ಮೈಸೂರು | ವೀರನಹೊಸಹಳ್ಳಿ ಅರಣ್ಯದಲ್ಲಿ ಜಿಂಕೆ ಬೇಟೆ; ಒಬ್ಬ ಆರೋಪಿ ಬಂಧನ, ಇಬ್ಬರು ಪರಾರಿ

Date:

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ನಾಗರಹೊಳೆ ಉದ್ಯಾನವನ ವೀರನಹೊಸಹಳ್ಳಿ ಅರಣ್ಯದಲ್ಲಿ ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪಿಗಳ ಪೈಕಿ ಓರ್ವ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕಿರಂಗೂರು ಗೇಟ್ ಬಳಿ ಬಂಧಿಸಿದ್ದಾರೆ. ಇನ್ನಿಬ್ಬರು ಸ್ಥಳದಿಂದ ಪರಾರಿಯಾಗಿದ್ದು, ಪ್ರಕರಣ ದಾಖಲಾಗಿದೆ.

- Advertisement -

ಹನಗೋಡು ಹೋಬಳಿಯ ಭರತವಾಡಿ ಹಾಡಿ ರುದ್ರ ಬಂಧಿತ ಆರೋಪಿಯಾಗಿದ್ದು, ಈತನಿಂದ ಎರಡು ಕೆಜಿ ಜಿಂಕೆ ಮಾಂಸ, ಜಿಂಕೆ ತೊಗಲು, ಕೃತ್ಯಕ್ಕೆ ಬಳಸಿದ ಬೈಕ್, ಒಂದು ಮೊಬೈಲ್ ವಶಕ್ಕೆ ಪಡೆದಿದ್ದಾರೆ. ಮತ್ತಿಬ್ಬರು ಆರೋಪಿಗಳಾದ ಕಪ್ಪನಕಟ್ಟೆ ಹಾಡಿ ರಾಮು, ಅವ್ವು ಪರಾರಿಯಾಗಿದ್ದು, ಅಧಿಕಾರಿಗಳು ಹುಡುಕಾಟದಲ್ಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಜಿಂಕೆ ಭೇಟೆಯಾಡಿ ಮಾಂಸವನ್ನು ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಆಧರಿಸಿ ಹುಣಸೂರು ವನ್ಯಜೀವಿ ವಿಭಾಗದ ಆರ್‌ಎಫ್‌ಒ ಸುಬ್ರಹ್ಮಣ್ಯ ಹಾಗೂ ಆನೆ ಚೌಕೂರು ವಲಯ ಡಿಆರ್‌ಎಫ್‌ಒ ಶಿವಕುಮಾರ್, ಗಸ್ತು ಅರಣ್ಯ ಪಾಲಕರು ಮತ್ತು ಸಿಬ್ಬಂದಿಗಳು ಸೇರಿ ಹನಗೂಡು ಬಳಿಯ ಕಿರಂಗೂರು ಗೇಟ್ ಬಳಿ ಆರೋಪಿಯನ್ನು ಬಂಧಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹಿರಿಯ ಪತ್ರಕರ್ತ ಕುವೇಂಡ ವೈ ಹಂಝತುಲ್ಲಾರಿಗೆ ಬ್ಯಾರಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಗೌರವ

“ಆರೋಪಿಯನ್ನು ನ್ಯಾಯಾಂಗ ಬಂಧನಕೊಪ್ಪಿಸಲಾಗಿದ್ದು, ಉಳಿದ ಇಬ್ಬರು ಆರೋಪಿಗಳ ಪತ್ತೆಗಾಗಿ ಕ್ರಮವಹಿಸಲಾಗಿದೆ” ಎಂದು ನಾಗರಹೊಳೆ ಹುಲಿಯೋಜನೆ ನಿರ್ದೇಶಕಿ ಸೀಮಾ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...