ಮೈಸೂರು | ಜಾತಿ ಗಣತಿ ವರದಿ ಜಾರಿಗೆ ಶೋಷಿತ ಸಮುದಾಯಗಳ ಒಕ್ಕೂಟ ಆಗ್ರಹ

Date:

Advertisements

ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಸಮೀಕ್ಷೆ ಮಾಡಿರುವ ಜಾತಿ ಗಣತಿ ವರದಿ ಜಾರಿಗೊಳಿಸಲು ಒತ್ತಾಯಿಸಿ ಇಂದು ಶೋಷಿತ ಸಮುದಾಯಗಳ ಒಕ್ಕೂಟದಿಂದ ಮೈಸೂರು ಅಪರ ಜಿಲ್ಲಾಧಿಕಾರಿ ಪಿ ಶಿವರಾಜು ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ಅಧ್ಯಕ್ಷ ಬಿ ಸುಬ್ರಹ್ಮಣ್ಯ ಮಾತನಾಡಿ, “ರಾಜ್ಯದ ಎಲ್ಲ ಜಾತಿಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ತಯಾರಿಸಲಾಗಿರುವ ಸಮೀಕ್ಷಾ ವರದಿಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ಮೀನಾಮೇಶ ಎಣಿಸುವ ಅಗತ್ಯವಿಲ್ಲ. ಸುಮಾರು ₹170 ಕೋಟಿ ಖರ್ಚು ಮಾಡಿ ತಯಾರಿಸಿರುವ ಈ ವರದಿಯು ಕೂಡಲೇ ಫಲಪ್ರದವಾಗಬೇಕು” ಎಂದು ಒತ್ತಾಯಿಸಿದರು.

“ರಾಜ್ಯದ ಜನಸಂಖ್ಯೆಯ ಮುಕ್ಕಾಲು ಭಾಗಕ್ಕೂ ಜಾಸ್ತಿ ಇರುವ ಅಹಿಂದ ವರ್ಗಗಗಳಿಗೆ, ಜನಸಂಖ್ಯೆ ಅನುಗುಣವಾಗಿ ರಾಜಕೀಯ ಪ್ರಾತಿನಿಧ್ಯ, ಉದ್ಯೋಗದ ಅವಕಾಶಗಳು ಮತ್ತು ವಿದ್ಯಾಭ್ಯಾಸದ ಅವಕಾಶಗಳು ಲಭಿಸಿಲ್ಲ. ಅಹಿಂದ ವರ್ಗಗಗಳಲ್ಲಿ ಅರಿವು ಮತ್ತು ಸಂಘಟನೆಯ ಕೊರತೆಯ ಕಾರಣಕ್ಕಾಗಿ ಅವಕಾಶಗಳು ಸಿಕ್ಕಿಲ್ಲ ಎನ್ನುವುದರ ಜತೆಗೆ ನಿರ್ಧಿಷ್ಟವಾಗಿ ಅವರ ಜನಸಂಖ್ಯಾ ಪರಿಸ್ಥಿತಿ ಗೊತ್ತಿಲ್ಲದಿರುವುದು ಪ್ರಮುಖ ಕಾರಣವಾಗಿದೆ” ಎಂದರು.

Advertisements

“ಜಾತಿ ಜನಗಣತಿಯ ವರದಿ ಬಂದರೆ ಜಾತಿಗಳ ವಸ್ತುಸ್ಥಿತಿ ತಿಳಿಯಲಿದೆ. ಅದಕ್ಕೆ ಪೂರಕವಾಗಿ ಸರ್ಕಾರಗಳು ಕಾರ್ಯಕ್ರಮಗಳನ್ನು ರೂಪಿಸಬಹುದಾಗಿದೆ. ಈಗ ರಾಜ್ಯದ ಸುಮಾರು ಆರೂವರೆ ಕೋಟಿ ಜನಸಂಖ್ಯೆಯ ಅಧ್ಯಯನವಾಗಿರುವುದರಿಂದ ಜಾತಿ ಜನಗಣತಿಯನ್ನು ಸರ್ಕಾರ ಒಪ್ಪಿಕೊಳ್ಳುವುದರಿಂದ ಎಲ್ಲ ಜಾತಿಗಳಿಗೂ ಒಂದಲ್ಲ ಒಂದು ರೀತಿಯಲ್ಲಿ ಅನುಕೂಲವಾಗಲಿದೆ. ಹಾಗಾಗಿ ಎಲ್ಲ ಜಾತಿಗಳೂ ಕೂಡ ಜಾತಿ ಜನಗಣತಿ ವರದಿ ಬಿಡುಗಡೆಗೆ ಸರ್ಕಾರದ ಮೇಲೆ ಒತ್ತಡ ತರಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಅ.20ರಂದು ಶಾಹು-ಅಂಬೇಡ್ಕರ್ ಪರ್ವ ವಿಚಾರ ಸಂಕಿರಣ

ಮಾಜಿ ಪಾಲಿಕೆ ಸದಸ್ಯ ಗೋಪಿ, ವಕೀಲ ಪುಟ್ಟ ಸಿದ್ದೇಗೌಡ,ವಿ ರಾಮಸ್ವಾಮಿ, ಬೋವಿ ನಿಗಮ ಮಾಜಿ ಅಧ್ಯಕ್ಷ ಸೀತಾರಾಮ್, ಕುರುಬರ ಸಂಘದ ಜಿಲ್ಲಾಧ್ಯಕ್ಷ ಶಿವಪ್ಪ ಕೋಟೆ, ಎಸ್‌ಡಿಪಿಐ ಪುಟ್ನಂಜ, ತಾಲೂಕು ಕುರುಬರ ಸಂಘದ ಅಧ್ಯಕ್ಷರುಗಳಾದ ಆನಂದ್, ಶಿವಣ್ಣ, ಸುನಿಲ್, ಬಸವರಾಜ್, ಕೆಂಪಣ್ಣ, ರಾಜ್ಯ ನಾಯಕರ ಸಂಘದ ಉಪಾಧ್ಯಕ್ಷ ಲೋಕೇಶ್, ಮುಖಂಡರುಗಳಾದ ರವಿ, ಮೋಹನ್, ಅಪ್ಪುಗೌಡ, ಜವರೇಗೌಡ, ರಮೇಶ, ಶಿವಕುಮಾರ್ ಸೇರಿದಂತೆ ಅನೇಕ ಶೋಷಿತ ವರ್ಗದ ಮುಖಂಡರುಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X