ಮೈಸೂರು | ಬೇಸಿಗೆಯ ಆರಂಭದಲ್ಲಿಯೇ ಬರಿದಾದ ಜಲಮೂಲಗಳು; ನಾಗರಹೊಳೆ ಅರಣ್ಯದ ವನ್ಯಪ್ರಾಣಿಗಳಿಗೆ ನೀರುಣಿಸುವುದೇ ಸವಾಲು

Date:

Advertisements

ಕಳೆದ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಬೇಸಿಗೆಯ ಆರಂಭದಲ್ಲಿಯೇ ಜಲಮೂಲಗಳು ಬರಿದಾಗ ತೊಡಗಿದ್ದು, ಭಯದ ವಾತಾವರಣ ನಿರ್ಮಾಣವಾಗಿದೆ. ಮೈಸೂರಿನ ನಾಗರಹೊಳೆ ಅರಣ್ಯ ಪ್ರದೇಶದಲ್ಲಿರುವ ಹೊಳೆ, ಕೆರೆಕಟ್ಟೆಗಳು ಈಗಲೇ ಬತ್ತಲಾರಂಭಿಸಿರುವುದರಿಂದ ಮುಂದಿನ ಬೇಸಿಗೆ ವೇಳೆಗೆ ವನ್ಯಪ್ರಾಣಿಗಳಿಗೆ ನೀರೊದಗಿಸುವುದೇ ಅರಣ್ಯ ಇಲಾಖೆಗೆ ಸವಾಲಾಗಿ ಪರಿಣಮಿಸಿದೆ.

ನದಿಮೂಲಗಳಿಂದ ಈಗಿನಿಂದಲೇ ಟ್ಯಾಂಕರ್ ಮೂಲಕ ಅರಣ್ಯದಲ್ಲಿರುವ ಕೆರೆ ಕಟ್ಟೆಗಳಿಗೆ ನೀರು ತುಂಬಿಸುವ ಕಾರ್ಯವನ್ನು ಆರಂಭಿಸಿದ್ದಾರೆ.

ಕಳೆದ ವರ್ಷ ಈ ವೇಳೆಗೆ ಕೆರೆ ಕಟ್ಟೆಗಳಲ್ಲಿ ನೀರು ತುಂಬಿತ್ತು. ಹೀಗಾಗಿ ಯಾವುದೇ ಆತಂಕ ಇರಲಿಲ್ಲ. ಈ ಬಾರಿ ಮುಂಗಾರು ಮಳೆಯಾಗದ ಕಾರಣ ಅಲ್ಲಲ್ಲಿ ಕೆರೆಕಟ್ಟೆಗಳು ಬತ್ತಿರುವುದು ಕಾಣಿಸುತ್ತಿದೆ. ಇದರಿಂದ ನಾಗರಹೊಳೆ ಅರಣ್ಯದಲ್ಲಿರುವ ವನ್ಯಪ್ರಾಣಿಗಳು ನೀರಿಗಾಗಿ ಅಲೆಯುವಂತಾಗಿದೆ. ಇದು ಹೀಗೆಯೇ ಮುಂದುವರೆದರೆ ಇನ್ನೊಂದು ತಿಂಗಳಲ್ಲಿ ನೀರಿಗೆ ತೀವ್ರ ಬರ ಬರುವ ಸಾಧ್ಯತೆ ಹೆಚ್ಚಾಗಿದೆ.

Advertisements

ಸಾಮಾನ್ಯವಾಗಿ ಬೇಸಿಗೆಯಲ್ಲೂ ಆಗೊಮ್ಮೆ ಈಗೊಮ್ಮೆ ಮಳೆ ಸುರಿಯುತ್ತದೆ. ಅದರಲ್ಲೂ ಮಾರ್ಚ್ ಏಪ್ರಿಲ್ ತಿಂಗಳಲ್ಲಿ ಪೂರ್ವ ಮುಂಗಾರು ಮಳೆ ಸುರಿದು ವಾತಾವರಣವನ್ನು ತಂಪುಗೊಳಿಸುತ್ತದೆ. ಆದರೆ ಕಳೆದ ವರ್ಷ ಏಪ್ರಿಲ್ ತನಕವೂ ಮಳೆ ಸುರಿಯದ ಕಾರಣದಿಂದಾಗಿ ಸಂಕಷ್ಟ ಎದುರಾಗಿತ್ತಾದರೂ 2017ರ ಬಳಿಕ ಪ್ರತಿ ವರ್ಷವೂ ಮುಂಗಾರು ಉತ್ತಮವಾಗಿದ್ದರಿಂದ ನೀರಿನ ಸಮಸ್ಯೆ ಎದುರಾಗಿರಲಿಲ್ಲ.

2017ರ ಹಿಂದೆಯೂ ಹೀಗೆ ಮಳೆಯಿಲ್ಲದೆ, ಅರಣ್ಯದಲ್ಲಿ ನೀರಿಗೆ ಸಂಕಷ್ಟ ಬಂದಿತ್ತು. ಜತೆಗೆ ಕಾಡ್ಗಿಚ್ಚು ಸಂಭವಿಸಿದ್ದರಿಂದ ವನ್ಯ ಸಂಪತ್ತು ನಾಶವಾಗಿತ್ತು. ಇವತ್ತಿಗೂ ನಾಗರಹೊಳೆಯ ಕೆಲವು ಕಡೆ ಅರ್ಧ ಸುಟ್ಟು ಹೋಗಿ ಸತ್ತ ಮರಗಳು ಸಾಕ್ಷಿಯಾಗಿ ನಿಂತಿವೆ. ಆದರೆ ಈ ಬಾರಿ ನಾಗರಹೊಳೆ ಅರಣ್ಯದಲ್ಲಿ ಕಾಡ್ಗಿಚ್ಚು ಸಂಭವಿಸದಂತೆ ಮತ್ತು ವನ್ಯಪ್ರಾಣಿಗಳಿಗೆ ಯಾವುದೇ ರೀತಿಯ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಈಗಿನಿಂದಲೇ ಮುಂಜಾಗೃತಾ ಕ್ರಮ ಕೈಗೊಂಡಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ನದಿಯಿಂದ ನೀರನ್ನು ಟ್ಯಾಂಕರ್‌ಗಳಿಗೆ ತುಂಬಿಸಿ ಅರಣ್ಯ ಪ್ರದೇಶದಲ್ಲಿರುವ ಕೆರೆ ಕಟ್ಟೆಗಳಿಗೆ ತುಂಬಿಸುವ ಕಾರ್ಯವನ್ನು ಶುರು ಮಾಡಿದ್ದಾರೆ.

ಸುಡು ಬಿಸಿಲಿಗೆ ನಾಗರಹೊಳೆ ಅರಣ್ಯ ಪ್ರದೇಶದೊಳಗಿರುವ ಕೆರೆ ಕಟ್ಟೆಗಳಲ್ಲಿ ನೀರಿನ ಮಟ್ಟ ತೀರಾ ಕೆಳಮಟ್ಟಕ್ಕೆ ಇಳಿದಿದೆ. ಹೀಗಾಗಿ ಕೆಲವೆಡೆ ಈಗಲೇ ಪ್ರಾಣಿಗಳಿಗೆ ನೀರು ಸಿಗದೆ ಪರದಾಡುತ್ತಿವೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನವನವನ್ನು ಒಂದು ಸುತ್ತು ಹೊಡೆದರೆ, ಹುಣಸೂರು, ವೀರನಹೊಸಹಳ್ಳಿ, ಕಲ್ಲಹಳ್ಳಿ, ಅಂತರಸಂತೆ ಸೇರಿದಂತೆ ನಾಗರಹೊಳೆ ವಲಯ ವ್ಯಾಪ್ತಿಯಲ್ಲಿ ಫೆಬ್ರವರಿ ಅಂತ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿದ್ದ ಪರಿಣಾಮ ನಾಗರಹೊಳೆ ಅರಣ್ಯ ಒಣಗಲಾರಂಭಿಸಿದೆ.

ಇದರ ಜತೆಗೆ ಕಾಡಿನಲ್ಲಿರುವ ಸಾಕಷ್ಟು ಕೆರೆ ಕಟ್ಟೆಗಳಲ್ಲಿ ನೀರು ಬತ್ತಿ ಹೋಗಿದ್ದರೆ, ಇನ್ನು ಕೆಲವು ಕೆರೆಕಟ್ಟೆಗಳಲ್ಲಿ ನೀರಿನ ಪ್ರಮಾಣ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಾ ಹೋಗುತ್ತಿದೆ. ಹೀಗಾಗಿ ಈಗಿನಿಂದಲೇ ವನ್ಯಜೀವಿಗಳು ನೀರಿಗಾಗಿ ಪರದಾಡುವ ಪರಿಸ್ಥಿತಿ ಎದುರಾಗಿದೆ. ಇದು ಹೀಗೆಯೇ ಮುಂದುವರೆದು ತಾಪಮಾನ ಹೆಚ್ಚಾಗಿ ಜಲಮೂಲ ಬತ್ತಿದರೆ, ಅರಣ್ಯದಲ್ಲಿರುವ ಪ್ರಾಣಿಗಳು ಮೇವು ಮತ್ತು ನೀರು ಅರಸಿ ಅದರಲ್ಲೂ ಹುಲಿ ಮತ್ತು ಆನೆ ಕಾಡಂಚಿನ ಗ್ರಾಮಗಳಿಗೆ ಲಗ್ಗೆ ಇಡುವ ಸಾಧ್ಯತೆ ಹೆಚ್ಚಿರುತ್ತದೆ.

ಕಳೆದ ಕೆಲವು ವರ್ಷಗಳ ಹಿಂದೆಯೇ ನಾಗರಹೊಳೆ ಕಾಡಿನ ಮಂಟಹಳ್ಳಿ ಕೆರೆ, ಹಂದಿಕೆರೆ, ಭೀಮನಕಟ್ಟೆ, ಪಾರೆಕಟ್ಟೆ ಭಾಗದ ಕೆರೆ ಕಟ್ಟೆಗಳ ಸಮೀಪ ಕೊಳವೆ ಬಾವಿಗಳನ್ನು ಕೊರೆಯಿಸಿ ಅವುಗಳಿಗೆ ಸೋಲಾರ್ ಪಂಪ್ ಮೂಲಕ ಕೆರೆಗಳಿಗೆ ನೀರು ಹರಿಸಿ ಪ್ರಾಣಿಗಳ ಕೆರೆ ಕಟ್ಟೆಗಳನ್ನು ತುಂಬಿಸುವ ಕಾರ್ಯ ಕೈಗೊಂಡಿದ್ದರೂ, ಈ ಬಾರಿ ಮಳೆಗಾಲ ಕಡಿಮೆಯಾದ ಹಿನ್ನಲೆಯಲ್ಲಿ ಅಂತರ್ಜಲದ ಸಮಸ್ಯೆ ಎದುರಾಗಿದೆ. ಜತೆಗೆ ನಾಗರಹೊಳೆ ಅರಣ್ಯದೊಳಗೆ ಹರಿಯುವ ಲಕ್ಷ್ಮಣತೀರ್ಥ ನದಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ.

ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ ಬಿರು ಬೇಸಿಗೆಗೆ ಜನ ಕಂಗಾಲು; ಕೊಡಗಿನಲ್ಲಿ ಮಳೆಯ ಸಿಂಚನ

ಮುಂದಿನ ದಿನಗಳಲ್ಲಿ ಎದುರಾಗಲಿರುವ ಸಮಸ್ಯೆಯನ್ನು ಪರಿಹರಿಸಬೇಕಾದರೆ ಈಗಿನಿಂದಲೇ ಎಚ್ಚರವಾಗಿರುವುದು ಒಳಿತು. ಹೀಗಾಗಿ ಜಲಮೂಲಗಳಿಂದ ನೀರನ್ನು ಟ್ಯಾಂಕರ್‌ನಲ್ಲಿ ತೆಗೆದುಕೊಂಡು ಪ್ರಾಣಿ ಪಕ್ಷಿ ಸಂಕುಲಗಳಿಗೆ ನೀರು ಒದಗಿಸುವ ಕಾರ್ಯ ಸಮಾರೋಪಾದಿಯಲ್ಲಿ ಸಾಗುತ್ತಿದೆ.

ನಾಗರಹೊಳೆ ಅರಣ್ಯದೊಳಗೆ ಕಬಿನಿ ಹಾಗೂ ಲಕ್ಷ್ಮಣತೀರ್ಥ ನದಿ ಹರಿಯುತ್ತಿರುವುದು ಕಾಡಿನ ಅಪಾರ ಜೀವ ಸಂತತಿಗೆ ಅನುಕೂಲವಾಗಿದೆ. ಆದರೆ ಈ ಬಾರಿ ಮಳೆ ಪ್ರಮಾಣ ಕಡಿಮೆಯಾದ ಕಾರಣ ನದಿ ಪಾತ್ರ ಹಾಗೂ ಭೂಮಿಯಲ್ಲಿ ಅಂತರ್ಜಲ ಕಡಿಮೆಯಾಗಿದೆ. ಇದಲ್ಲದೆ ಬೇಸಿಗೆಯ ಬಿಸಿಲಿನ ತಾಪ ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ವಹಿಸಿ ಅಗತ್ಯವಿರುವ ಕೆರೆ ಕಟ್ಟೆಗಳಲ್ಲಿ ಟ್ಯಾಂಕರ್‌ಗಳ ಮೂಲಕ ನೀರು ತುಂಬಿಸುವ ಕಾರ್ಯವನ್ನು ಮಾಡುತ್ತಿರುವುದಾಗಿ ನಾಗರಹೊಳೆ ಹುಲಿ ಯೋಜನೆ ನಿರ್ದೇಶಕ ಡಾ ಹರ್ಷಕುಮಾರ್ ಚಿಕ್ಕನರಗುಂದ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X