ಮೈಸೂರು | ಗ್ರೀನ್ ಬರ್ಡ್ಸ್ ಠೇವಣಿದಾರರಿಗೆ ಹಣ ನೀಡಲು ವಿಳಂಬ: ಉಗ್ರ ಪ್ರತಿಭಟನೆ ಎಚ್ಚರಿಕೆ

Date:

ಮೈಸೂರು ನಗರದ ಗನ್ ಹೌಸ್ ವೃತ್ತದ ಬಳಿಯಿರುವ ಕುವೆಂಪು ಪಾರ್ಕಿನಲ್ಲಿ ಗ್ರೀನ್ ಬರ್ಡ್ಸ್ ಆಗ್ರೋ ಫಾರಂ ಕಂಪನಿಯಿಂದ ವಂಚನೆಗೊಳಗಾದ ಠೇವಣಿದಾರರು ಹಾಗೂ ಕಾರ್ಯಕರ್ತರ ಸಭೆ ನಡೆಯಿತು. ಸಭೆಯಲ್ಲಿ ರಾಜ್ಯ ರೈತ ಸಂಘಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಮಾತನಾಡಿ, ಸಕ್ಷಮ ಪ್ರಾಧಿಕಾರದ ವಿಳಂಬ ನೀತಿಯಿಂದ ಸಾವಿರಾರು ಠೇವಣಿದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿದರು.

- Advertisement -

ಗ್ರೀನ್ ಬರ್ಡ್ಸ್ ಆಗ್ರೋ ಫಾರಂ ಲಿಮಿಟೆಡ್ ಕಂಪನಿಯಿಂದ ವಂಚನೆಗೆ ಒಳಗಾದ ಠೇವಣಿದಾರರಿಗೆ ಶೀಘ್ರ ಹಣ ಮರುಪಾವತಿ ಮಾಡದಿದ್ದಲ್ಲಿ, ಬೆಂಗಳೂರಿನ ವಿವಿ ಟವರ್‌ನಲ್ಲಿರುವ ಸಕ್ಷಮ ಪ್ರಾಧಿಕಾರದ ಕಚೇರಿ ಎದುರು ಉಗ್ರ ಪ್ರತಿಭಟನೆ ನಡೆಸುವುದಾಗಿ ಅವರು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ರಾಜ್ಯಾದ್ಯಂತ ಸುಮಾರು ಎರಡು ಲಕ್ಷಕ್ಕೂ ಹೆಚ್ಚು ಬಡವರು, ರೈತ ಮಹಿಳೆಯರು ಮತ್ತು ಕೂಲಿ ಕಾರ್ಮಿಕರು ಸುಮಾರು ₹150 ಕೋಟಿಗೂ ಅಧಿಕ ಹಣ ಹೂಡಿಕೆ ಮಾಡಿದ್ದು, 2013ರಲ್ಲಿ ಕಂಪನಿ ಹಣ ಮರುಪಾವತಿ ಮಾಡದೇ ವಂಚನೆ ಎಸಗಿದೆ ಎಂದು ಹೇಳಿದರು. ಆ ಸಂದರ್ಭದಲ್ಲಿ ರಾಜ್ಯಾದ್ಯಂತ ಸುಮಾರು 10 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಸಂಕಷ್ಟಕ್ಕೀಡಾದಾಗ, ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಾವಿರಾರು ಮಂದಿ ಪ್ರತಿಭಟನೆ ನಡೆಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಸ್ವೀಕರಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು ಎಂದರು.

ಆದರೆ, ಕಳೆದ ಹನ್ನೆರಡು ವರ್ಷಗಳಿಂದ ಠೇವಣಿದಾರರಿಗೆ ಹಣ ತಲುಪಿಲ್ಲ. ಸರ್ಕಾರ ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಕಂಪನಿಗೆ ಸೇರಿದ ₹150 ಕೋಟಿಗೂ ಅಧಿಕ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡು ಹರಾಜು ಪ್ರಕ್ರಿಯೆ ಕೈಗೊಂಡಿದ್ದರೂ, ಹಣ ವಿತರಣೆ ಮಾಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು. ವಿಶೇಷ ಸಕ್ಷಮ ಪ್ರಾಧಿಕಾರವು ಎಲ್ಲಾ ಆಸ್ತಿಗಳನ್ನು ಮಾರಾಟ ಮಾಡಿದ ನಂತರವೇ ಹಣ ನೀಡುವುದಾಗಿ ಹೇಳಿ ಪ್ರಕ್ರಿಯೆಯನ್ನು ವಿಳಂಬಗೊಳಿಸುತ್ತಿದೆ ಎಂದರು.

ಈ ನಡುವೆ ಅನೇಕ ಠೇವಣಿದಾರರು ವಯೋಸಹಜ ಹಾಗೂ ಅನಾರೋಗ್ಯ ಕಾರಣಗಳಿಂದ ಮೃತಪಟ್ಟಿದ್ದು, ಕೆಲವರು ಮಾನಸಿಕ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಮಾರು 25ಕ್ಕೂ ಹೆಚ್ಚು ಜನರು ಜೀವ ಕಳೆದುಕೊಂಡಿದ್ದರೂ ಸರ್ಕಾರ ಯಾವುದೇ ಪರಿಹಾರ ನೀಡದೆ ನಿರ್ಲಕ್ಷ್ಯ ತೋರಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಕೊಡಗಿನಲ್ಲಿ ಅಂತರ್ಜಲ ಸಂರಕ್ಷಣೆಗೆ ಕಟ್ಟುನಿಟ್ಟಿನ ಕ್ರಮ: ಜಿಲ್ಲಾಧಿಕಾರಿ ಸೂಚನೆ

ಸಭೆಯಲ್ಲಿ ಠೇವಣಿದಾರರ ಹೋರಾಟ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್, ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಆತ್ತಹಳ್ಳಿ ದೇವರಾಜ್ ಸೇರಿದಂತೆ ಪೂರ ಜಗದೀಶ್, ಚಿಕ್ಕನಾಯಕ, ನಂಜನಗೂಡು ಶಿವಕುಮಾರ್, ತಗಡೂರು ಮಾದೇವಪ್ಪ, ಟಿ.ನರಸೀಪುರ ರೂಪಾ, ಸಿದ್ದರಾಜು, ಷಡಕ್ಷರಿ, ಶ್ರೀಕಂಠ, ನಂದನ್, ಹೇಮೇಶ್, ಮಂಜುನಾಥ್, ಬಸವರಾಜ್, ಅಶೋಕ್, ರಾಜಯ್ಯ ಶೆಟ್ಟಿ, ಗಿರೀಶ್, ರಾಜೇಶ್, ವೆಂಕಟೇಶ್, ಬಸಮ್ಮ, ಸಂತೋಷ್ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | 2018ರಿಂದ ಬಾಕಿ ಉಳಿದ ನಿವೇಶನ ಹಕ್ಕು: ಕೊರಗ ಸಮುದಾಯದ ಅರೆಬೆತ್ತಲೆ ಮೆರವಣಿಗೆ

ವಾಮಂಜೂರು ಮಂಗಳಜ್ಯೋತಿಯ ಕೊರಗ ಸಮುದಾಯದ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ಹಾಗೂ...

ತರೀಕೆರೆ | ಅ. 15ರ ವರೆಗೆ ಕೈಗಾರಿಕಾ ತರಬೇತಿಗೆ ಅವಕಾಶ 

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಖಾಲಿ...

ಮಂಗಳೂರು | ಬರದ ಸಂಕಷ್ಟದ ನಡುವೆ ಕಂಬಳ ಬೇಡ: ಕೋಣಗಳ ಮಾಲೀಕರಿಗೆ ಎ.ಟಿ. ರಾಮಸ್ವಾಮಿ ಮನವಿ

ರಾಜ್ಯದ 200ಕ್ಕೂ ಹೆಚ್ಚು ತಾಲೂಕುಗಳು ಬರ ಪರಿಸ್ಥಿತಿಯಿಂದ ತತ್ತರಿಸುತ್ತಿದ್ದು, ರೈತರು ಹಾಗೂ...

ಚಿಕ್ಕಮಗಳೂರು | ಮಹಿಳೆಗೆ ದೌರ್ಜನ್ಯ ಆರೋಪದಡಿ ಅರ್ಚಕ ಬಂಧನ 

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಮೂಲದ ಅರ್ಚಕ ಸತೀಶ್ ಪಾತ್ರಿ ಎಂಬಾತ ದೆವ್ವ...