ಮೈಸೂರು ದಸರಾ | ಉದ್ಘಾಟಕರಾದ ಸಾಹಿತಿ ಹಂಪನಾ, ಸಿಎಂ ಸಿದ್ದರಾಮಯ್ಯಗೆ ಅಧಿಕೃತ ಆಹ್ವಾನ

Date:

ಮೈಸೂರು ಜಿಲ್ಲಾಡಳಿತದ ವತಿಯಿಂದ ಮೈಸೂರು ದಸರಾ ಮಹೋತ್ಸವ ಉದ್ಘಾಟಕರಾದ ಹೆಸರಾಂತ ಸಂಶೋಧಕ, ಸಾಹಿತಿ ಪ್ರೊ ಹಂ ಪ ನಾಗರಾಜಯ್ಯ (ಹಂಪನಾ) ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದಸರಾ ಮಹೋತ್ಸವಕ್ಕೆ ಗುರುವಾರ ಅಧಿಕೃತವಾಗಿ ಆಹ್ವಾನ ನೀಡಲಾಯಿತು.

- Advertisement -

ಹಂಪನಾ ಅವರ ಬೆಂಗಳೂರಿನ ಕ್ರಸೆಂಟ್ ರಸ್ತೆಯ ಅಮೇರಿಕನ್ ಕಾಲೋನಿಯಲ್ಲಿರುವ ನಿವಾಸಕ್ಕೆ ದಸರಾ ಸ್ವಾಗತ ಸಮಿತಿ ನಿಯೋಗ ತೆರಳಿ ಮೈಸೂರು ಪೇಟ ತೋಡಿಸಿ, ಫಲಫುಷ್ಪದೊಂದಿಗೆ ಆಮಂತ್ರಣ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ದಸರಾ ಸ್ವಾಗತ ಸಮಿತಿ ನಿಯೋಗದಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ‌ ಲಾಟ್ಕರ್, ಜಿಪಂ ಸಿಇಒ ಕೆ ಎಂ ಗಾಯತ್ರಿ, ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಡಾ ಪಿ ಶಿವರಾಜ್, ಚಾಮುಂಡಿ ಬೆಟ್ಟದ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ ಜೆ ರೂಪಾ ಮತ್ತು ಸ್ವಾಗತ ಸಮಿತಿಯ ಎಲ್ಲಾ ಅಧಿಕಾರಿಗಳು ಇದ್ದರು.

ಸಿಎಂ ಸಿದ್ದರಾಮಯ್ಯಗೂ ಆಹ್ವಾನ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ ಆಹ್ವಾನ ನೀಡಿದರು.

ಇದನ್ನು ಓದಿದ್ದೀರಾ? ಧಾರವಾಡ | ದೇಶದ ಅಭಿವೃದ್ಧಿಯಲ್ಲಿ ಶ್ರಮಿಕರ ಪಾತ್ರ ಮಹತ್ವದ್ದು: ನ್ಯಾ. ಪರಶುರಾಮ ದೊಡ್ಡಮನಿ

ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾಕ್ಕೆ ತೆರಳಿ ದಸರಾ ಉದ್ಘಾಟನೆ, ಜಂಬೂ ಸವಾರಿ,ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ದಸರಾ ಕಾರ್ಯಕ್ರಮಗಳಲ್ಲಿ ಭಾಗಿಯಾಗುವಂತೆ ಆಮಂತ್ರಿಸಿದರು.

ಆಹ್ವಾನದ ನಿಯೋಗದಲ್ಲಿ ಶಾಸಕರಾದ ಡಿ ರವಿಶಂಕರ್, ಅನಿಲ್ ಚಿಕ್ಕಮಾದು, ವಿಧಾನ ಪರಿಷತ್ ಸದಸ್ಯ ಡಾ ಯತೀಂದ್ರ ,ಎಸ್ ಸಿ ಎನ್ ಮಂಜೇಗೌಡ, ಡಾ ತಿಮ್ಮಯ್ಯ, ಜಿಲ್ಲಾಧಿಕಾರಿ ಜಿ ಲಕ್ಷ್ಮೀ ಕಾಂತ ರೆಡ್ಡಿ ಹಾಗೂ ಸ್ವಾಗತ ಸಮಿತಿಯ ಅಧಿಕಾರಿಗಳು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ ಭೀತಿಯಲ್ಲಿ ರಾಜಕೀಯ ಪಕ್ಷಗಳು!

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ...

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...