ಮೈಸೂರು | ಮುಡಾ ಪ್ರಕರಣದ ವರದಿ ಸಲ್ಲಿಕೆಗೆ ಮೇ 31ರವರೆಗೆ ಗಡುವು ವಿಸ್ತರಣೆ

Date:

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ ಪ್ರಕರಣ)ದ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಬಗ್ಗೆ ವರದಿ ಸಲ್ಲಿಸಲು ಏಕಸದಸ್ಯ ನ್ಯಾಯಾಂಗ ಆಯೋಗಕ್ಕೆ ನೀಡಿದ್ದ ಗಡುವನ್ನು ರಾಜ್ಯ ಸರ್ಕಾರ ಮೇ 31ರವರೆಗೆ ವಿಸ್ತರಿಸಿದೆ.

- Advertisement -

ಆಯೋಗವು ಆರಂಭದಲ್ಲಿ ಜನವರಿ ಮಧ್ಯದ ವೇಳೆಗೆ ತನ್ನ ವರದಿಯನ್ನು ಸಲ್ಲಿಸುವುದಾಗಿ ಹೇಳಲಾಗಿತ್ತು. ಆದರೆ, ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಪಿ ಎನ್ ದೇಸಾಯಿ ನೇತೃತ್ವದ ಆಯೋಗವು ಹೆಚ್ಚುವರಿ ಸಮಯವನ್ನು ಕೋರಿದ್ದರಿಂದ, ಸರ್ಕಾರವು ಗಡುವನ್ನು ವಿಸ್ತರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಮುಡಾದಲ್ಲಿ ಅವ್ಯವಹಾರದ ಆರೋಪಗಳು ಮತ್ತು ಅಕ್ರಮಗಳ ಬಗ್ಗೆ ಪತ್ರಿಕೆಗಳಲ್ಲಿ ವರದಿಯಾದ ನಂತರ, ಸರ್ಕಾರವು ಜುಲೈ 2024ರ ಮಧ್ಯದಲ್ಲಿ ವಿಚಾರಣಾ ಆಯೋಗದ ಕಾಯ್ದೆಯಡಿ ಆಯೋಗವನ್ನು ರಚಿಸಿ, ತನ್ನ ವರದಿಗಳನ್ನು ಸಲ್ಲಿಸಲು ಆರು ತಿಂಗಳ ಗಡುವನ್ನು ನಿಗದಿಪಡಿಸಿತ್ತು. ಆದರೆ 2025ರ ಜನವರಿ ಮಧ್ಯದಲ್ಲಿ ಗಡವು ಕೊನೆಗೊಂಡಿದೆ. ಇದೀಗ ಆಯೋಗವು ಹೆಚ್ಚಿನ ಸಮಯವನ್ನು ಕೋರಿದ್ದರಿಂದ, ಸರ್ಕಾರವು ಗಡುವನ್ನು ಇನ್ನೂ ನಾಲ್ಕೂವರೆ ತಿಂಗಳಿಗೆ ವಿಸ್ತರಿಸಿದೆ.

ಈ ಸುದ್ದಿ ಓದಿದ್ದೀರಾ? ಬೆಂ.ಗ್ರಾ | ನೂತನ ಜಿಲ್ಲಾಧಿಕಾರಿಯಾಗಿ ಎ ಬಿ ಬಸವರಾಜು ನೇಮಕ

“ನಗರ ಸಂಸ್ಥೆಯಲ್ಲಿನ ಆರೋಪಗಳ ಬಗ್ಗೆ ತನಿಖೆ ನಡೆಸುತ್ತಿರುವ ಪಿ ಎನ್ ದೇಸಾಯಿ ಆಯೋಗದ ಗಡುವನ್ನು ಸರ್ಕಾರ ಮೇ 31ರವರೆಗೆ ವಿಸ್ತರಿಸಿದೆ” ಎಂದು ಮುಡಾ ಕಾರ್ಯದರ್ಶಿ ಪ್ರಸನ್ನ ಕುಮಾರ್ ದೃಢಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...