ಮೈಸೂರು | ವಾರಕ್ಕೆ ಆರು ದಿನ ಸರ್ಕಾರಿ ಶಾಲಾ ಮಕ್ಕಳಿಗೆ ಮೊಟ್ಟೆ ನೀಡಬೇಕು; ಸಚಿವ ಡಾ ಹೆಚ್ ಸಿ ಮಹದೇವಪ್ಪ

Date:

Advertisements

ವಾರಕ್ಕೆ ಆರು ದಿನ ಸರ್ಕಾರಿ ಶಾಲಾ ಮಕ್ಕಳಿಗೆ ಮೊಟ್ಟೆ ನೀಡಬೇಕು ಎಂದು ಸಚಿವ ಡಾ ಹೆಚ್ ಸಿ ಮಹದೇವಪ್ಪ ತಿಳಿಸಿದರು.

ಮೈಸೂರು ಮಹಾರಾಜ ಕಾಲೇಜಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ರಾಜ್ಯ ಸರ್ಕಾರದ ‘ಪಿಎಂ ಪೋಷಣ್ ‘ ಮಧ್ಯಾಹ್ನ ಉಪಾಹಾರ ಯೋಜನೆಯನ್ನು ಅಜೀಂ ಪ್ರೇಮ್ ಜಿ ಫೌಂಡೇಶನ್ ಸಹಯೋಗದಲ್ಲಿ ಶಾಲಾ ಮಕ್ಕಳ ಪೌಷ್ಠಿಕತೆ ವೃದ್ಧಿಸಲು ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಯ ವಿದ್ಯಾರ್ಥಿಗಳಿಗೆ ವಾರದಲ್ಲಿ ಆರು ದಿನ ಪೌಷ್ಟಿಕ ಆಹಾರ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಸ್ತುತ ಶಾಲೆಯಲ್ಲಿ ವಾರಕ್ಕೆ 2 ದಿನ ಮಾತ್ರ ಮೊಟ್ಟೆಯನ್ನು ನೀಡುತ್ತಾ ಬಂದಿದ್ದರು. ಆದರೆ ಪ್ರಗತಿಪರ ಕೈಗಾರಿಕಾ ಉದ್ಯಮಿಗಳಾದ ಅಜಿಮ್ ಪ್ರೇಮ್ ಜಿ ಯವರ ಸಿ ಆರ್ ಎಫ್ ಫೌಂಡೇಶನ್ ವತಿಯಿಂದ 1591 ಕೋಟಿ ಹಣ ನೀಡಿದ್ದು, ಇದರಿಂದ 1 ರಿಂದ 10 ತರಗತಿಯ ಸರ್ಕಾರಿ ಶಾಲಾ ಮಕ್ಕಳಿಗೆ ವಾರದಲ್ಲಿ 6 ದಿನ ಮೊಟ್ಟೆಯನ್ನು ನೀಡಬೇಕು ಎಂದು ಸಚಿವ ಡಾ ಎಚ್ ಸಿ ಮಹದೇವಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisements

ಮಕ್ಕಳಿಗೆ ವಿಟಮಿನ್ ಮತ್ತು ಪ್ರೊಟೀನ್ ಮುಖ್ಯವಾಗಿದ್ದು, ಮಕ್ಕಳಿಗೆ ಬಿಸಿ ಊಟದ ಜೊತೆ ಮೊಟ್ಟೆಯನ್ನು ನೀಡಲಾಗುತ್ತಿದೆ. ಸಿಆರ್‌ಎಫ್ ಫೌಂಡೇಶನ್ ನೆರವಿನಿಂದ ಆರು ದಿನ ಮಕ್ಕಳಿಗೆ ಮೊಟ್ಟೆ ನೀಡುವಂತಾಗಿದೆ ಎಂದರು.

ಶಿಕ್ಷಣ ಸಚಿವ ಮಧು ಬಂಗಾರಪ್ಪನ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಹೇಳಿದಂತೆ, ರಾಜ್ಯದಲ್ಲಿ 88% ಮಕ್ಕಳು ಮೊಟ್ಟೆಯನ್ನು ಪಡೆದರೆ ಇನ್ನು 8% ಮಕ್ಕಳು ಬಾಳೆಹಣ್ಣು ಹಾಗೂ ಉಳಿದ 4% ಮಕ್ಕಳು ಕಡಲೆಹಿಟ್ಟಿನ ಚಿಕ್ಕಿಯನ್ನು ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಇದನ್ನು ಓದಿದ್ದೀರಾ? ‘ಈ ದಿನ’ ಫಲಶೃತಿ | ಅನೈತಿಕ ಚಟುವಟಿಕೆಗಳ ತಾಣವಾಗಿದ್ದ ರೋಣ ‘ಇಂದಿರಾ ಕ್ಯಾಂಟೀನ್’ ಸ್ವಚ್ಫಗೊಳಿಸಿದ ಪುರಸಭೆ

ಎಲ್ಲ ಮಕ್ಕಳು ಪ್ರತಿಯೊಂದು ಸೌಲಭ್ಯಗಳನ್ನು ಪಡೆದು ಸದೃಢವಾಗಬೇಕು, ಉತ್ತಮ ರೀತಿಯ ಆಹಾರವನ್ನು ಸೇವಿಸಿ ಆರೋಗ್ಯಕರ ಜೀವನ ಶೈಲಿಯಲ್ಲಿ ಬೆಳೆಯಬೇಕು ಎಂದು ಸರ್ಕಾರ ಸಮವಸ್ತ್ರ, ಪಠ್ಯಪುಸ್ತಕ, ಬಿಸಿ ಹಾಲಿನ ವಿತರಣೆ, ಜೊತೆಗೆ ಇತ್ತೀಚಿಗೆ ರಾಗಿ ಮಾಲ್ಟ್ ಸಹ ನೀಡುತ್ತಿದೆ. ಇಷ್ಟೆಲ್ಲ ಸೌಲಭ್ಯವನ್ನು ಪಡೆದುಕೊಳ್ಳುತ್ತಿರುವ ನೀವು ಚೆನ್ನಾಗಿ ಓದಬೇಕು. ಒಳ್ಳೆಯ ಸಂವಿಧಾನ ಕಟ್ಟುವಂತ, ದೇಶದ ಉತ್ತಮ ಪ್ರಜೆಯಾಗಬೇಕು ಎಂದು ಸಲಹೆ ನೀಡಿದರು.

ಮಕ್ಕಳು ಶಾಲೆಯ ಹಂತದಲ್ಲಿ ಸಂವಿಧಾನದ ಪೀಠಿಕೆಯನ್ನು ಓದಬೇಕು. ಜೊತೆಗೆ ಅರ್ಥೈಸಿ, ಬೇರೆಯವರಿಗೆ ಹೇಳಬೇಕು. ಸಂವಿಧಾನದ ಪೀಠಿಕೆಯನ್ನು ನೋಡಿಕೊಳ್ಳದೆ ಪ್ರತಿಯೊಬ್ಬರು ಹೇಳಲು ಕಲಿಯಬೇಕು. ಭಾರತೀಯರಾದ ನಾವು ಯಾವುದೇ ಜಾತಿ ಧರ್ಮ ಭೇದಕ್ಕೆ ತಲೆಕೊಡದೆ ಅಭಿವೃದ್ಧಿ ಕಡೆಗೆ ನಮ್ಮ ನಡೆ ಇರಬೇಕು. ನಾವು ಬಾಬಾ ಸಾಹೇಬ್ ಬಿ ಆರ್ ಅಂಬೇಡ್ಕರ್ ಅವರ ಸಂವಿಧಾನದ ಮಾರ್ಗದರ್ಶನದಲ್ಲಿ ಮುಂದುವರೆಯಬೇಕು. ನಮಗೆ ಧಾರ್ಮಿಕ ಸ್ವಾತಂತ್ರ್ಯವಿದೆ, ಮಾತನಾಡುವ ಸ್ವಾತಂತ್ರ್ಯವಿದೆ. ಆಚಾರ ವಿಚಾರಗಳ ಬಗ್ಗೆ ತಿಳಿಯಲು ಮುಕ್ತವಾದ ಅವಕಾಶವಿದೆ. ನಾವೆಲ್ಲರೂ ಸಹೋದರತ್ವದಿಂದ ಇರಬೇಕು,ಅದನ್ನು ಬೆಳೆಸಿಕೊಳ್ಳಬೇಕು ಎಂದು ಸಚಿವ ಮಹದೇವಪ್ಪ ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ ಎಂ ಗಾಯತ್ರಿ, ವಿಧಾನ ಪರಿಷತ್ ಸದಸ್ಯ ಸಿ ಎನ್ ಮಂಜೇಗೌಡ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X