ಮೈಸೂರು | ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ರೈತ ಸಂಘ ಆಗ್ರಹ

Date:

ಕಾವೇರಿ ನೀರು ನಿರ್ವಹಣಾ ಸಮಿತಿಯ ತೀರ್ಮಾನವು ರಾಜ್ಯದ ರೈತ ವಿರೋಧಿಯಾಗಿದೆ. ಸರ್ಕಾರ ರಾಜ್ಯದಿಂದ ತಮಿಳುನಾಡಿಗೆ ನೀರು ಹರಿಸದೆ, ರಾಜ್ಯದ ರೈತರನ್ನು ರಕ್ಷಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

- Advertisement -

ಮೈಸೂರು ಗ್ರಾಮಾಂತರದ ಇಲವಾಲದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ ರೈತರು ರೈತ ಸಂಘದ ತಾಲೂಕು ಅಧ್ಯಕ್ಷ ಆನಂದೂರು ಪ್ರಭಾಕರ್ ನೇತೃತ್ವದಲ್ಲಿ ಉಪ ತಹಶೀಲ್ದಾರ್‌ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

“ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ನೀರಾವರಿ ಜಲಾಶಯಗಳಿಗೆ ಒಳಹರಿವು ಕಡಿಮೆಯಾಗಿದೆ. ಅಲ್ಲದೆ ಈವರೆಗೆ ಜಲಾಶಯಗಳ ನೀರಿನ ಶೇಖರಣೆಯೂ ಕಡಿಮೆ ಇರುವುದು ಕಳವಳಕಾರಿಯಾಗಿದೆ. ಹಾಗಾಗಿ ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸಬಾರದು” ಎಂದು ಆಗ್ರಹಿಸಿದರು.

ಇಲವಾಲ ರಸ್ತೆ ತಡೆ

“ಉಪಯೋಗಿಸಲು ಸಾಧ್ಯವಿರುವ ನೀರು ಕಡಿಮೆ ಇದೆ. ಕಾವೇರಿ ನೀರು ನಿರ್ವಹಣಾ ಸಮಿತಿಯ ನಿರ್ದೇಶನದಂತೆ ರಾಜ್ಯದ ಜಲಾಶಯಗಳಿಂದ ತಮಿಳುನಾಡಿಗೆ 15 ದಿನಗಳವರೆಗೆ 5 ಸಾವಿರ ಕ್ಯೂಸೆಕ್‌ ನೀರು ಹರಿಸಿದರೆ ಅಚ್ಚುಕಟ್ಟಿನಲ್ಲಿ ಬೆಳೆದಿರುವ ಫಸಲು ಉಳಿಸುವುದಿರಲಿ, ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಲಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ತಮಿಳುನಾಡಿಗೆ ನೀರು ಬಿಡದಂತೆ ಆಹೋರಾತ್ರಿ ಧರಣಿ

“ತಮಿಳುನಾಡಿಗೆ ನೀರು ಹರಿಸದಿರಲು ಸ್ಪಷ್ಟ ತೀರ್ಮಾನ ಮಾಡಿ, ಕಾನೂನು ಹೋರಾಟಕ್ಕೆ ಮುಂದಾಗಬೇಕು. ಸ್ಪಷ್ಟ ಸಂಕಷ್ಟ ಸೂತ್ರದ ಮಾನದಂಡ ಇರದೇ ಇರುವುದು ಈ ಸಮಸ್ಯೆಗೆ ಮೂಲ ಕಾರಣವಾಗಿದೆ. ಸ್ಪಷ್ಟ ಸಂಕಷ್ಟ ಸೂತ್ರವನ್ನು ರೂಪಿಸಲು ತಾವು ಕೇಂದ್ರದ ಮೇಲೆ ಒತ್ತಡ ಹೇರಬೇಕು. ಅಗತ್ಯ ಇರುವ ಇತರೆ ಎಲ್ಲ ಕ್ರಮಗಳನ್ನು ಅನುಸರಿಸಿ ರಾಜ್ಯದ ರೈತರನ್ನು ರಕ್ಷಿಸಲೇಬೇಕು” ಎಂದು ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ರೈತಸಂಘದ ಗೌರವಾಧ್ಯಕ್ಷ ನಾಗನಳ್ಳಿ ವಿಜಯೇಂದ್ರ, ಮಹೇಶ್‌ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಹಲವು ರೈತರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...