ಮೈಸೂರು | ಚುನಾವಣಾ ಪ್ರಚಾರಕ್ಕೆ ರೌಡಿ ಶೀಟರ್‌ಗಳನ್ನು ಬಳಸಿಕೊಳ್ಳದಂತೆ ಎಚ್ಚರಿಕೆ

Date:

  • ಸಮಾಜ ವಿರೋಧಿ ಕೃತ್ಯಗಳಲ್ಲಿ ತೊಡಗದಂತೆ 2,500 ರೌಡಿ ಶೀಟರ್‌ಗಳಿಗೆ ಎಚ್ಚರಿಕೆ
  • ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಉಲ್ಲಂಘಿಸಿದರೆ ಕಾನೂನು ಕ್ರಮ

ರೌಡಿಗಳಿಗೆ ಪೊಲೀಸ್‌ ಇಲಾಖೆ ಎಚ್ಚರಿಕೆ ನೀಡಿದ ಬಳಿಕ ರಾಜಕಾರಣಿಗಳೂ ಚುನಾವಣಾ ಪ್ರಚಾರಕ್ಕೆ ಕಾರ್ಯಕರ್ತರನ್ನು ಆಯ್ಕೆ ಮಾಡುವಾಗ ಜಾಗರೂಕರಾಗಿದ್ದಾರೆ. ಆಯಾ ಬೂತ್‌ಗಳಲ್ಲಿನ ತಮ್ಮ ಪಕ್ಷದ ಕಾರ್ಯಕರ್ತರಿಗೆ ಮಾತ್ರ ಪ್ರಚಾರದ ಜವಾಬ್ದಾರಿ ನೀಡಲಾಗುವುದು ಎಂದು ರಾಜಕೀಯ ನಾಯಕರು ಹೇಳಿದ್ದಾರೆ.

“ಚುನಾವಣೆ ಸಂದರ್ಭದಲ್ಲಿ ರೌಡಿ ಶೀಟರ್‌ ಪಟ್ಟಿಯಲ್ಲಿರುವ ಕೆಲವು ಗಲಭೆಕೋರರನ್ನು ಗಡಿಪಾರು ಮಾಡಿದ ಬಳಿಕ ಉಳಿದ ರೌಡಿಗಳ ಪಟ್ಟಿ ಮಾಡಿ ಅವರಿಗೆ ಎಚ್ಚರಿಕೆ ನೀಡಲಾಗಿದೆ. ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸಾರ್ವಜನಿಕರಿಗೆ ಬೆದರಿಕೆ ಹಾಕುವುದು ಅಥವಾ ಏನನ್ನಾದರೂ ಮಾಡುವಂತೆ ಒತ್ತಾಯಿಸುವುದು ಸೇರಿದಂತೆ ಮುಂತಾದ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ತೊಡಗದಂತೆ ಜಿಲ್ಲೆಯ 2,500ಕ್ಕೂ ಹೆಚ್ಚು ರೌಡಿಗಳಿಂದ ಪ್ರತಿಜ್ಞೆ ಮಾಡಿಸಲಾಗಿದೆ. ಅವರು ಕಾನೂನು ಉಲ್ಲಂಘನೆ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು” ಎಂದು ಪೊಲೀಸರು ತಿಳಿಸಿದ್ದಾರೆ.

ನಗರ ಮತ್ತು ಜಿಲ್ಲಾ ಪೊಲೀಸರು ಹಾಗೂ ಜಿಲ್ಲಾಡಳಿತದ ವತಿಯಿಂದ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಚುನಾವಣಾ ಆಯೋಗ ಹೊರಡಿಸಿದ ಎಲ್ಲ ಮಾರ್ಗಸೂಚಿಗಳನ್ನು ಪಾಲಿಸುವಂತೆ ನಿರ್ದೇಶನ ನೀಡಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಚುನಾವಣಾ ಪ್ರಚಾರಕ್ಕೆ ಕಾಂಗ್ರೆಸ್‌ ಕಾರ್ಯಕರ್ತರನ್ನು ಮಾತ್ರ ಬಳಸಿಕೊಳ್ಳಲಾಗುತ್ತಿದೆ. ಪ್ರತಿಯೊಬ್ಬರೂ ಆಯಾ ಬೂತ್‌ಗಳಲ್ಲಿ ಕೆಲಸ ಮಾಡಬೇಕು. ಪಕ್ಷದ ಮುಖಂಡರು ಕಾರ್ಯಕರ್ತರನ್ನು ಮೇಲ್ವಿಚಾರಣೆ ಮಾಡಲಿದ್ದಾರೆ” ಎಂದು ನಗರ ಕಾಂಗ್ರೆಸ್ ಅಧ್ಯಕ್ಷ ಆರ್ ಮೂರ್ತಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಹುಲ್ ಗಾಂಧಿ ಕೋಲಾರ ಭೇಟಿ ಮುಂದೂಡಿಕೆ

“ಚುನಾವಣಾ ಕೆಲಸದ ಸಮಯದಲ್ಲಿ ಜಾಗರೂಕರಾಗಿರಲು ಮತ್ತು ಕಾನೂನುಬಾಹಿರ ಚಟುವಟಿಕೆಯಲ್ಲಿ ತೊಡಗಿರುವ ಯಾವುದೇ ಹಿನ್ನೆಲೆಯ ವ್ಯಕ್ತಿಗಳ ಬಗ್ಗೆ ಮಾಹಿತಿ ನೀಡುವಂತೆ ನಮ್ಮ ಎಲ್ಲ ಕಾರ್ಯಕರ್ತರಿಗೆ ತಿಳಿಸಿದ್ದೇವೆ. ಪ್ರಚಾರದ ಜವಾಬ್ದಾರಿಯನ್ನು ನಮ್ಮ ಕಾರ್ಯಕರ್ತರಿಗೆ ಮಾತ್ರ ನೀಡಲಾಗಿದೆ” ಎಂದು ನಗರ ಬಿಜೆಪಿ ಅಧ್ಯಕ್ಷ ಟಿ ಎಸ್ ಶ್ರೀವತ್ಸ ಹೇಳಿದ್ದಾರೆ.

“ಜಿಲ್ಲೆಯಲ್ಲಿ ಸುಮಾರು 1,400 ರೌಡಿಗಳಿದ್ದು, ಚುನಾವಣೆ ಸಂದರ್ಭದಲ್ಲಿ ಯಾವುದೇ ಸಮಾಜ ವಿರೋಧಿ ಚಟುವಟಿಕೆ ನಡೆಸದಂತೆ ಅವರಿಂದ ಪ್ರತಿಜ್ಞೆ ಮಾಡಿಸಿದ್ದೇವೆ. ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಉಲ್ಲಂಘಿಸಿದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಎಚ್ಚರಿಕೆ ನೀಡಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಕಾಂಗ್ರೆಸ್‌ ಮುಖಂಡರ ಮನೆ ಮನೆ ಪ್ರಚಾರ; ಕಾರ್ಡ್‌ ಹಂಚಿ ಮತಯಾಚನೆ

ಶಿವಮೊಗ್ಗನಗರದ ಗೋಪಾಲಗೌಡ ಬಡಾವಣೆಯಲ್ಲಿ ಸ್ಥಳೀಯ ಕಾಂಗ್ರೆಸ್ ಪಕ್ಷದ ಮುಖಂಡರು ಮನೆಮನೆಗೆ ತೆರಳಿ...

ತುಮಕೂರು | ನಟಿ ಶೃತಿ ತಮ್ಮ ಹೇಳಿಕೆ ವಾಪಸ್ ಪಡೆಯಬೇಕೆಂದು ಆಗ್ರಹ

ಬಿಜೆಪಿ ಪಕ್ಷದ ಪ್ರಚಾರಕಿ ನಟಿ ಶ್ರುತಿ ಅವರ ಫ್ರಿ ಬಸ್ ಕುರಿತ...

ಕಲಬುರಗಿ | ಅಭಿವೃದ್ಧಿ ಪರವಾಗಿರುವ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ, ಮತದಾರರಲ್ಲಿ ಸಿಎಂ ಮನವಿ

ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಮಲ್ಲಿಕಾರ್ಜುನ ಖರ್ಗೆಯವರು ಸೋತಿದ್ದರಿಂದ ಖರ್ಗೆಯವರಿಗೆ...

ಚಿಕ್ಕಬಳ್ಳಾಪುರ | ಏಕಕಾಲದಲ್ಲಿ ಒಂದೇ ಕುಟುಂಬದ 85 ಮಂದಿ ಮತದಾನ

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನದ ಪ್ರಕ್ರಿಯೆ ಬಿರುಸಿನಿಂದ...