ಮೈಸೂರು | ಕಾನೂನು ಬಾಹಿರವಾಗಿ ಕುದುರೆ ಜೂಜಾಟ: ಇಬ್ಬರು ಆರೋಪಿಗಳ ಬಂಧನ

Date:

Advertisements

ಕಾನೂನು ಬಾಹಿರವಾಗಿ ಕುದುರೆ ಜೂಜಾಟ ಆಡುತ್ತಿದ್ದವರ ಮೇಲೆ ದಾಳಿ ನಡೆಸಿರುವ ಮೈಸೂರಿನ ಸಿಸಿಬಿ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮೈಸೂರು ನಗರದ ಸಿಸಿಬಿ ಘಟಕದ ಪೊಲೀಸ್‌ನವರಿಗೆ ನವೆಂಬರ್ 13ರಂದು ಮೈಸೂರಿನ ಹೆಬ್ಬಾಳ್ 2 ನೇ ಹಂತ 4ನೇ ಕ್ರಾಸ್‌ನ ಮನೆಯೊಂದರಲ್ಲಿ ಆರೋಪಿಯು ತನ್ನ ಸ್ನೇಹಿತನ ಮೂಲಕ ಮೈಸೂರಿನ ರೇಸ್ ಕೋರ್ಸ್‌ನಲ್ಲಿ ನಡೆಯುತ್ತಿರುವ ಕುದುರೆ ರೇಸ್ ಫಲಿತಾಂಶವನ್ನು ಮುಂಚಿತವಾಗಿ ತಿಳಿದುಕೊಂಡು ತನ್ನ ಮೊಬೈಲ್ ಮೂಲಕ ಸಾರ್ವಜನಿಕರಿಂದ ಹಣವನ್ನು ಪಣವನ್ನಾಗಿ ಇಟ್ಟುಕೊಂಡು ಜೂಜಾಟವನ್ನು ನಡೆಸುತ್ತಿರುವುದಾಗಿ ದೊರೆತ ಖಚಿತ ಮಾಹಿತಿ ಅನುಸಾರ ದಾಳಿ ನಡೆಸಿದ್ದಾರೆ.

ಮೈಸೂರು ನಗರದ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿದಾಗ ಅಕ್ರಮವಾಗಿ ಲಾಭಗಳಿಸುವ ಉದ್ದೇಶದಿಂದ ಕುದುರೆ ರೇಸ್‌ನ ಜೂಜಾಟದಲ್ಲಿ ತೊಡಗಿದ್ದ ಆರೋಪಿಗಳನ್ನು ವಶಕ್ಕೆ ಪಡೆದು ಕೃತ್ಯಕ್ಕೆ ಉಪಯೋಗಿಸಿದ್ದ ಎರಡು ಮೊಬೈಲ್ ಫೋನ್, ಒಂದು ಟ್ಯಾಬ್ ಮತ್ತು ಇತರೆ ಪರಿಕರಗಳನ್ನು ವಶಪಡಿಸಿಕೊಂಡು ಮುಂದಿನ ಕ್ರಮಕ್ಕಾಗಿ ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ? ಮಂಗಳೂರು | ಡಿ.3-4ರಂದು ‘ಬಹುಸಂಸ್ಕೃತಿ ಉತ್ಸವ’: ಲಾಂಛನ ಬಿಡುಗಡೆ

ಮೈಸೂರು ನಗರದ ಡಿಸಿಪಿ ಮುತ್ತುರಾಜ್ ಅಪರಾಧ ಮತ್ತು ಸಂಚಾರ ವಿಭಾಗರವರ ಮಾರ್ಗದರ್ಶನದಲ್ಲಿ, ಸಿಸಿಬಿ ವಿಭಾಗದ ಎಸಿಪಿ ಎಸ್ ಎನ್ ಸಂದೇಶ್‌ ಕುಮಾರ್ ನೇತೃತ್ವದಲ್ಲಿ, ಸಿಸಿಬಿ ಘಟಕದ ಪಿಎಸ್ಐ ಮಾರುತಿ ಅಂತರಗಟ್ಟಿ ಹಾಗೂ ಸಿಬ್ಬಂದಿಗಳಾದ ರಾಘವೇಂದ್ರ, ಮಂಜುನಾಥ್ ಕಾರ್ಯಾಚರಣೆಯನ್ನು ಕೈಗೊಂಡಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X