ಮೈಸೂರು | ರಸಗೊಬ್ಬರ, ಪೆಟ್ರೋಲ್-ಡೀಸೆಲ್ ದರ ಏರಿಕೆ ಖಂಡಿಸಿ ರೈತ ಸಂಘದ ಪ್ರತಿಭಟನೆ

Date:

ರಸಗೊಬ್ಬರ, ಡೀಸೆಲ್ ಹಾಗೂ ಪೆಟ್ರೋಲ್ ದರ ಏರಿಕೆಯನ್ನು ಖಂಡಿಸಿ ಮತ್ತು ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ನಜರ್‌ಬಾದ್‌ನಲ್ಲಿರುವ ತಹಶೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

- Advertisement -

ಪ್ರತಿಭಟನಾಕಾರರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರು ಹಾಗೂ ಜನಸಾಮಾನ್ಯರ ಜೀವನದೊಂದಿಗೆ ಚೆಲ್ಲಾಟವಾಡುತ್ತಿವೆ ಎಂದು ಆರೋಪಿಸಿದರು. ನಿರಂತರ ಬೆಲೆ ಏರಿಕೆಯಿಂದ ರೈತರು ಬಳಸುವ ಕೃಷಿ ಸಾಮಗ್ರಿಗಳ ದರ ಹೆಚ್ಚಾಗಿ, ಕೃಷಿ ವೃತ್ತಿಯೇ ಸಂಕಷ್ಟಕ್ಕೆ ಸಿಲುಕುತ್ತಿದೆ ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿಕ್ಕು ತೋಚದೆ ತಬ್ಬಿಬ್ಬಾಗಿರುವ ಚುನಾವಣಾ ಆಯೋಗ: ದಿನೇ ದಿನೆ...

ಸೆಪ್ಟೆಂಬರ್ 23ರ 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯ ವರದಿಯ ನಂತರ ಆಯೋಗ ಹಲವು ಸ್ಪಷ್ಟನೆಗಳನ್ನು ನೀಡಿದ್ದರೂ, ಒಂದು ಮುಖ್ಯ ಪ್ರಶ್ನೆಗೆ ಇನ್ನೂ ಉತ್ತರವಿಲ್ಲ: ಕಾನೂನುಬದ್ಧವಾಗಿ ಮತದಾರರ ಪಟ್ಟಿಯಲ್ಲಿದ್ದ 16 ಲಕ್ಷಕ್ಕೂ ಹೆಚ್ಚು ಜನರ...

ಸ್ಟಿಂಗ್ ಆಪರೇಷನ್ | ಭ್ರಷ್ಟಾಚಾರ ಬಯಲಿಗೆಳೆಯುವ ಸಾಧನವಾಗಬೇಕೇ ವಿನಾ...

ಆಡಳಿತ ಪಕ್ಷವನ್ನು ಪ್ರಶ್ನಿಸುವುದು ಪ್ರಜಾಪ್ರಭುತ್ವದ ಮೂಲಭೂತ ಕರ್ತವ್ಯ. ಆದರೆ, ವಿರೋಧ ಪಕ್ಷಗಳಿಗೂ ತಮ್ಮ ಆರೋಪಗಳನ್ನು ಸಮರ್ಥಿಸುವ ಹೊಣೆಗಾರಿಕೆ ಇದೆ. ರಾಜಕೀಯ ಲಾಭಕ್ಕಾಗಿ ಗಂಭೀರ ಆರೋಪಗಳನ್ನು ಮುಂದಿಡುವುದು ಮತ್ತು ಅವುಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುವ ಪ್ರಕ್ರಿಯೆಯನ್ನು...

ಬೇಡ್ತಿ ನದಿ ತಿರುವು ಯೋಜನೆಯೂ, ಬೊಮ್ಮಾಯಿ-ಕಾಗೇರಿ ಪೀಕಲಾಟವೂ

ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಇದ್ದಕ್ಕಿದ್ದಂತೆಯೇ ಬೇಡ್ತಿ-ವರದಾ ಮತ್ತು ಬೇಡ್ತಿ-ಧರ್ಮ-ವರದಾ ನದಿ ಜೋಡಣೆ ಎಂಬ ಅವಳಿ ಗುಮ್ಮಗಳು ಎದ್ದು ಕುಳಿತು ಬೆಚ್ಚಿ ಬೀಳಿಸಿವೆ. ಸ್ವರ್ಣವಲ್ಲೀ ಸ್ವಾಮಿ, ಎಂಪಿ ಕಾಗೇರಿ ಮತ್ತು...

ಕೂಡಲೇ ಏರಿಸಿರುವ ರಸಗೊಬ್ಬರ, ಪೆಟ್ರೋಲ್ ಹಾಗೂ ಡೀಸೆಲ್ ದರಗಳನ್ನು ಹಿಂಪಡೆಯಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಬಳಿಕ ತಹಶೀಲ್ದಾರ್ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.

ಈ ಸುದ್ದಿ ಓದಿದ್ದೀರಾ?ಮೈಸೂರು | ರಮ್ಮನಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಅಕ್ರಮ ಆರೋಪ: ಕಂದಾಯ ನಿರೀಕ್ಷಕ ಅಮಾನತು

ಪ್ರತಿಭಟನೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ. ಮರಂಕಯ್ಯ, ತಾಲೂಕು ಅಧ್ಯಕ್ಷ ಆನಂದೂರು ಪ್ರಭಾಕರ್, ಪ್ರಧಾನ ಕಾರ್ಯದರ್ಶಿ ಮಂಡಕಳ್ಳಿ ಮಹೇಶ್, ಉಪಾಧ್ಯಕ್ಷ ಮುದ್ದುರಾಜು, ಮಹೇಶ್, ಕಾರ್ಯಾಧ್ಯಕ್ಷ ಬಸಪ್ಪ ನಾಯಕ, ಕಾರ್ಯದರ್ಶಿ ನಾಗನಹಳ್ಳಿ ಚಂದ್ರಶೇಖರ್, ಯುವ ಘಟಕದ ಅಧ್ಯಕ್ಷ ಮಹೇಶ್, ರಾಘವೇಂದ್ರ, ಮಹದೇವಮ್ಮ ಸೇರಿದಂತೆ ಹಲವರು ಇದ್ದರು.

ಹಕ್ಕೊತ್ತಾಯಗಳು :

  • ಗೊಬ್ಬರದ ಬೆಲೆ ಏರಿಕೆಯನ್ನು ಹಿಂಪಡೆದು ರಸಗೊಬ್ಬರಗಳ ಮೇಲಿನ ಸಬ್ಸಿಡಿಯನ್ನು ಹೆಚ್ಚಿಸಿ ರೈತರಿಗೆ ರಿಯಾಯಿತಿ ದರದಲ್ಲಿ ಗೊಬ್ಬರ ಪೂರೈಸಬೇಕು.
  • ಕಡ್ಡಾಯ ಲಿಂಕ್ ಪದ್ಧತಿಯನ್ನು ಕೈಬಿಟ್ಟು ರೈತರು ಕೇಳಿದ ಗೊಬ್ಬರವನ್ನು ಮಾತ್ರ ಪೂರೈಸುವ ವ್ಯವಸ್ಥೆ ಜಾರಿಗೊಳಿಸಬೇಕು.
  • ಗೊಬ್ಬರದ ಕೃತಕ ಅಭಾವ ಸೃಷ್ಟಿಸಿ ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.
  • ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯನ್ನು ಹಿಂಪಡೆದು ಕೃಷಿ ಚಟುವಟಿಕೆಗಳಿಗೆ ರಿಯಾಯಿತಿ ದರದಲ್ಲಿ ಡೀಸೆಲ್ ಒದಗಿಸಬೇಕು.
  • ಡಾ. ಎಂ.ಎಸ್. ಸ್ವಾಮೀನಾಥನ್ ವರದಿ ಅನ್ವಯ ಕನಿಷ್ಠ ಬೆಂಬಲ ಬೆಲೆಯನ್ನು ಖಾತ್ರಿಗೊಳಿಸಬೇಕು.
  • ಭರದ ಮುನ್ಸೂಚನೆ ಹಿನ್ನೆಲೆ ಕುಡಿಯುವ ನೀರು, ಜಾನುವಾರು ಮೇವು ಹಾಗೂ ಉದ್ಯೋಗ ಖಾತ್ರಿ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಬೇಕು.
  • ವಿಧಾನಸಭಾ ಚುನಾವಣೆ ಪೂರ್ವದಲ್ಲಿ ನೀಡಿದ್ದ ಭರವಸೆಯಂತೆ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಹಾಗೂ ಜಾನುವಾರು ಹತ್ಯೆ ಮತ್ತು ಸಂರಕ್ಷಣಾ ಕಾಯ್ದೆಯನ್ನು ಹಿಂಪಡೆಯಬೇಕು.
  • ಎಪಿಎಂಸಿಯನ್ನು ರೈತ ಸ್ನೇಹಿಯಾಗಿ ಬಲಪಡಿಸಿ ಕೃಷಿ ಬೆಲೆ ಆಯೋಗವನ್ನು ಶಾಶ್ವತ ಆಯೋಗವನ್ನಾಗಿ ಘೋಷಿಸಬೇಕು.
  • ದುರಸ್ತಿ ಪೋಡುಗಳನ್ನು ಕಾಲಮಿತಿಯೊಳಗೆ ಪೂರೈಸಿ, ಪರವಾನಗಿ ಭೂ ಮಾಪಕರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಕಬ್ಬು ಬೆಳೆಗಾರರು; ಬೈಪಾಸ್ ರಸ್ತೆ ತಡೆದು ಪ್ರತಿಭಟನೆ

ಕಬ್ಬಿಗೆ ಬೆಂಬಲ ಬೆಲೆ ಘೋಷಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ...

ಬಾಗಲಕೋಟೆ | ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಆದ್ಯತೆ ನೀಡಿ; ಅಧಿಕಾರಿಗಳಿಗೆ ವಿ.ರಶ್ಮಿ ಮಹೇಶ ಸೂಚನೆ

ಬಾಗಲಕೋಟೆ ಜಿಲ್ಲೆಯಲ್ಲಿ ಶೈಕ್ಷಣಿಕ ಪ್ರಗತಿ ಹಾಗೂ ಶಾಲಾ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ...

ಅ.15ರಂದು ದ.ಕ., ಉಡುಪಿ ಜಿಲ್ಲೆಗಳಿಗೆ ಸಿಎಂ ಡಿಕೆ ಶಿವಕುಮಾರ್ ಭೇಟಿ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅ.15ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ...

ರಾಯಚೂರು | ಕಸ ಹಾಕಿದರೆ ₹50 ಸಾವಿರ ದಂಡ: ಮಹಾನಗರ ಪಾಲಿಕೆ ಎಚ್ಚರಿಕೆ

ನಗರ ವ್ಯಾಪ್ತಿಯ ಖಾಲಿ ನಿವೇಶನಗಳಲ್ಲಿ ಕಸದ ರಾಶಿ ಹಾಗೂ ಕಟ್ಟಡ ಭಗ್ನಾವಶೇಷಗಳನ್ನು...