ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ನಾಗರಹೊಳೆ ಉದ್ಯಾನವನ ವೀರನಹೊಸಹಳ್ಳಿ ಅರಣ್ಯದಲ್ಲಿ ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪಿಗಳ ಪೈಕಿ ಓರ್ವ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕಿರಂಗೂರು ಗೇಟ್ ಬಳಿ ಬಂಧಿಸಿದ್ದಾರೆ. ಇನ್ನಿಬ್ಬರು ಸ್ಥಳದಿಂದ ಪರಾರಿಯಾಗಿದ್ದು, ಪ್ರಕರಣ ದಾಖಲಾಗಿದೆ.
ಹನಗೋಡು ಹೋಬಳಿಯ ಭರತವಾಡಿ ಹಾಡಿ ರುದ್ರ ಬಂಧಿತ ಆರೋಪಿಯಾಗಿದ್ದು, ಈತನಿಂದ ಎರಡು ಕೆಜಿ ಜಿಂಕೆ ಮಾಂಸ, ಜಿಂಕೆ ತೊಗಲು, ಕೃತ್ಯಕ್ಕೆ ಬಳಸಿದ ಬೈಕ್, ಒಂದು ಮೊಬೈಲ್ ವಶಕ್ಕೆ ಪಡೆದಿದ್ದಾರೆ. ಮತ್ತಿಬ್ಬರು ಆರೋಪಿಗಳಾದ ಕಪ್ಪನಕಟ್ಟೆ ಹಾಡಿ ರಾಮು, ಅವ್ವು ಪರಾರಿಯಾಗಿದ್ದು, ಅಧಿಕಾರಿಗಳು ಹುಡುಕಾಟದಲ್ಲಿದ್ದಾರೆ.
ಜಿಂಕೆ ಭೇಟೆಯಾಡಿ ಮಾಂಸವನ್ನು ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಆಧರಿಸಿ ಹುಣಸೂರು ವನ್ಯಜೀವಿ ವಿಭಾಗದ ಆರ್‌ಎಫ್‌ಒ ಸುಬ್ರಹ್ಮಣ್ಯ ಹಾಗೂ ಆನೆ ಚೌಕೂರು ವಲಯ ಡಿಆರ್‌ಎಫ್‌ಒ ಶಿವಕುಮಾರ್, ಗಸ್ತು ಅರಣ್ಯ ಪಾಲಕರು ಮತ್ತು ಸಿಬ್ಬಂದಿಗಳು ಸೇರಿ ಹನಗೂಡು ಬಳಿಯ ಕಿರಂಗೂರು ಗೇಟ್ ಬಳಿ ಆರೋಪಿಯನ್ನು ಬಂಧಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಹಿರಿಯ ಪತ್ರಕರ್ತ ಕುವೇಂಡ ವೈ ಹಂಝತುಲ್ಲಾರಿಗೆ ಬ್ಯಾರಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಗೌರವ
“ಆರೋಪಿಯನ್ನು ನ್ಯಾಯಾಂಗ ಬಂಧನಕೊಪ್ಪಿಸಲಾಗಿದ್ದು, ಉಳಿದ ಇಬ್ಬರು ಆರೋಪಿಗಳ ಪತ್ತೆಗಾಗಿ ಕ್ರಮವಹಿಸಲಾಗಿದೆ” ಎಂದು ನಾಗರಹೊಳೆ ಹುಲಿಯೋಜನೆ ನಿರ್ದೇಶಕಿ ಸೀಮಾ ತಿಳಿಸಿದ್ದಾರೆ.