ಮೈಸೂರು | ದಸರಾ ಆಹಾರ ಮೇಳ; ಆದಿವಾಸಿಗಳಿಗೆ ಅಧಿಕಾರಿಗಳಿಂದ ತೊಂದರೆ

Date:

Advertisements

ದಸರಾ ಆಹಾರ ಮೇಳದಲ್ಲಿ ಮಳಿಗೆ ತೆರೆಯಲು ಅಧಿಕಾರಿಗಳು ಬಿಡುತ್ತಿಲ್ಲ. ಅಧಿಕ ಬಾಡಿಕೆ ಕಟ್ಟಬೇಕೆಂದು ತೊಂದರೆ ಕೊಡುತ್ತಿದ್ದಾರೆ ಎಂದು ಪ್ರಕೃತಿ ಆದಿವಾಸಿ ಫೌಂಡೇಶನ್ ಟ್ರಸ್ಟ್‌ ಅಧ್ಯಕ್ಷ ಕೃಷ್ಣಯ್ಯ ಆರೋಪಿಸಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಅವರು, “ಅರಣ್ಯ ರಕ್ಷಣೆಯಲ್ಲಿ ನಾವು ಇಲಾಖೆಗಳಿಗೆ ಸಹಾಯ ಮಾಡುತ್ತೇವೆ. ಆದರೆ, ವರ್ಷಕ್ಕೊಮ್ಮೆ ಆಹಾರ ಮೇಳಕ್ಕೆ ಬಂದಾಗ ಹೆಚ್ಚು ಬಾಡಿಗೆ ದರ ವಿಧಿಸುವುದು ಸರಿಯಾದ ನಡೆಯಲ್ಲ. 2014ರಿಂದ ದಸರಾ ಆಹಾರ ಮೇಳದಲ್ಲಿ ಮಳಿಗೆ ಹಾಕಿಕೊಳ್ಳುತ್ತಿದ್ದೇವೆ. ಅಂದಿನಿಂದಲೂ ಯಾರೂ ಬಾಡಿಗೆ ಕೇಳಿಲ್ಲ. ಅದರೆ ಈ ವರ್ಷ ಮಳಿಗೆ ಹಾಕಿಕೊಳ್ಳಲು ಒಂದು ಲಕ್ಷ ರೂ. ಬಾಡಿಗೆ ಕೇಳುತ್ತಿದ್ದಾರೆ” ಎಂದು ಆರೋಪಿಸಿದರು.

“ಅನುಮತಿ ಇಲ್ಲದೇ ನಿಯಮ ಉಲ್ಲಂಘಿಸಿ ಆಹಾರ ಮೇಳದಲ್ಲಿ ಮಳಿಗೆ ತೆರೆದಿದ್ದಾರೆ ನಮ್ಮ ವಿರುದ್ಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ಲಕ್ಷ್ಮೀಪುರಂ ಪೊಲೀಸ್‌ ಠಾಣೆಗೆ ದೂರು ನೀಡಿದೆ.  ಎಚ್‌.ಡಿ.ಕೋಟೆ ತಾಲೂಕಿನ ವಿವಿಧ ಹಾಡಿಗಳ 50 ಮಂದಿ ದಸರಾದಲ್ಲಿ ಮೈಸೂರಿಗೆ ಬಂದು ಬುಡಕಟ್ಟು ಆಹಾರವನ್ನು ನಗರದವರಿಗೆ ಪರಿಚಯಿಸುತ್ತಿದ್ದಾರೆ. ಶೆಡ್‌ ಹಾಕಿಕೊಳ್ಳುವುದಕ್ಕೆ 2 ಲಕ್ಷ ರೂ. ಬೇಕು. ಆಹಾರ ಸಾಮಗ್ರಿ ಖರೀದಿಸಲು 1 ಲಕ್ಷ ರೂ. ಬೇಕು. ಈಗ ಬಾಡಿಗೆ 1 ಲಕ್ಷ ರೂ. ಕೇಳಿದರೆ, ನಾವು ಎಲ್ಲಿಗೆ ಹೋಗಬೇಕು” ಎಂದು ಅಸಮಾಧಾನ ವ್ಯಕ್ತಪಡಿಸಿದರು.

Advertisements

“ಈ ಹಿಂದೆ ನಮಗೆ ಎರಡು ಸ್ಟಾಲ್ ಕೊಡುತ್ತಿದ್ದರು. ಬಾಡಿಗೆಯನ್ನೇನು ಕೇಳುತ್ತಿರಲಿಲ್ಲ. ಆಹಾರ ಮೇಳದಲ್ಲಿ ಬುಡಕಟ್ಟು ಸಮುದಾಯಗಳಾದ ಜೇನುಕುರುಬ, ಎರವ, ಸೋಲಿಗ, ಡೋಂಗ್ರಿ ಗ್ರೆಸಿಯಾ, ರಾಮನಗರದ ಇರುಳಿಗ ಜನರು ಬರುತ್ತಾರೆ. ಬಂದ ಲಾಭದಲ್ಲಿ ಹಂಚಿಕೊಳ್ಳುತ್ತೇವೆ. ಕಳೆದ ದಸರಾದಲ್ಲಿ ಏನೂ ಆದಾಯ ಬರಲಿಲ್ಲ. 2019ರಲ್ಲಿ ₹1 ಲಕ್ಷ ಲಾಭ ಇತ್ತು. ಅದರಿಂದ ಸಮುದಾಯದವರಿಗೆ ರಗ್ಗು, ಸೊಳ್ಳೆ ಪರದೆ ಕೊಟ್ಟಿದ್ದೆವು. ಲಾಭವನ್ನೂ ಸಮುದಾಯದವರಿಗೆ ಖರ್ಚು ಮಾಡುತ್ತೇವೆ. ಈಗ ಬಾಡಿಗೆ ಕೇಳುತ್ತಿರುವುದರಿಂದ ನೋವಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು. ‘

“ಸ್ಥಳಕ್ಕೆ ಮುಡಾ ಎಇಇ ಸಂಪತ್‌ ಕುಮಾರ್‌ ಹಾಗೂ ಆಯುಕ್ತ ಜಿ.ಟಿ.ದಿನೇಶ್‌ ಕುಮಾರ್‌ ಅವರೂ ಬಂದಿದ್ದರು. ಆದಿವಾಸಿಗಳಿಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಲು ಹೋದರೆ, ಆಹಾರ ಮೇಳ ಉಪಸಮಿತಿಯ ಕಾರ್ಯಾಧ್ಯಕ್ಷರೂ ಆದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕಿ ಕುಮುದಾ ಅವರಲ್ಲಿ ಕೇಳಿ ಎನ್ನುತ್ತಾರೆ. ಹಾಗಾಗಿ ಸಚಿವ ಮಹದೇವಪ್ಪ ಅವರಲ್ಲಿ ಮನವಿ ಸಲ್ಲಿಸುತ್ತೇವೆ” ಎಂದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X