ಮೈಸೂರು | ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಇಡೀ ಕಾರ್ಖಾನೆ ಭಸ್ಮ

Date:

ಪಟಾಕಿ ದಾಸ್ತಾನು ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಇಡೀ ಕಾರ್ಖಾನೆಯೇ ಸುಟ್ಟುಹೋಗಿರುವ ಘಟನೆ ಮೈಸೂರು ನಗರದ ಹೊರವಲಯದ ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ಪಟಾಕಿ ದಾಸ್ತಾನು ಕಾರ್ಖಾನೆಯಲ್ಲಿ ಸುಮಾರು 1.30ಕ್ಕೆ ಬೆಂಕಿ ಹೊತ್ತಿಕೊಂಡಿದೆ. ಸುತ್ತಮುತ್ತಲಿನ ನಾಲ್ಕು ಕಾರ್ಖಾನೆಗಳಿಗೂ ಹರಡಿದೆ. ಸ್ಥಳಕ್ಕೆ ಸುಮಾರು 15 ಅಗ್ನಿಶಾಮಕ ದಳದ ವಾಹನಗಳು ಧಾವಿಸಿದ್ದು, ಬೆಂಕಿ ನಂದಿಸುವ ಕೆಲಸಕ್ಕೆ ಮುಂದಾಗಿವೆ. 

ಈ ಸುದ್ದಿ ಓದಿದ್ದೀರಾ? ಗದಗ | ಕೋಮು ಸೌಹಾರ್ದತೆಗೆ ಸಾಕ್ಷಿಯಾದ ಶರಣ ಬಸವೇಶ್ವರ ದೇವಸ್ಥಾನ

ಬೆಂಕಿ ನಂದಿಸಲು ಹರಸಾಹಸಪಟ್ಟ ಅಗ್ನಿಶಾಮಕ ಸಿಬ್ಬಂದಿ

ಮೈಸೂರು ನಗರದ ಸರಸ್ವತಿಪುರಂ ಅಗ್ನಿ ಶಾಮಕ ಠಾಣೆಯ 3 ಅಗ್ನಿ ಶಾಮಕ ವಾಹನಗಳು, ಬನ್ನಿಮಂಟಪದ 3, ಹೆಬ್ಬಾಳದ 3, ಆರ್‌ಬಿಐನ ಎರಡು, ಹುಣಸೂರು ನಗರದ ಒಂದು, ಟಿ ನರಸೀಪುರದ ಒಂದು, ಕೆ ಆರ್ ನಗರದ 1 ಹಾಗೂ ಶ್ರೀರಂಗಪಟ್ಟಣದ 1 ಅಗ್ನಿಶಾಮಕ ವಾಹನ ಸೇರಿದಂತೆ 15 ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ. ಈ ಬೆಂಕಿ ಅವಘಡ ಸಂಭವಿಸಿರುವ ಸ್ವಲ್ಪ ದೂರದಲ್ಲೇ ಇನ್ಫೋಸಿಸ್ ಕ್ಯಾಂಪಸ್ ಕೂಡ ಇದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಕಾಡಂಚಿನ ಗ್ರಾಮದಲ್ಲಿ ಶಾಸಕ ದರ್ಶನ್ ಗ್ರಾಮ ವಾಸ್ತವ್ಯ

ನಂಜನಗೂಡು ತಾಲೂಕಿನ ಕಾಡಂಚಿನ ಗ್ರಾಮದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್‌ ಗ್ರಾಮ ವಾಸ್ತವ್ಯ...

ಕಲಬುರಗಿ | ಹೈ-ಕ ಭಾಗದ ಸಾಹಿತಿಗಳೆಂಬ ಹಣೆಪಟ್ಟಿ ಏಕೆ: ಡಾ. ಚಿದಾನಂದ ಸಾಲಿ

ದಲಿತ ಸಾಹಿತಿಗಳು ಅಂತ ಇರುವ ಹಾಗೆ, ಬ್ರಾಹ್ಮಣ ಕತೆಗಾರರು ಎಂಬ ಹೆಸರು...

ಮದ್ಯದಂಗಡಿ ಬೇಡ – ನೀರು, ಆರೋಗ್ಯ, ಆಹಾರ ಕೊಡಿ; ಸ್ಲಂ ಜನಾಂದೋಲನ ಒತ್ತಾಯ

ನಾಗರೀಕ ಸಮಾಜಕ್ಕೆ ಬೇಕಿರುವುದು ನೀರು, ನೈರ್ಮಲ್ಯ, ಆರೋಗ್ಯ ಮತ್ತು ಆಹಾರವೇ ಹೊರತು,...

ರಾಯಚೂರು | 9 ವರ್ಷಗಳಿಂದ ಅಂಗನವಾಡಿ ಕಟ್ಟಡಕ್ಕಿಲ್ಲ ಉದ್ಘಾಟನೆ ಭಾಗ್ಯ

ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ರೋಡಲ ಬಂಡಾ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ...