತ್ತಿದ್ದಾಗ ಆರ್‌ ಗೇಟ್‌ ಬಳಿ ತನ್ನ ವಾಹನವನ್ನು ತಡೆದು ಗಂಟೆ ಗಟ್ಟಲೆ ನಿಲ್ಲಿಸಿಕೊಂಡಿದ್ದಾರೆ. ದಾಖಲೆಗಳೆಲ್ಲವನ್ನು ತೋರಿಸಿದರೂ ಯಾವಾಗಲೋ ಸಿಗ್ನಲ್‌ ಜಂಪ್‌ ಮಾಡಿದ್ದೀಯ ಎಂದು ಹೇಳಿ ಗಾಡಿ ತಡೆದಿದ್ದಾರೆ” ಎಂದು ವಿದ್ಯಾರ್ಥಿಯೊಬ್ಬರು ಈ ದಿನ. ಕಾಮ್‌ಗೆ ತಿಳಿಸಿದ್ದಾರೆ.

“ಹಣವಿಲ್ಲ ಎಂದು ಹೇಳಿದರೂ ಬಿಡದೆ ತಡೆ ಹಿಡಿದಿದ್ದು, ಕೊನೆಗೆ ₹500 ಹಣ ಕಸಿದುಕೊಂಡು ಕಳುಹಿಸಿದರು. ನಾನು ಕೆಲಸ ಮಾಡಿಕೊಂಡು ಓದುತ್ತಿದ್ದೇನೆ. ಬಂದ ಹಣದಲ್ಲಿ ಮನೆಗೆ ಕೊಡುವುದರ ಜೊತೆಗೆ ನನ್ನ ಓದಿಗೂ ಅದೇ ಹಣವನ್ನು ಬಳಸಿಕೊಳ್ಳಬೇಕು. ಪರೀಕ್ಷೆಗೆ ಓದಲು ನೋಟ್ಸ್‌ ತೆಗೆದುಕೊಳ್ಳಲು ಇಟ್ಟುಕೊಂಡು ಹೋಗುತ್ತಿದ್ದ ಹಣವನ್ನು ಅವರಿಗೆ ನೀಡಿ ಪುಸ್ತಕವಿಲ್ಲದೇ ಬರಿಗೈಯಲ್ಲಿ ಮನೆಗೆ ಹೋಗುವಂತಾಯಿತು” ಎಂದು ಅವಲತ್ತುಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಧಾರವಾಡ | ವ್ಯಾಪಕವಾದ ಅಪ್ರಾಪ್ತ ಮಕ್ಕಳ ಬೈಕ್ ಸವಾರಿ; ಸಂಚಾರಿ ಪೊಲೀಸ್‌ ನಿರ್ಲಕ್ಷ್ಯ

ವಾಹನ ತಪಾಸಣೆಗೆ ಸಂಬಂಧಿಸಿದಂತೆ ಈ ದಿನ.ಕಾಮ್‌ ಎಸಿಪಿ ಟ್ರಾಫಿಕ್‌ ಅವರನ್ನು ಸಂಪರ್ಕಿಸಿದಾಗ ಪ್ರತಿಕ್ರಿಯಿಸಿದ್ದು, ಯಾರೋ ಹಾಗೆ ಹೇಳಿ ಹಣ ತೆಗೆದುಕೊಳ್ಳುತ್ತಿದ್ದಾರೆಂದು ಹೇಳಿದರೆ ಹೇಗೆ? ಹಣ ತೆಗೆದುಕೊಂಡು ರಶೀದಿ ಕೊಡದೆ ಕಳುಹಿಸಿರುವುದಕ್ಕೆ ಪ್ರೂಫ್‌ ಬೇಕಲ್ಲವೇ ಎಂದರು.

“ಯಾರ ಬಳಿ ಹಣ ತೆಗೆದುಕೊಂಡು ರಶೀದಿ ಕೊಡದೆ ಕಳುಹಿಸಿದ್ದಾರೆ, ಹಣ ನೀಡಿದವರು ಬಂದು ತೆಗೆದುಕೊಂಡಿರುವವರ ವಿರುದ್ಧ ದೂರು ನೀಡಲಿ. ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ” ಎಂದು ಹೇಳಿದರು.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ನ.30ರವರೆಗೆ ಕಾಲುವೆಗೆ ನಿರಂತರ ನೀರು ಹರಿಸಿ, ಎಕರೆಗೆ ₹50 ಸಾವಿರ ಪರಿಹಾರ ನೀಡಿ: ರೈತರ ಆಗ್ರಹ

ತೀವ್ರ ಬರ ಪರಿಸ್ಥಿತಿಯಿಂದ ಕಂಗೆಟ್ಟಿರುವ ರೈತರ ನೆರವಿಗೆ ಧಾವಿಸುವಂತೆ ಆಗ್ರಹಿಸಿ, ಎಕರೆಗೆ...

ಉಡುಪಿ | ಕಾಂಗ್ರೆಸ್ ಕಾರ್ಯಕರ್ತರಿಗೆ ಬೆದರಿಕೆ ಹಾಕಿದರೆ ಹೆದರುವುದಿಲ್ಲ, ಬಿಜೆಪಿಗೆ ತಾಕತ್ತಿದ್ದರೆ ಎದುರಿಸಿ: ಸುರೇಶ್ ಶೆಟ್ಟಿ ಬನ್ನಂಜೆ

ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಅರಬ್ಬಿ ಸಮುದ್ರಕ್ಕೆ ಎಸೆಯುವ ಬೆದರಿಕೆಗಳಿಗೆ ಕಾಂಗ್ರೆಸ್ಸಿಗರು ಹೆದರುವುದಿಲ್ಲ....

ಧಾರವಾಡ | ಮುಖ್ಯ ಆಯುಕ್ತ ಜ್ಞಾನೇಶ ಕುಮಾರ್ ವಜಾಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಭಾರತ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ ಕುಮಾರ್ ಅವರನ್ನು ಹುದ್ದೆಯಿಂದ...

ಗದಗ | ರಾಜ್ಯ ಸರ್ಕಾರ ಸಾರಿಗೆ ಬಸ್ ದರ ಹೆಚ್ಚಳ; ಸಿಪಿಐ(ಎಂ) ಖಂಡನೆ

"ಈಗಾಗಲೇ ಹಾಲಿನ ಬೆಲೆ ಏರಿಕೆ, ಅಕ್ಕಿ ಬೆಳೆ ಮತ್ತಿತರ ಜೀವನಾಗತ್ಯ ಸಾಮಗ್ರಿಗಳ...