ಮೈಸೂರು | ಎಂಜಿನಿಯರ್‌ಗಳು ಮುಕ್ತ ಮನಸ್ಸಿನಿಂದ ಯೋಚನೆ ಮಾಡಬೇಕು: ಪ್ರವೀಣ್ ಬಿ ಪಿ

Date:

ಎಂಜಿನಿಯರ್‌ಗಳು ಮುಕ್ತ ಮನಸ್ಸಿನಿಂದ ಯೋಚನೆ ಮಾಡಬೇಕು. ಅದರ ಸ್ಪಷ್ಟತೆಯೊಂದಿಗೆ ಜೀವನದ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸ್ಯಾಮ್ಸಂಗ್ ಆರ್ & ಡಿ ಇನ್‌ಸ್ಟಿಟ್ಯೂಟ್ ಇಂಡಿಯಾ, ಬೆಂಗಳೂರು ವಿಶುವಲ್ ಇಂಟೆಲಿಜೆನ್ಸ್ ನಿರ್ದೇಶಕ ಪ್ರವೀಣ್ ಬಿ ಪಿ ಅಭಿಮತ ವ್ಯಕ್ತಪಡಿಸಿದರು.

- Advertisement -

ಮೈಸೂರು ನಗರದ ಜಿಎಸ್‌ಎಸ್‌ಎಸ್‌ಐಇಟಿಡಬ್ಲ್ಯೂ(ಇನ್‌ಸ್ಟಿಟ್ಯೂಟ್‌ ಆಫ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಫಾರ್ ವುಮೆನ್ಸ್) ಮತ್ತು ಜಿಎಸ್‌ಎಸ್‌ಎಸ್‌ ಸ್ಕೂಲ್ ಆಫ್ ಆರ್ಕಿಟೆಕ್ಚರ್ ಫಾರ್ ವುಮೆನ್ಸ್ ವತಿಯಿಂದ 2024-25ನೇ ಶೈಕ್ಷಣಿಕ ವರ್ಷದ ಪ್ರಥಮ ವರ್ಷದ ಬಿಇ ಮತ್ತು ಬಿ ಆರ್ಚ್ ಕೋರ್ಸ್ ವಿದ್ಯಾರ್ಥಿಗಳಿಗೆ ಜಿಎಸ್‌ಎಸ್‌ಎಸ್‌ಐಇಟಿಡಬ್ಲ್ಯೂ ಕ್ಯಾಂಪಸ್‌ನ ಎಂ ಗೋವಿಂದರಾವ್‌ ಮೆಮೋರಿಯಲ್ ಹಾಲ್‌ನಲ್ಲಿ ಹಮ್ಮಿಕೊಂಡಿದ್ದ ಸ್ಟೂಡೆಂಟ್ ಇಂಡಕ್ಷನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

“ಬಿಇ ಮತ್ತು ಬಿ ಆರ್ಚ್‌ ಕೋರ್ಸ್‌ಗಳಿಗೆ ಹೊಸದಾಗಿ ಪ್ರವೇಶ ಪಡೆದ ಉದಯೋನ್ಮುಖ ಎಂಜಿನಿಯರ್‌ಗಳು ಕಲಿಯಲು ಮುಕ್ತ ಮನಸ್ಸು ಹೊಂದಿರಬೇಕು. ಮುಖ್ಯವಾಹಿನಿಯ ಎಂಜಿನಿಯರಿಂಗ್‌ಗೆ ತಮ್ಮನ್ನು ತಾವು ಸೀಮಿತ ಮಾಡಿಕೊಳ್ಳದೆ ವೈವಿಧ್ಯತೆಯನ್ನು ಕಲಿಯಬೇಕು” ಎಂದು ಸಲಹೆ ನೀಡಿದರು.

“ಎಂಜಿನಿಯರ್‌ಗಳಾದವರು ಜೀವನದ ಮೌಲ್ಯಗಳ ಜತೆಗೆ ಶಿಕ್ಷಣವನ್ನು ಆಧ್ಯಾತ್ಮಿಕ ರೀತಿಯಲ್ಲಿ ಅವಲೋಕಿಸಬೇಕು. ಇದರಿಂದ ಆಧ್ಯಾತ್ಮಿಕತೆಯನ್ನು ಪ್ರಶ್ನಿಸುವ ಸಾಮರ್ಥ್ಯ ಹೆಚ್ಚಿಸುತ್ತದೆ. ಉತ್ತಮ ತಿಳುವಳಿಕೆಗೆ ಕಾರಣವಾಗುತ್ತದೆ. ಹೆಣ್ಣುಮಕ್ಕಳ ಸಬಲೀಕರಣಕ್ಕಾಗಿ ಮತ್ತು ಮಹಿಳೆಯರಿಗಾಗಿಯೇ ಕರ್ನಾಟಕದಲ್ಲಿ ಮೊದಲ ಎಂಜಿನಿಯರಿಂಗ್ ಸಂಸ್ಥೆಯನ್ನು ಸ್ಥಾಪಿಸಿದ ದಿವಂಗತ ಪ್ರೊ ಬಿ ಎಸ್ ಪಂಡಿತ್ ಅವರ ಪ್ರಯತ್ನಗಳನ್ನು ಶ್ಲಾಘನೀಯ” ಎಂದು ಸ್ಮರಿಸಿದರು.

“ವಿದ್ಯಾರ್ಥಿಗಳು ಸಕಾರಾತ್ಮಕ ಮನೋಭಾವವನ್ನು ಹೊಂದಿರಬೇಕು. ವೃತ್ತಿಪರ ಬೆಳವಣಿಗೆಗೆ ಸಮಗ್ರತೆಯನ್ನು ತೋರಿಸಬೇಕು” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಸವರ್ಣೀಯರಿಂದ ದಲಿತರಿಗೆ ಬಹಿಷ್ಕಾರ: ಜಿಲ್ಲಾಡಳಿತದಿಂದ ಶಾಂತಿ ಸಭೆ

ಆಡಳಿತಾಧಿಕಾರಿ ಅನುಪಮ ಬಿ ಪಂಡಿತ್ ಮಾತನಾಡಿ, “ಜಿಎಸ್‌ಎಸ್ಎಸ್‌ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಫಾರ್ ವುಮೆನ್ ಮತ್ತು ಜಿಎಸ್‌ಎಸ್‌ಎಸ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್‌ಗಳ ಸ್ಥಾಪನೆ ಹಾಗೂ ಬೆಳವಣಿಗೆಯ ಬಗ್ಗೆ ಸಂಕ್ಷಿಪ್ತ ವರದಿಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಡಾ ಶಿವಕುಮಾರ್ ಎಂ, ಪ್ರಾಂಶುಪಾಲೆ ಅರ್ಚನಾ ಉತ್ತಯ್ಯ, ಆಡಳಿತ ಮಂಡಳಿ ಸದಸ್ಯ ಭರತ್ ಆರ್ ಕೆ, ಗೌರವ ಕಾರ್ಯದರ್ಶಿ ವನಜಾ ಬಿ ಪಂಡಿತ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಾಂಧಿ ಕಂಡ ಕನಸನ್ನ ಸೌಹಾರ್ದಗೊಳಿಸೋಣ: ಬಸವರಾಜ ಪೂಜಾರ

"ಸರ್ಕಾರದ ಕಾರ್ಯಕ್ರಮದ ಭಾಗವಾಗಿ ಮಾತ್ರ ಗಾಂಧಿ ಜಯಂತಿ ಅತ್ಯಂತ ವಿಜೃಂಭಣೆಯಿಂದ ಆಚರಣೆ...

SIR: ಕೊಡಗಿನ ಬ್ಯಾಡಗೊಟ್ಟದಲ್ಲಿ 66 ಮುಸ್ಲಿಂ ಮತಗಳ ಅಳಿಸುವಿಕೆಗೆ Form-7 ಅರ್ಜಿ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ಸಂದರ್ಭದಲ್ಲಿ ಮತದಾರರ...

ಅ.4ರಿಂದ ವಿಜಯಪುರ – ತಿರುಪತಿ ದಸರಾ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭ

ದಸರಾ ಹಬ್ಬದ ಹಿನ್ನೆಲೆಯಲ್ಲಿ ತಿರುಪತಿ–ವಿಜಯಪುರ ನಡುವೆ ಪ್ರಯಾಣಿಕರ ಅನುಕೂಲಕ್ಕಾಗಿ ಸಾಪ್ತಾಹಿಕ ವಿಶೇಷ...

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...