ಮೈಸೂರು | ಜಿಲ್ಲಾ ಅಭಿವೃದ್ಧಿ ಸಭೆಯಲ್ಲಿ ಯೋಜನೆಗಳ ಶೇ.100 ಸಾಧನೆಗೆ ಸೂಚನೆ

Date:

ಮೈಸೂರು ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಹಾಗೂ ಉಸ್ತುವಾರಿ ಸಮಿತಿ ಸಭೆಯಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅಧಿಕಾರಿಗಳಿಗೆ ಕೇಂದ್ರ ಪುರಸ್ಕೃತ ಯೋಜನೆಗಳನ್ನು ನೂರಕ್ಕೆ ನೂರು ಪ್ರಗತಿ ಸಾಧಿಸುವಂತೆ ಕಟ್ಟುನಿಟ್ಟಾಗಿ ಸೂಚಿಸಿದರು.

- Advertisement -

ಮೈಸೂರು–ಕುಶಾಲನಗರ ರಾಷ್ಟ್ರೀಯ ಹೆದ್ದಾರಿ 275ರ ಭೂಮಿ ಸ್ವಾಧೀನ ವಿಚಾರದಲ್ಲಿ ಉಳಿದಿರುವ ತಕರಾರುಗಳನ್ನು ತಕ್ಷಣ ಬಗೆಹರಿಸಿ ರಸ್ತೆ ಕಾಮಗಾರಿಗೆ ಅನುಕೂಲ ಮಾಡಿಕೊಡಬೇಕು ಎಂದು ಅವರು ಹೇಳಿದರು. ಬ್ಯಾಂಕ್‌ಗಳು ಗ್ರಾಹಕರೊಂದಿಗೆ ಸೌಜನ್ಯಯುತವಾಗಿ ವರ್ತಿಸಬೇಕು. ಮೊದಲ ಬಾರಿಗೆ ಸಾಲ ಪಡೆಯುವವರಿಗೆ ಸಿಬಿಲ್ ಸ್ಕೋರ್ ನೆಪ ಹೇಳಿ ಕಿರುಕುಳ ನೀಡಬಾರದು. ರೈತರಿಗೆ ದೊರೆಯುವ ಪ್ರೋತ್ಸಾಹಧನವನ್ನು ಸಾಲದ ಬಡ್ಡಿಗೆ ಹೊಂದಿಸುವುದು ಸರಿಯಲ್ಲ ಎಂದು ಲೀಡ್ ಬ್ಯಾಂಕ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಹತ್ತಿ ಬೆಳೆ ಕುಂಠಿತವಾಗುತ್ತಿರುವ ಹಿನ್ನೆಲೆಯಲ್ಲಿ ರೈತರು ಹೆಚ್ಚಾಗಿ ಮುಸುಕಿನ ಜೋಳ ಬೆಳೆಯುತ್ತಿರುವುದು ಭೂಮಿಯ ಫಲವತ್ತತೆ ಮೇಲೆ ಪರಿಣಾಮ ಬೀರುತ್ತದೆ. ಈ ಕುರಿತು ರೈತರಿಗೆ ಜಾಗೃತಿ ಮೂಡಿಸುವಂತೆ ಕೃಷಿ ಇಲಾಖೆಗೆ ಸೂಚಿಸಿದರು. ದಿಶಾ ಸಭೆಗಳು ಕೇವಲ ವರದಿ ಮಟ್ಟದಲ್ಲೇ ಸೀಮಿತವಾಗಬಾರದು; ಅಧಿಕಾರಿಗಳು ವಾರಕ್ಕೆ ಕನಿಷ್ಠ ಒಂದು ದಿನ ಕ್ಷೇತ್ರ ಭೇಟಿ ನೀಡಿ ವಾಸ್ತವ ಸ್ಥಿತಿಯನ್ನು ಪರಿಶೀಲಿಸಬೇಕು ಎಂದರು.

ಗ್ರಾಮೀಣ ಪ್ರದೇಶಗಳಲ್ಲಿ ವಸತಿ ರಹಿತರ ಸಂಖ್ಯೆ ಇನ್ನೂ ಹೆಚ್ಚಿರುವುದನ್ನು ಉಲ್ಲೇಖಿಸಿದ ಅವರು, ಸರ್ವೇ ನಡೆಸಿ ಅರ್ಹರ ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಹೇಳಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳ ಪ್ರಯೋಜನಗಳು ಅರ್ಹರಿಗೆ ತಲುಪುವಲ್ಲಿ ಅಧಿಕಾರಿಗಳ ಪಾತ್ರ ಪ್ರಮುಖವಾಗಿದೆ ಎಂದು ತಿಳಿಸಿದರು.

ಕೊಡಗು–ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾತನಾಡಿ, ಮೈಸೂರು ನಗರದ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಸಮಗ್ರ ಯೋಜನೆ ರೂಪಿಸಬೇಕು ಎಂದರು. ತಂಬಾಕು ಬೆಳೆಗೆ ಪರ್ಯಾಯ ಬೆಳೆಗಳ ಬಗ್ಗೆ ರೈತರಿಗೆ ಅರಿವು ಮೂಡಿಸಿ ಹಂತ ಹಂತವಾಗಿ ಅದರ ಪ್ರಮಾಣ ಕಡಿಮೆ ಮಾಡಬೇಕು ಎಂದು ಸಲಹೆ ನೀಡಿದರು. ಬೆಲವತ್ತ ಗ್ರಾಮದಲ್ಲಿ ಕಸ ತ್ಯಾಜ್ಯ ಸಮಸ್ಯೆ ಹೆಚ್ಚುತ್ತಿರುವುದರಿಂದ ಹೊರ ವರ್ತುಲ ರಸ್ತೆಯ ಸುತ್ತಮುತ್ತ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ನಗರದಲ್ಲಿ ಪ್ಲೆಕ್ಸ್ ಹಾಗೂ ಬ್ಯಾನರ್‌ಗಳ ಅತಿರೇಕವನ್ನು ನಿಯಂತ್ರಿಸಲು ಮಹಾನಗರ ಪಾಲಿಕೆಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ಮಾಹಿತಿ ನೀಡುತ್ತಾ, ಮೈಸೂರು–ಕುಶಾಲನಗರ ಹೆದ್ದಾರಿ ಕಾಮಗಾರಿ ಶೇ.60ರಷ್ಟು ಪೂರ್ಣಗೊಂಡಿದ್ದು, ಉಳಿದ ಭೂಮಿ ಸಮಸ್ಯೆಗಳನ್ನು ಬಗೆಹರಿಸಿ ಕಾಮಗಾರಿಯನ್ನು ಮುಂದುವರಿಸಲಾಗುವುದು ಎಂದರು. ಮೈಸೂರು ವಿಮಾನ ನಿಲ್ದಾಣದ ಸಮೀಪದ ರಾಷ್ಟ್ರೀಯ ಹೆದ್ದಾರಿ 266ರ ಡೈವರ್ಶನ್‌ಗೆ ಡಿಪಿಆರ್ ಸಿದ್ಧವಾಗಿದ್ದು, ಅಗತ್ಯ ಭೂಮಿ ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು. ತಂಬಾಕು ಬೆಳೆಗಾರರಿಗೆ ಡಿಐಪಿ ರಸಗೊಬ್ಬರದ ಕೊರತೆ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್. ಯುಕೇಶ್ ಕುಮಾರ್ ನರೇಗಾ ಯೋಜನೆ ಕುರಿತು ಮಾಹಿತಿ ನೀಡಿದ್ದು, ಮಾರ್ಚ್ 2026ರ ಅಂತ್ಯದವರೆಗೆ 17.5 ಲಕ್ಷ ಮಾನವ ದಿನಗಳ ಗುರಿ ನೀಡಲಾಗಿದ್ದರೆ, 17.81 ಲಕ್ಷ ಮಾನವ ದಿನಗಳ ಸೃಜನೆಯ ಮೂಲಕ ಶೇ.102 ಸಾಧನೆ ಮಾಡಲಾಗಿದೆ ಎಂದರು. ಕೂಲಿ ₹6679.13 ಲಕ್ಷ ಹಾಗೂ ಸಾಮಗ್ರಿ ವೆಚ್ಚ ₹1348.94 ಲಕ್ಷ ಸೇರಿದಂತೆ ಒಟ್ಟು ₹8028.07 ಲಕ್ಷ ವೆಚ್ಚವಾಗಿದೆ ಎಂದು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಕೊಡಗು | ಇತಿಹಾಸ ಪುಟ ಸೇರಿದ ಕಾವೇರಿ ಕಲಾಕ್ಷೇತ್ರ; ನೂತನ ಕಲಾಭವನ ನಿರ್ಮಾಣಕ್ಕೆ ಶಾಸಕ ಡಾ ಮಂತರ್ ಗೌಡ ಚಾಲನೆ

ಸಭೆಯಲ್ಲಿ ಸಂಸದ ಸುನೀಲ್ ಬೋಸ್, ಶಾಸಕ ಜಿ.ಡಿ. ಹರೀಶ್ ಗೌಡ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಎಸ್. ಬಾಲದಂಡಿ, ಮಹಾನಗರ ಪಾಲಿಕೆ ಆಯುಕ್ತ ಶೇಕ್ ತನ್ವೀರ್ ಆಸಿಫ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...