ಮೈಸೂರು | ವಿದ್ಯುತ್‌ ಕಳ್ಳತನ; ₹6 ಕೋಟಿಗೂ ಅಧಿಕ ದಂಡ ವಿಧಿಸಿದ ಸೆಸ್ಕಾಂ

Date:

Advertisements

ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದವರ ವಿರುದ್ಧ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ (ಸೆಸ್ಕಾಂ)ದ ಜಾಗೃತ ದಳದ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡು ₹6 ಕೋಟಿಗೂ ಹೆಚ್ಚು ಮೊತ್ತದ ದಂಡ ವಿಧಿಸಿರುವುದಾಗಿ ತಿಳಿದುಬಂದಿದೆ.

ಜಾಗೃತ ದಳದ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಸಿ ಉಮೇಶ್‌ ಹಾಗೂ ಪೊಲೀಸ್‌ ಉಪ ಅಧೀಕ್ಷಕ ಆನಂದಮೂರ್ತಿ ಪ್ರಕಟಣೆ ಹೊರಡಿಸಿದ್ದು, “ಸೆಸ್ಕ್‌ ಹಿರಿಯ ಅಧಿಕಾರಿಗಳ ಮಾರ್ಗದರ್ಶನ ಹಾಗೂ ಸೆಸ್ಕ್ ಜಾಗೃತ ದಳದ ಪೊಲೀಸ್ ಅಧೀಕ್ಷಕ ಸವಿತಾ ಹೂಗಾರ ಅವರ ನೇತೃತ್ವದಲ್ಲಿ ಜಾಗೃತ ದಳದ ಅಧಿಕಾರಿಗಳು ಹಾಗೂ ಸಿಬ್ಬಂದಿ, ಸೆಸ್ಕ್‌ ವಿಭಾಗ ವ್ಯಾಪ್ತಿಗೆ ಒಳಪಡುವ ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು ಹಾಗೂ ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. ಈ ಐದು ಜಿಲ್ಲೆಗಳಲ್ಲಿ ಅಕ್ರಮವಾಗಿ ವಿದ್ಯುತ್‌ ಕಳ್ಳತನ, ವಿದ್ಯುತ್‌ ದುರುಪಯೋಗ ಮಾಡಿದವರ ವಿರುದ್ಧ ಕ್ರಮ ಕೈಗೊಂಡು, ಪ್ರಕರಣಗಳನ್ನು ದಾಖಲಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಸೆಸ್ಕ್ ಜಾಗೃತ ದಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2024-25ನೇ ಸಾಲಿನಲ್ಲಿ ಗೃಹ, ವಾಣಿಜ್ಯ, ಕೈಗಾರಿಕೆ, ತಾತ್ಕಾಲಿಕ ಸ್ಥಾವರಗಳು ಮತ್ತು ಇತರ ಕಡೆಗಳಲ್ಲಿ 5,716 ಸ್ಥಾವರಗಳನ್ನು ಜಾಗೃತ ದಳದ ಅಧಿಕಾರಿಗಳು ಪರಿಶೀಲಿಸಿದ್ದಾರೆ. ಈ ಸಂದರ್ಭದಲ್ಲಿ 1,312 ವಿದ್ಯುತ್ ಕಳ್ಳತನ ಮತ್ತು ದುರುಪಯೋಗ ಪ್ರಕರಣಗಳನ್ನು ದಾಖಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪ್ರಕರಣಗಳಿಂದ ಒಟ್ಟು 6 ಕೋಟಿ 36 ಲಕ್ಷದ 72 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ” ಎಂದು ಉಲ್ಲೇಖಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಮಂಗಳೂರು | ಜಿಲ್ಲಾ ಕಾರಾಗೃಹದ ಸುಮಾರು 45 ಮಂದಿ ವಿಚಾರಣಾಧೀನ ಖೈದಿಗಳು ಅಸ್ವಸ್ಥ

“ಮೀಟರ್‌ ಪರಿಶೀಲನೆ ವಿಭಾಗದಿಂದ ವಿವಿಧ ವಿಭಾಗಗಳಲ್ಲಿ ಒಟ್ಟು 23,014 ಸ್ಥಾವರಗಳ ರೇಟಿಂಗ್‌ ಮಾಡಿ, ಲೋಪಗಳಿರುವ ಕಡೆಗಳಲ್ಲಿ ಗುರುತಿಸಲಾಗದ ಪ್ರಕರಣಗಳನ್ನು ದಾಖಲಿಸಿ 12,37,56,660 ರೂಪಾಯಿ ದಂಡ ವಿಧಿಸಲಾಗಿದೆ” ಎಂದು ಹೇಳಿದ್ದರೆ.

“ವಿದ್ಯುತ್ ಕಳ್ಳತನ ಮಾಡುವುದು ವಿದ್ಯುಚ್ಛಕ್ತಿ ಕಾಯ್ದೆಯ ಅಡಿಯಲ್ಲಿ ಕ್ರಿಮಿನಲ್ ಸ್ವರೂಪದ ಶಿಕ್ಷಾರ್ಹ ಅಪರಾಧವಾಗಿದೆ. ವಿದ್ಯುತ್ ಕಳ್ಳತನ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು. ಸಾರ್ವಜನಿಕರು ವಿದ್ಯುತ್ ಕಳ್ಳತನದ ಬಗ್ಗೆ ಮಾಹಿತಿ ಇದ್ದಲ್ಲಿ ಇಲ್ಲಿ ನೀಡಿರುವ ಸೆಸ್ಕಾಂ ಸಂಖ್ಯೆಗಳಿಗೆ ಮಾಹಿತಿ ನೀಡಬಹುದು” ಎಂದು ತಿಳಿಸಿದ್ದಾರೆ.

ಮೈಸೂರು ಜಿಲ್ಲೆ : ಪೊಲೀಸ್‌ ಇನ್ಸ್‌ಪೆಕ್ಟರ್‌ – 9448994736
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ವಿ) – 9448994737

ಮಂಡ್ಯ ಜಿಲ್ಲೆ : ಪೊಲೀಸ್‌ ಇನ್ಸ್‌ಪೆಕ್ಟರ್‌ – 9448994919
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ವಿ) – 9448994863

ಹಾಸನ ಜಿಲ್ಲೆ : ಪೊಲೀಸ್‌ ಇನ್ಸ್‌ಪೆಕ್ಟರ್‌ – 9448994935
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ವಿ) – 9448994936

ಚಾಮರಾಜನಗರ ಜಿಲ್ಲೆ : ಪೊಲೀಸ್‌ ಇನ್ಸ್‌ಪೆಕ್ಟರ್‌ – 9449598689
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ವಿ) – 9448994926

ಕೊಡಗು ಜಿಲ್ಲೆ : ಪೊಲೀಸ್‌ ಇನ್ಸ್‌ಪೆಕ್ಟರ್‌ – 9449598620
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ವಿ) – 9448499902 ಸಂಖ್ಯಗೆ ಕರೆ ಮಾಡಿ ಆಯಾ ಭಾಗದ ವಿದ್ಯುತ್‌ ಕಳ್ಳತನದಂತಹ ಪ್ರಕರಣಗಳ ಕುರಿತು ದೂರು ನೀಡಬಹುದು ಎಂದು ಸೂಚಿಸಲಾಗಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

Download Eedina App Android / iOS

X