ಮೈಸೂರು | ಸಿಸಿಟಿವಿ ಕಣ್ಗಾವಲಿನ ಭದ್ರತಾ ಕೊಠಡಿಯಲ್ಲಿ ಇವಿಎಂ ಭದ್ರ

Date:

ಮೈಸೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಮುಗಿದಿದ್ದು, ಜಿಲ್ಲೆಯ 143 ಅಭ್ಯರ್ಥಿಗಳ ಹಣೆಬರಹವನ್ನು ಪಡುವಾರಹಳ್ಳಿಯ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜ್‌ನ ಭದ್ರತಾ ಕೊಠಡಿಯಲ್ಲಿ ಇರಿಸಲಾಗಿರುವ ವಿದ್ಯುನ್ಮಾನ ಮತಯಂತ್ರಗಳಲ್ಲಿ (ಇವಿಎಂ) ಭದ್ರಪಡಿಸಲಾಗಿದೆ.

ಮೇ 10ರ ಸಂಜೆ ಮತದಾನ ಮುಗಿದ ಬಳಿಕ, ಇವಿಎಂಗಳು ಮತ್ತು ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿಪ್ಯಾಟ್) ಯಂತ್ರಗಳನ್ನು ಸೀಲ್ ಮಾಡಿ ಭಾರೀ ಪೊಲೀಸ್ ಭದ್ರತೆಯಲ್ಲಿ ಮತಗಟ್ಟೆ ಏಜೆಂಟರ ಸಮ್ಮುಖದಲ್ಲಿ ಮತಗಟ್ಟೆಗಳಿಂದ ಮತ ಎಣಿಕೆ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರಿನ ಜನರಿಗೆ ಮತದಾನ ಎಂದರೆ ನಿರ್ಲಕ್ಷ್ಯವೇಕೆ?

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಉಪ ಪೊಲೀಸ್ ಆಯುಕ್ತರು ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರ ನೇತೃತ್ವದಲ್ಲಿ ಕೇಂದ್ರ ಅರೆಸೈನಿಕ ಪಡೆಗಳು, ನಗರ ಸಶಸ್ತ್ರ ಮೀಸಲು ಪಡೆ ಮತ್ತು ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಸಿಬ್ಬಂದಿಯನ್ನು ಒಳಗೊಂಡ ಭದ್ರತಾ ಸಿಬ್ಬಂದಿಯ ತಂಡವನ್ನು ದಿನದ 24 ಗಂಟೆಯೂ ಭದ್ರತಾ ಕೊಠಡಿಗಳ ಭದ್ರತೆಗಾಗಿ ನಿಯೋಜಿಸಲಾಗಿದೆ.

ಶನಿವಾರ(ಮೇ.13) ಬೆಳಿಗ್ಗೆ 7 ಗಂಟೆಗೆ ಕಾಲೇಜು ಆವರಣದಲ್ಲಿ ಮತ ಎಣಿಕೆ ಪ್ರಾರಂಭವಾಗಲಿದೆ. ಭದ್ರತಾ ಕೊಠಡಿಗೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಕಾಲೇಜಿಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಕುಟುಂಬ ರಾಜಕಾರಣದ ವಿರುದ್ಧ ನನ್ನ ಹೋರಾಟ: ವಿನಯ್ ಕುಮಾರ್

ಪಾಳೇಗಾರಿಕೆ, ಕುಟುಂಬ ರಾಜಕಾರಣದ ವಿರುದ್ಧ ಹೋರಾಟ ನನ್ನದು. ಸಚಿವ ಎಸ್ ಎಸ್...

ಕಲಬುರಗಿ | ನನ್ನನ್ನು ಎನ್‌ಕೌಂಟರ್ ಮಾಡುವ ಜೀವ ಬೆದರಿಕೆ ಪತ್ರ ಬಂದಿದೆ: ಸಚಿವ ಪ್ರಿಯಾಂಕ್ ಖರ್ಗೆ

ಬಿಜೆಪಿಯವರು ಗಲಭೆ ಸೃಷ್ಟಿಸಿ ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆಣ ಬೀಳಿಸಿಯಾದ್ರೂ...