ಕಾನೂನು ಬಾಹಿರವಾಗಿ ಕುದುರೆ ಜೂಜಾಟ ಆಡುತ್ತಿದ್ದವರ ಮೇಲೆ ದಾಳಿ ನಡೆಸಿರುವ ಮೈಸೂರಿನ ಸಿಸಿಬಿ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮೈಸೂರು ನಗರದ ಸಿಸಿಬಿ ಘಟಕದ ಪೊಲೀಸ್‌ನವರಿಗೆ ನವೆಂಬರ್ 13ರಂದು ಮೈಸೂರಿನ ಹೆಬ್ಬಾಳ್ 2 ನೇ ಹಂತ 4ನೇ ಕ್ರಾಸ್‌ನ ಮನೆಯೊಂದರಲ್ಲಿ ಆರೋಪಿಯು ತನ್ನ ಸ್ನೇಹಿತನ ಮೂಲಕ ಮೈಸೂರಿನ ರೇಸ್ ಕೋರ್ಸ್‌ನಲ್ಲಿ ನಡೆಯುತ್ತಿರುವ ಕುದುರೆ ರೇಸ್ ಫಲಿತಾಂಶವನ್ನು ಮುಂಚಿತವಾಗಿ ತಿಳಿದುಕೊಂಡು ತನ್ನ ಮೊಬೈಲ್ ಮೂಲಕ ಸಾರ್ವಜನಿಕರಿಂದ ಹಣವನ್ನು ಪಣವನ್ನಾಗಿ ಇಟ್ಟುಕೊಂಡು ಜೂಜಾಟವನ್ನು ನಡೆಸುತ್ತಿರುವುದಾಗಿ ದೊರೆತ ಖಚಿತ ಮಾಹಿತಿ ಅನುಸಾರ ದಾಳಿ ನಡೆಸಿದ್ದಾರೆ.
ಮೈಸೂರು ನಗರದ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿದಾಗ ಅಕ್ರಮವಾಗಿ ಲಾಭಗಳಿಸುವ ಉದ್ದೇಶದಿಂದ ಕುದುರೆ ರೇಸ್‌ನ ಜೂಜಾಟದಲ್ಲಿ ತೊಡಗಿದ್ದ ಆರೋಪಿಗಳನ್ನು ವಶಕ್ಕೆ ಪಡೆದು ಕೃತ್ಯಕ್ಕೆ ಉಪಯೋಗಿಸಿದ್ದ ಎರಡು ಮೊಬೈಲ್ ಫೋನ್, ಒಂದು ಟ್ಯಾಬ್ ಮತ್ತು ಇತರೆ ಪರಿಕರಗಳನ್ನು ವಶಪಡಿಸಿಕೊಂಡು ಮುಂದಿನ ಕ್ರಮಕ್ಕಾಗಿ ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.
ಇದನ್ನು ಓದಿದ್ದೀರಾ? ಮಂಗಳೂರು | ಡಿ.3-4ರಂದು ‘ಬಹುಸಂಸ್ಕೃತಿ ಉತ್ಸವ’: ಲಾಂಛನ ಬಿಡುಗಡೆ
ಮೈಸೂರು ನಗರದ ಡಿಸಿಪಿ ಮುತ್ತುರಾಜ್ ಅಪರಾಧ ಮತ್ತು ಸಂಚಾರ ವಿಭಾಗರವರ ಮಾರ್ಗದರ್ಶನದಲ್ಲಿ, ಸಿಸಿಬಿ ವಿಭಾಗದ ಎಸಿಪಿ ಎಸ್ ಎನ್ ಸಂದೇಶ್ ಕುಮಾರ್ ನೇತೃತ್ವದಲ್ಲಿ, ಸಿಸಿಬಿ ಘಟಕದ ಪಿಎಸ್ಐ ಮಾರುತಿ ಅಂತರಗಟ್ಟಿ ಹಾಗೂ ಸಿಬ್ಬಂದಿಗಳಾದ ರಾಘವೇಂದ್ರ, ಮಂಜುನಾಥ್ ಕಾರ್ಯಾಚರಣೆಯನ್ನು ಕೈಗೊಂಡಿದ್ದರು.
