ಮೈಸೂರು | ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಗುದ್ದಲಿಪೂಜೆ

Date:

ಮೈಸೂರಿನ ನಾಡನಹಳ್ಳಿ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಮೈಸೂರು ಉಸ್ತುವಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ‘ನಾಡನಹಳ್ಳಿ ರಾಜಕೀಯವಾಗಿ ಪ್ರಬುದ್ಧ ಜನರನ್ನು ಒಳಗೊಂಡಿರುವ ಗ್ರಾಮವಾಗಿದ್ದು, ಗ್ರಾಮಕ್ಕೆ ಅವಶ್ಯಕತೆ ಇರುವ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು’ ಎಂದು ಹೇಳಿದರು.

- Advertisement -

“ಗ್ರಾಮದಲ್ಲಿ ಗ್ರಂಥಾಲಯ, ಆಟದ ಮೈದಾನ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿಗೆ ಮನವಿ ಮಾಡಿದ್ದಾರೆ. ಈ ಸಂಭಂದ ಅಧಿಕಾರಿಗಳಿಗೆ ಸೂಚನೆ ನೀಡಿ ಹಂತ ಹಂತವಾಗಿ ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಭರವಸೆ ನೀಡಿದರು.”

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ನಾನು ಪ್ರತಿಮೆಯಲ್ಲಿಲ್ಲ, ಸಂವಿಧಾನ ಮತ್ತು ಪುಸ್ತಕಗಳಲ್ಲಿದ್ದೇನೆ ಎಂದು ಅಂಬೇಡ್ಕರ್ ಅವರೇ ಹೇಳಿದ್ದಾರೆ. ಆದರೂ, ಅವರ ಗೌರವದ ಸಂಕೇತವಾಗಿ ಪ್ರತಿಮೆಗಳನ್ನು ನಿರ್ಮಿಸುತ್ತಿದ್ದೇವೆ. ನಮ್ಮ ಜನರು ಬಾಬಾ ಸಾಹೇಬರ ಮಾತನ್ನು ಅರ್ಥ ಮಾಡಿಕೊಂಡು ಶಿಕ್ಷಣ ಪಡೆದು, ಪುಸ್ತಕಗಳನ್ನು ಅಧ್ಯಯನ ಮಾಡಬೇಕು ಎಂದು ಕಿವಿಮಾತು” ಹೇಳಿದರು.

ಶಾಸಕರಾದ ಜಿ.ಟಿ.ದೇವೇಗೌಡ ಮಾತನಾಡಿ, “ನಾಡನಹಳ್ಳಿ ಗ್ರಾಮವು ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟು ಮೇಲ್ದರ್ಜೆಗೇರಿದೆ. ಆದರೂ, ಇಲ್ಲಿನ ಗ್ರಾಮಸ್ಥರಿಗೆ ಕೆಲವು ತೊಂದರೆ ಉಂಟಾಗುತ್ತಿದೆ. ಗ್ರಾಮದ ನಿರಾಶ್ರಿತರಿಗೆ ಆಶ್ರಯ ಯೋಜನೆಯಡಿ ನಿವೇಶನ ವಿತರಿಸಲು ಸಚಿವರೊಂದಿಗೆ ಮಾತನಾಡಿ ಕ್ರಮವಹಿಸಲಾಗುವುದು” ಎಂದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಖಾಲಿಯಿರುವ ಹುದ್ದೆಗಳ ಭರ್ತಿ ಮಾಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭಟನೆ

ಕಾರ್ಯಕ್ರಮದಲ್ಲಿ ನಾಡಹಳ್ಳಿ ಗ್ರಾಮದ ಎಂ.ಪ್ರಸಾದ್, ಸಿದ್ದಯ್ಯ, ಎಂ.ಕುಮಾರ್, ಎಸ್.ಸಂತೋಷ್ ಕುಮಾರ್, ಮಹಲಿಂಗಸ್ವಾಮಿ, ಮಧುಸೂದನ್, ಎಂ.ಹರೀಶ, ಗ್ರಾಮ ಪಂಚಾಯಿತಿ ಸದಸ್ಯರು, ಡಾ.ಬಿ.ಆರ್.ಅಂಬೇಡ್ಕರ್ ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮದ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...