ಮೈಸೂರು | ಗಣೇಶನ ವೇಷಧರಿಸಿ ರಕ್ತದಾನದ ಜಾಗೃತಿ

Date:

Advertisements

ಮೈಸೂರು ಜೀವಧಾರ ರಕ್ತ ನಿಧಿ ಕೇಂದ್ರದ ವತಿಯಿಂದ ರಾಮಸ್ವಾಮಿ ವೃತದಲ್ಲಿ ವಾಹನ ಸವಾರರಿಗೆ ಹಾಗೂ ರಸ್ತೆ ಬದಿಯಲ್ಲಿ ನಿಂತಿರುವ ಸಾರ್ವಜನಿಕರಿಗೆ ರಕ್ತದಾನದ ಮಹತ್ವದ ಅರಿವು ಮೂಡಿಸುವ ನಿಟ್ಟಿನಲ್ಲಿ ಗಣೇಶ ವೇಷದಾರಿ ಹಳೆ ಕೆಸರೆ ನಿವಾಸಿ ಲೋಹಿತ್ ರವರು ಜಾಗೃತಿಯ ನಾಮಫಲಕ ಹಿಡಿದು, ಕರಪತ್ರ ನೀಡಿ ಜಾಗೃತಿ ಮೂಡಿಸಿದರು.

ಜೀವಧಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಮಾತನಾಡಿ “ನಾವು ನಿರಂತರವಾಗಿ ರಕ್ತದಾನದ ಬಗ್ಗೆ ಹಲವಾರು ರೀತಿಯಲ್ಲಿ ಜಾಗೃತಿ ಮೂಡಿಸುತ್ತಾ ಬಂದಿದ್ದೇವೆ. ಗೌರಿ ಗಣೇಶ ಹಬ್ಬ ಇರುವ ಹಿನ್ನೆಲೆಯಲ್ಲಿ ವಿಭಿನ್ನವಾಗಿ ಸಾರ್ವಜನಿಕರಲ್ಲಿ ರಕ್ತದಾನದ ಬಗ್ಗೆ ಜಾಗೃತಿ ಮೂಡಿಸಿದ್ದೇವೆ. ರಕ್ತದಾನ ಮಹಾದಾನ. ಮೂಢನಂಬಿಕೆಯನ್ನು ಬಿಟ್ಟು ಸಾರ್ವಜನಿಕರು ಸ್ವಯಂ ಪ್ರೇರಿತ ರಕ್ತದಾನ ಮಾಡಬಹುದು” ಎಂದು ಹೇಳಿದರು.

ನೀವು ನೀಡುವ ರಕ್ತದಿಂದ ಇನ್ನೊಂದು ಜೀವ ಉಳಿಸಬಹುದು. ದಯಮಾಡಿ ಯುವ ಪೀಳಿಗೆ ನಿರಂತರವಾಗಿ ಸ್ವಯಂ ಪ್ರೇರಿತ ರಕ್ತದಾನ ಮಾಡಲಿ. ಆರೋಗ್ಯದ ದೃಷ್ಟಿಯಿಂದಲೂ ರಕ್ತ ನೀಡುವುದು ಒಳ್ಳೆಯದು. ಇದರ ಬಗ್ಗೆ ಯುವ ಪೀಳಿಗೆ ಗಮನ ಹರಿಸಲಿ ಎಂದು ಮನವಿ ಮಾಡಿದರು

Advertisements

ಈ ಸುದ್ದಿ ಓದಿದ್ದೀರಾ? ಮೈಸೂರು | ಮನುವಾದಿಗಳ ವಿಷ ತಲೆಗೇರಿಸಿಕೊಂಡ ಬಿಜೆಪಿಗರು; ಮುಸ್ಲಿಮರ ಕಂಡರೆ ದ್ವೇಷಕಾರುವುದನ್ನು ಬಿಡಿ : ಸಚಿವ ಮಹದೇವಪ್ಪ

ಇದೇ ಸಂದರ್ಭದಲ್ಲಿ ಕೆಎಂಪಿಕೆ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಸೂರಜ್, ಸದಾಶಿವ್, ಚಂದ್ರು ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದ.ಕ. | ಪಟಾಕಿ ಮಾರಾಟಕ್ಕೆ ತಾತ್ಕಾಲಿಕ ಲೈಸೆನ್ಸ್; ಅರ್ಜಿ ಆಹ್ವಾನ

2025ನೇ ಸಾಲಿನಲ್ಲಿ ದೀಪಾವಳಿ ಹಬ್ಬ ಹಾಗೂ ತುಳಸಿ ಪೂಜೆ ಪ್ರಯುಕ್ತ ಮೈದಾನದಲ್ಲಿ...

ದ.ಕ. | ಹೊಂಡ ಗುಂಡಿಗಳಿಗೆ ಬಿದ್ದು ವಾಹನ ಸವಾರರು ಮೃತಪಟ್ಟರು ಜನಪ್ರತಿನಿಧಿಗಳಿಗೆ ಲೆಕ್ಕವಿಲ್ಲ: ಡಿವೈಎಫ್ಐ

ಬೈಕಂಪಾಡಿ ಕೈಗಾರಿಕಾ ವಲಯದ ಹೆದ್ದಾರಿ ಸಂಪರ್ಕಿಸುವ ರಸ್ತೆ ಸೇರಿದಂತೆ ಬಹುತೇಕ ಒಳ...

ಬೀದರ್‌ | ಬಸವಲಿಂಗ ಪಟ್ಟದ್ದೇವರದ್ದು ಬಸವಮಯ ಬದುಕು : ನಿವೃತ್ತ ನ್ಯಾ. ಶಿವರಾಜ ಪಾಟೀಲ್

ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರದ್ದು ಬಸವಮಯ ಬದುಕು...

ಕೊಡಗು | ಮಾನಸಿಕ ಸಮತೋಲನಕ್ಕೆ ಕ್ರೀಡಾಭ್ಯಾಸ ಅತ್ಯಗತ್ಯ : ಶಾಸಕ ಎ ಎಸ್ ಪೊನ್ನಣ್ಣ

ಕೊಡಗು ಜಿಲ್ಲೆ, ವಿರಾಜಪೇಟೆಯ ಪ್ರಗತಿ ಶಾಲೆ ಆವರಣದಲ್ಲಿ ಆಯೋಜನೆಗೊಂಡಿರುವ, ವಿರಾಜಪೇಟೆ ತಾಲೂಕು...

Download Eedina App Android / iOS

X