ಮೈಸೂರು | ಸರ್ಕಾರಗಳು ಬದಲಾದರೂ ಶೋಷಣೆ ನೀತಿಗಳು ಬದಲಾಗಿಲ್ಲ: ಚಂದ್ರಶೇಖರ ಮೇಟಿ

Date:

ದೇಶ ಹಾಗೂ ರಾಜ್ಯದಲ್ಲಿ ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ ಸಹ ಬಂಡವಾಳಶಾಹಿ ವರ್ಗದ ಪರವಾದ ನೀತಿಗಳನ್ನು ಪೈಪೋಟಿಯ ಆಧಾರದಲ್ಲಿ ಜಾರಿಗೆ ತರುತ್ತಿವೆ. ಸರ್ಕಾರಗಳು ಬದಲಾಗುತ್ತಿವೆ ವಿನಃ ಶೋಷಣೆಯ ನೀತಿಗಳು ಬದಲಾಗುತ್ತಲೇ ಇಲ್ಲ ಎಂದು ಆಲ್‌ ಇಂಡಿಯಾ ಯುನೈಟೆಡ್‌ ಟ್ರೇಡ್‌ ಯೂನಿಯನ್‌ ಸೆಂಟರ್‌ (ಎಐಯುಟಿಯುಸಿ) ಮೈಸೂರು ಜಿಲ್ಲಾ ಸಂಚಾಲಕ ಚಂದ್ರಶೇಖರ ಮೇಟಿ ಅಸಮಾಧಾನ ವ್ಯಕ್ತಪಡಿಸಿದರು.

- Advertisement -

ದೇಶದಾದ್ಯಂತ ದುಡಿಯುವ ಜನರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ಒತ್ತಾಯಿಸಿ ಫೆ.11 ರಿಂದ ಎಐಯುಟಿಯುಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿತ್ತು. ಇದರ ಅಂಗವಾಗಿ ಇಂದು ನಗರದ ರಾಮಸ್ವಾಮಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, “ಕೇಂದ್ರ ಸರ್ಕಾರ ಕಾರ್ಮಿಕ ಕಾಯ್ದೆಗಳನ್ನು ರದ್ದು ಮಾಡಿ, ಅದರ ಜಾಗದಲ್ಲಿ ಮಾಲಿಕರ ಪರವಾಗಿರುವ ಕಾರ್ಮಿಕ ಸಂಹಿತೆಯನ್ನು ಜಾರಿಗೆ ತಂದಿದೆ. ರಾಜ್ಯ ಸರ್ಕಾರ ಜಾಗತಿಕ ಹೂಡಿಕೆದಾರರ ಸಮ್ಮೇಳನವನ್ನು ನಡೆಸಿ ಬಂಡವಾಳಶಾಹಿಗಳಿಗೆ ʼನಿಮಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಅಗ್ಗವಾಗಿ ನೀಡುತ್ತೇವೆ, ನೀವು ಇಲ್ಲಿ ಬಂಡವಾಳವನ್ನು ‌ಹೂಡಿ ಸಂಪತ್ತು ಗಳಿಸಿʼ ಎನ್ನುತ್ತಿದೆ. ಆದರೆ ಕಾರ್ಖಾನೆಗಳಿಗೆ ಭೂಮಿ ನೀಡಿದ ರೈತರಿಗಾಗಲೀ, ಅಥವಾ ಸ್ಥಳೀಯರಿಗೆ ಖಾಯಂ ಉದ್ಯೋಗಗಳನ್ನು ನೀಡದೆ ಹೊರಗುತ್ತಿಗೆಯ ಹೆಸರಿನಲ್ಲಿ ಶೋಷಿಸಲಾಗುತ್ತಿದೆ. ಇದನ್ನು ಪ್ರಶ್ನಿಸಿದರೆ ಹೋರಾಟಗಾರರೆಲ್ಲರೂ ಅಭಿವೃದ್ಧಿಯ ವಿರೋಧಿಗಳು ಎಂದು ಪ್ರಚಾರ ಮಾಡಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಕಳೆದ ಹತ್ತು ವರ್ಷಗಳಿಂದ ಕಾರ್ಮಿಕರಿಗೆ ನೀಡಬೇಕಾದ ಕನಿಷ್ಟ ವೇತನವನ್ನು ಪರಿಷ್ಕರಿಸಿಲ್ಲ. 2016ರಲ್ಲಿ ಕನಿಷ್ಟ ವೇತನವನ್ನು ಕೇವಲ 1000ರೂ ಹೆಚ್ಚಳ ಮಾಡಿದಾಗ, ಕೈಗಾರಿಕಾ ಮಾಲೀಕರು ಈ ಪರಿಷ್ಕರಣೆ ನಮಗೆ ಹೊರೆಯಾಗುತ್ತದೆ ಎಂದು ಕೋರ್ಟಿನ ‌ಮೂಲಕ ತಡೆಯಾಜ್ಞೆ ತಂದರು. ಆದರೆ ಇದೇ ಮಾಲೀಕರು ಈಗ ಕಾರ್ಮಿಕರಿಗೆ ದಿನಕ್ಕೆ 12 ಗಂಟೆ ದುಡಿಯಿರಿ, 15 ಗಂಟೆ ಕೆಲಸ ಮಾಡಿ ಎಂದು ಒತ್ತಾಯಿಸುತ್ತಿದ್ದಾರೆ. ಸರ್ಕಾರಗಳು ‌ಸಹ ಈ ಮಾತುಗಳಿಗೆ ಮೌನ ಸಮ್ಮತಿಯನ್ನು ನೀಡುತ್ತಿವೆ” ಎಂದು ದೂರಿದರು.

“ಇಂತಹ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರು ಬೆಂಗಳೂರಿನಲ್ಲಿ ನಡೆಸಿದ ಹೋರಾಟದ ಮಾದರಿಯಲ್ಲಿ ಬಲಿಷ್ಠವಾದ ಸಂಘಟಿತ ಹೋರಾಟವನ್ನು ನಡೆಸಿದರೆ, ಎಂತಹ ಸರ್ಕಾರವನ್ನೂ ಬಗ್ಗಿಸಬಹುದು. ಈ ನಿಟ್ಟಿನಲ್ಲಿ ಹೋರಾಟವನ್ನು ಕಟ್ಟಬೇಕು” ಎಂದು ಕರೆ ನೀಡಿದರು.

ಜಿಲ್ಲಾ ‌ಸಮಿತಿಯ ಅಧ್ಯಕ್ಷ ‌ಕಾಮ್ರೇಡ್ ವಿ ಯಶೋಧರ್ ಮಾತನಾಡಿ, “ಇಂದು ಎಲ್ಲಾ ಕ್ಷೇತ್ರಗಳಲ್ಲೂ ಬೆಲೆ ಏರಿಕೆಯಾಗುತ್ತಿದೆ. ಆದರೆ ಎಷ್ಟೇ ದುಡಿದರೂ ಸಹ ಸಂಬಳಗಳಾಗಲಿ, ಆದಾಯವಾಗಲಿ ಹೆಚ್ಚಳವಾಗುತ್ತಿಲ್ಲ. ಇದರಿಂದಾಗಿ ಜನ ಸಾಮಾನ್ಯರು, ಕಾರ್ಮಿಕರು, ರೈತರು ಸಂಕಷ್ಟಕ್ಕೆ ಈಡಾಗುತ್ತಿದ್ದಾರೆ. ಇನ್ನೊಂದು ಕಡೆ ಶ್ರಮವನ್ನು ಶೋಷಿಸುವ ಬಂಡವಾಳಿಗರ ಆಸ್ತಿ ‌ಕೇವಲ ಐದು ವರ್ಷಗಳಲ್ಲಿ ದುಪ್ಪಟ್ಟಾಗುತ್ತಿದೆ. ಕಾರ್ಮಿಕರು ದನಿ ಎತ್ತದಂತೆ ಹಕ್ಕುಗಳನ್ನು ದಮನಗೊಳಿಸಲಾಗುತ್ತಿದೆ. ದುಡಿಯುವ ಜನತೆಯ ಒಗ್ಗಟ್ಟನ್ನು ಜಾತಿ, ಧರ್ಮಗಳ ಹೆಸರಿನಲ್ಲಿ ಮುರಿಯಲು ಪ್ರಯತ್ನಿಸಲಾಗುತ್ತಿದೆ. ಇಂತಹ ‌ತಂತ್ರಗಳನ್ನು ವಿಫಲಗೊಳಿಸಿ ಕಾರ್ಮಿಕರು ಐಕ್ಯ ಹೋರಾಟ ಮಾಡಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಕೊಡಗು | ಪಂಜೆ ಮಂಗೇಶರಾಯರ 150ನೇ ವರ್ಷಾಚರಣೆ; ಕಸಾಪ ಜಿಲ್ಲಾಧ್ಯಕ್ಷರಿಂದ ಆಹ್ವಾನ ಪತ್ರಿಕೆ ಬಿಡುಗಡೆ

ಪ್ರತಿಭಟನೆಯಲ್ಲಿ ಸಂಘಟನೆಯ ಜಿಲ್ಲಾ ಸಮಿತಿಯ ಜಂಟಿ ಕಾರ್ಯದರ್ಶಿಗಳಾದ ಮುದ್ದುಕೃಷ್ಣ, ಪುಟ್ಟರಾಜು, ಜಿಲ್ಲಾ ಸಮಿತಿಯ ಸದಸ್ಯರಾದ ಸಂಧ್ಯಾ ಪಿ ಎಸ್, ಹರೀಶ್ ಎಸ್ ಎಚ್, ಕಾರ್ಮಿಕರಾದ ರವಿಕುಮಾರ್, ರಮೇಶ್, ಮಹದೇವಸ್ವಾಮಿ, ನಾಗೇಂದ್ರ, ಆರವಿಂದ್, ಅಕ್ಕಮ್ಮ, ಮಹೇಶ್ ಸೇರಿದಂತೆ ಹಲವು ‌ಕಾರ್ಖಾನೆಗಳ ಕಾರ್ಮಿಕರು, ಮೈಸೂರು ಮೆಡಿಕಲ್ ಕಾಲೇಜು ಕಾರ್ಮಿಕರು, ಆಶಾ ಕಾರ್ಯಕರ್ತೆಯರು ಮತ್ತು ಬಿಸಿಯೂಟ ಕಾರ್ಯಕರ್ತೆಯರು ಭಾಗಿಯಾಗಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...

ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ

ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ...