ಮೈಸೂರು | ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಲು ಆಗ್ರಹ

Date:

ರೈತ ವಿರೋಧಿ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ಹಾಗೂ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣ ಕಾಯ್ದೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

- Advertisement -

ಮೈಸೂರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ ರೈತರು, “ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ರೈತ ವಿರೋಧಿ, ಜನ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು” ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಪ್ರತಿಭಟನೆಯಲ್ಲಿ ಮಾತನಾಡಿದ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, “ಬಿಜೆಪಿ ಸರ್ಕಾರ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು ‘ಉಳುವವನೇ ಭೂಮಿ ಒಡೆಯ’ ಎಂಬ ಮಹತ್ವಾಕಾಂಕ್ಷೆಯ ಉದ್ದೇಶಕ್ಕೆ ಕೊಡಲಿಪೆಟ್ಟು ನೀಡಿದೆ. ‘ಉಳ್ಳವನೇ ಭೂ ಒಡೆಯ’ ಎಂಬಂತೆ ಮಾಡಿದೆ” ಎಂದು ಕಿಡಿಕಾರಿದರು.

“ರೈತ ಪರವಾಗಿ ಸುಧಾರಣೆಗಳನ್ನು ತರಬೇಕಾದ ಸರ್ಕಾರ, ಕಾರ್ಪೊರೇಟ್ ಕಂಪನಿಗಳಿಗೆ ಅನುಕೂಲವಾಗುವಂತೆ ಕಾಯ್ದೆಗಳಿಗೆ ತಿದ್ದುಪಡಿಗಳನ್ನು ತಿಂದಿತ್ತು. ಭೂಸುಧಾರಣಾ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆಗಳಿ ತಿದ್ದುಪಡಿ ಮಾಡಿ, ಜೊತೆಗೆ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣ ಕಾಯ್ದೆಯನ್ನು ಜಾರಿಗೆ ತಂದು ಹೈನುಗಾರಿಕೆಗೆ ದೊಡ್ಡ ಪೆಟ್ಟು ನೀಡಿದೆ. ಈ ಮೂರು ಕಾಯ್ದೆಗಳು ರೈತ ಸಮುದಾಯಕ್ಕೆ ಮಾತ್ರವಲ್ಲ, ಇಡೀ ಸಮಾಜಕ್ಕೆ ಮಾರಕ” ಎಂದು ಆಕ್ರೋಶ ವ್ಯಕ್ತಪಡಿಸಿರು.

ಸರ್ವೋದಯ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಸನ್ನ ಎನ್ ಗೌಡ ಮಾತನಾಡಿ, “ಎಪಿಎಂಸಿ ಮಾರುಕಟ್ಟೆಯನ್ನು ರೈತ ಸ್ನೇಹಿಯಾಗಿ ರೂಪಿಸಬೇಕು. ರೈತರಿಗಾಗುವ ವಂಚನೆ, ಮೋಸ ತಪ್ಪಿಸಿ, ಭ್ರಷ್ಟಾಚಾರ ನಿರ್ಮೂಲನೆ ಮಾಡಬೇಕು” ಎಂದು ಆಗ್ರಹಿಸಿದರು.

“ಯಾವುದೇ ಸರ್ಕಾರ ಆಗಲಿ ರೈತ ವಿರೋಧಿ, ದಲಿತ ವಿರೋಧಿ, ಕಾರ್ಮಿಕ ವಿರೋಧಿಯಾಗಿ ನಡೆಯಬಾರದು. ಸೂಕ್ತ ಸಮಯದಲ್ಲಿ ಜನಪರವಾದ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಇಲ್ಲದೆ ಹೋದರೆ, ಸರ್ಕಾರದ ವಿರುದ್ದ ರೈತ ಸಂಘ ಬೀದಿಗೆ ಇಳಿದು ಪ್ರತಿಭಟಿಸುತ್ತದೆ. ಸರ್ಕಾರಕ್ಕೆ ಬಿಸಿ ಮುಟ್ಟಿಸುತ್ತದೆ. ಕೂಡಲೇ ಜನ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು” ಎಂದು ಒತ್ತಾಯಿಸಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್ ಮಾತನಾಡಿ, “ಈ ಹಿಂದೆ ಇದ್ದ ಸರ್ಕಾರ ಬದ್ಧತೆಯಿಲ್ಲದೆ ಏಕಾಏಕಿ ರೈತ ವಿರೋಧಿ ಕಾಯ್ದೆಗಳನ್ನು ತಂದು ಕಾರ್ಪೊರೇಟ್ ಕುಳಗಳ ಉದ್ದಾರಕ್ಕೆ ಮಣೆ ಹಾಕಿತ್ತು. ಹಗಲು ದರೋಡೆಗೆ ಕುಮ್ಮಕ್ಕು ನೀಡಿತ್ತು. ಡಬಲ್ ಇಂಜಿನ್ ಸರ್ಕಾರದ ಮರಿ ಇಂಜಿನ್ ಸರ್ಕಾರ ಕೂಡ ಜನ ವಿರೋಧಿ ನಿಲುವು ತಾಳಿತ್ತು. ಜನಪರ ಕೆಲಸಕ್ಕೆ ಮುಂದಾಗಿರಲಿಲ್ಲ. ರೈತ ವಿರೋಧಿ ಸರ್ಕಾರಗಳು ರಾಜ್ಯದ ಇತಿಹಾಸದಲ್ಲಿ ಉಳಿದ ಇತಿಹಾಸವೇ ಇಲ್ಲ” ಎಂದರು.

ರೈತ ಸಂಘದ ಹಕ್ಕೊತ್ತಾಯಗಳು

  1. ಎಪಿಎಂಸಿ ಮಾರುಕಟ್ಟೆಯನ್ನು ರೈತ ಸ್ನೇಹಿಯಾಗಿ ರೂಪಿಸಬೇಕು. ಮಾರುಕಟ್ಟೆ ವ್ಯವಸ್ಥೆಯನ್ನು ಮತ್ತಷ್ಟು ವಿಸ್ತರಿಸಿ ರೈತರಿಗೆ ಆಗುತ್ತಿರುವ ವಂಚನೆ, ಮೋಸವನ್ನು ತಪ್ಪಿಸಿ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಬೇಕು. ಭೂ ಸುಧಾರಣಾ ಕಾಯ್ದೆಯನ್ನು ಉಳುವ ರೈತನ ಕೇಂದ್ರಿತ ದೃಷ್ಟಿಯಿಂದ ಮತ್ತಷ್ಟು ಬಲಯುತಗೊಳಸಬೇಕು.
  2. ಭೂಸ್ವಾಧೀನ ಕಾಯ್ದೆ-2013ಕ್ಕೆ ಎಚ್‌.ಡಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ ರೂಪಿಸಿರುವ ನಿಯಮಗಳು ರೈತ ವಿರೋಧಿಯಾಗಿವೆ. ಇದನ್ನು ಮಾರ್ಪಾಡು ಮಾಡಿ ರೈತಪರ ನಿಯಮಗಳನ್ನು ರೂಪಿಸಬೇಕು.
  3. ಹಿಂದಿನ ಸರ್ಕಾರ ಭೂ ಮಂಜೂರಾತಿ ಕಾಯ್ದೆಯ ನಿಯಮಗಳನ್ನು ಮೀರಿ ಸರ್ಕಾರಿ ಭೂಮಿಯನ್ನು ಸಂಘ ಪರಿವಾರಕ್ಕೆ ಮಂಜೂರು ಮಾಡಿದೆ ಅವುಗಳನ್ನೆಲ್ಲಾ ರದ್ದುಪಡಿಸಿ ಆ ಭೂಮಿಯನ್ನು ಸರ್ಕಾರದ ವಶಕ್ಕೆ ಪಡೆಯಬೇಕು.
  4. ಸಿದ್ದರಾಮಯ್ಯ ಅವರು 2013ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ದೇಶದಲ್ಲಿ ಮೊದಲನೇ ಬಾರಿಗೆ ಕೃಷಿ ಬೆಲೆ ಆಯೋಗವನ್ನು ಮಾಡಿರುತ್ತೀರಿ ಇದು ಸ್ವಾಗತಾರ್ಹ ವಿಚಾರ, ಕೃಷಿ ಬೆಲೆ ಆಯೋಗಕ್ಕೆ ಶಾಸನಾತ್ಮಕ ಸ್ವರೂಪ ನೀಡಿ, ಸ್ವಾಯತ್ತತೆ ಮತ್ತು ಸವಲತ್ತು ನೀಡುವುದರ ಮೂಲಕ ಸಬಲೀಕರಿಸಿ ಓರ್ವ ಸಮರ್ಥ ರೈತ ಪರ ಅಧ್ಯಕ್ಷರನ್ನು ಶೀಘ್ರವಾಗಿ ನೇಮಿಸಿ ಸ್ವಾಮಿನಾಥನ್ ಸಮಿತಿ ವರದಿ ಆಧರಿಸಿ ರೈತರ ಹಕ್ಕಾಗಿರುವ ಕನಿಷ್ಟ ಬೆಂಬಲ ಬೆಲೆಯನ್ನು ಅನುಷ್ಠಾನ ಗೊಳಿಸಬೇಕು. ಇದಕ್ಕೆ ಪೂರಕವಾಗಿ ಕನಿಷ್ಟ 5 ಸಾವಿರ ಕೋಟಿ ರೂಗಳ “ಬೆಲೆ ಆವರ್ತ ನಿಧಿ” ಸ್ಥಾಪಿಸಿ ಕೃಷಿ ಉತ್ಪನ್ನಗಳ ಧಾರಣೆ ಸ್ಥಿರೀಕರಣಕ್ಕೆ ಸಮರ್ಥ ಖರೀದಿ ವ್ಯವಸ್ಥೆಯನ್ನು ಜಾರಿಗೊಳಿಸಬೇಕು.
  5. ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ 2022 ವಿದ್ಯುಚ್ಛಕ್ತಿ, ತಿದ್ದುಪಡಿ ಮಸೂದೆಯನ್ನು ರಾಜ್ಯದಲ್ಲಿ ಜಾರಿಗೆ ತರುವುದಿಲ್ಲವೆಂದು ಮುಂಬರುವ ಅಧಿವೇಶನದಲ್ಲ ತೀರ್ಮಾನಿಸಬೇಕು, ಮತ್ತು 10 ಹೆಚ್ ಪಿ ಕೃಷಿ ಪಂಪ್‌ ಸೆಟ್ ಗಳಿಗೆ ಉಚಿತವಾಗಿ ಗುಣಾತ್ಮಕ ವಿದ್ಯುತ್ ಸರಬರಾಜು ಮಾಡುವ ಬದ್ಧತೆಯನ್ನು ಉಳಿಸಿಕೊಳ್ಳಬೇಕು. ಕೃಷಿ ವಿದ್ಯುತ್‌ ಮೀಟರ್‌ಗಳಿಗೆ ಆಧಾರ್ ಜೋಡಣೆ ಮಾಡುವುದನ್ನು ತಡೆಹಿಡಿಯಬೇಕು.
  6. ವಿಶ್ವ ರೈತ ಚೇತನ ಪ್ರೊ ಎಂ ಡಿ ನಂಜುಂಡಸ್ವಾಮಿಯವರ ಕರೆಯ ಮೇರೆಗೆ ತಾರತಮ್ಯ ವಿದ್ಯುತ್‌ ನೀತಿಯನ್ನು ವಿರೋಧಿಸಿ ರೈತರು ಗೃಹ ಬಳಕೆ ವಿದ್ಯುತ್‌ ಕರವನ್ನು ಪಾವತಿಸದೆ ಕರಾ ನಿರಾಕರಣ ‘ಚಳುವಳಿ ಮಾಡಿದ್ದರು, ಈ ಸಂಬಂಧ 2017 ರಲ್ಲಿ ತಮ್ಮ ನೇತೃತ್ವದ ಸರ್ಕಾರ ಇದ್ದಾಗ ಮಾತುಕತೆ ನಡೆದು ಹಳೇ ಬಾಕಿಯನ್ನು ತಡೆಹಿಡಿದು (ಮನ್ನಾ ಮಾಡಿ) ನಂತರದ ಬಿಲ್ಲನ್ನು ಪಾವತಿಸಿಕೊಂಡು ಹೋಗಲು ಬೆಸ್ಕಾಂ ನಿರ್ಧರಿಸಿತ್ತು. ಆದರೆ ಹಳೇ ಬಾಕಿಯನ್ನು ಸಹ ವಸೂಲಿಗೆ ಎಸ್ಕಾಂಗಳು ಮುಂದಾಗಿದ್ದು, ಅದನ್ನು ತಡೆಹಿಡಿದು ರೈತ ಕುಟುಂಬದ ನೆರವಿಗೆ ಬರಬೇಕು. ಮತ್ತು ಕೆ ಇ ಆರ್ ಸಿ ಅವೈಜ್ಞಾನಿಕವಾಗಿ ವಿದ್ಯುತ್ ದರವನ್ನು ಹೆಚ್ಚಿಸಿದ್ದು ಅದನ್ನು ಸಾಮಾನ್ಯ ಜನರಿಗೆ ಅನುಕೂಲ ಮಾಡಿಕೊಡಬೇಕು.
  7. ಮುಂಗಾರು ಮಳೆ ಕೆಲವು ಕಡೆ ಬದ್ದಿದ್ದು, ಸಮರ್ಪಕವಾಗಿ ಭಿತ್ತನೆ ಬೀಜ, ರಸಗೊಬ್ಬರ. ಕೀಟನಾಶಕಗಳನ್ನು ರೈತರಿಗೆ ಸಕಾಲದಲ್ಲಿ ನಿಗಧಿತ ಬೆಲೆಯಲ್ಲಿ ಸರಬರಾಜು ಮಾಡಬೇಕು ಕಳಪೆ ಪೂರೈಕೆ ಮತ್ತು ಮೋಸದ ವಸೂಲಿಗೆ ತಡೆಯೊಡ್ಡಬೇಕು.
  8. ಹಸಿರು ಕಾರಣಕ್ಕಾಗಿ ರೈತರು ಅವರ ಜಮೀನುಗಳಲ್ಲಿ ಮರಗಿಡಗಳನ್ನು ಬೆಳೆಸಲು ಅರಣ್ಯ ಇಲಾಖೆ ರಿಯಾಯಿತಿ ದರದಲ್ಲಿ ಅಗತ್ಯ ಸಸಿಗಳನ್ನು ನೀಡುತ್ತಿತ್ತು ಆದರೆ ಈ ಸಾಲಿನಲ್ಲಿ ಸಸಿಗಳ ಬೆಲೆಯನ್ನು ಹೆಚ್ಚು ಮಾಡಿದೆ ಅದನ್ನು ಹಿಂಪಡೆಯಬೇಕು.
  9. ಭಿತ್ತನೆ ಬೀಜ ಬೆಳೆದು ರೈತರು ಸಂಬಂಧಪಟ್ಟ ಬೀಜ ಕೇಂದ್ರಗಳಿಗೆ ನೀಡಿದ್ದು, ಅವರಿಗೆ ಬರಬೇಕಾದ ಹಣ ಒಂದೂವರೆ ವರ್ಷಗಳು ಕಳೆದರೂ ಪಾವತಿಯಾಗಿಲ್ಲ. ಕೂಡಲೇ ಅಂತಹ ರೈತರಿಗೆ ಹಣ ಪಾವತಿ ಮಾಡಿ ರೈತರೇ ಸ್ವತಃ ಬೀಜ ಬೆಳೆದುಕೊಳ್ಳಲು ಉತ್ತೇಜನ ನೀಡಬೇಕು.
  10. ಖರೀದಿ ಕೇಂದ್ರಗಳ ಮುಖಾಂತರ ರಾಗಿಯನ್ನು ಮಾರಾಟ ಮಾಡಿದ ರೈತರಿಗೆ ಹಿಂದಿನ ಸರ್ಕಾರ ಬಾಕಿ ಉಳಿಸಿಕೊಂಡಿದೆ. ಬಾಕಿಯನ್ನು ಕೂಡಲೇ ಪಾವತಿಸಲು ಕ್ರಮ ಕೈಗೊಳ್ಳಬೇಕು.
  11. ಪ್ರಧಾನ ಮಂತ್ರಿ ಫಸಲು ಭೀಮಾ ಯೋಜನೆ ಅಡಿ ವಿಮೆ ತುಂಬಿದ ರೈತರಿಗೆ ನಷ್ಟ ಫಲಹಾರದ ಬಾಕಿ ವಿಮಾ ಕಂಪನಿಗಳು ಉಳಿಸಿಕೊಂಡಿದ್ದು, ಬಾಕಿಯನ್ನು ಪಾವತಿಸಲು ಕ್ರಮ ಕೈಗೊಳ್ಳಬೇಕು.
  12. ರಾಜ್ಯದ 12 ಜಿಲ್ಲೆಗಳಲ್ಲಿ ತೆಂಗು ಬೆಳೆಯುತ್ತಿದ್ದು, ಕೊಬ್ಬರಿ ಬೆಲೆ ಕುಸಿತದಿಂದ ರೈತರು ಕಂಗಾಲಾಗಿದ್ದಾರೆ. ಕಳೆದ ವರ್ಷ ಕೊಟ್ಟು ಕ್ವಿಂಟಾಲ್ಲೆ 19,000 ರೂ. ಈ ವರ್ಷ ಕೆವಲ 8,500 ರೂಪಾಯಿ ಆಗಿದ್ದು ಸರಕಾರದ ಲೆಕ್ಕಾಚಾರದ ಪ್ರಕಾರವೇ ಕೊಬ್ಬರಿ ಕ್ವಿಂಟಾಲ್ ಉತ್ಪಾದನೆ ವೆಚ್ಚ 15,760 ರೂ. ಇದ್ದು ಕನಿಷ್ಠ ಕ್ವಿಂಟಾಲ್ ಗೆ 20,000 ರೂ. ದೊರಕಿಸಿಕೊಡಬೇಕು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...